ETV Bharat / city

ಮಂಗಳೂರಿನ ನರ್ಸಿಂಗ್ ಕಾಲೇಜಿನಲ್ಲಿ 10 ಕೊರೊನಾ ಕೇಸ್: ಕಂಟೋನ್ಮೆಂಟ್ ಜೋನ್ ಘೋಷಣೆ

ಮಂಗಳೂರಿನ ಖಾಸಗಿ ನರ್ಸಿಂಗ್ ಕಾಲೇಜಿನಲ್ಲಿ 10 ಕೊರೊನಾ ಪ್ರಕರಣಗಳು ಪತ್ತೆಯಾಗಿದ್ದು, 7 ದಿನಗಳ ಕಾಲ ತರಗತಿ ನಡೆಸದಂತೆ ಜಿಲ್ಲಾಡಳಿತ ಸೂಚಿಸಿದೆ ಎಂದು ತಿಳಿದು ಬಂದಿದೆ.

corona cases found in Mangaluru Nursing college,ಮಂಗಳೂರು ಕಾಲೇಜಿನಲ್ಲಿ ಕೊರೊನಾ
ಮಂಗಳೂರಿನ ನರ್ಸಿಂಗ್ ಕಾಲೇಜಿನಲ್ಲಿ 10 ಕೊರೊನಾ ಕೇಸ್
author img

By

Published : Dec 10, 2021, 6:45 PM IST

ಮಂಗಳೂರು: ನಗರದ ಖಾಸಗಿ ನರ್ಸಿಂಗ್ ಕಾಲೇಜಿನಲ್ಲಿ 10 ಕೊರೊನಾ ಪ್ರಕರಣಗಳು ಪತ್ತೆಯಾಗಿದ್ದು, ಕಾಲೇಜನ್ನು ಕಂಟೋನ್ಮೆಂಟ್ ಝೋನ್ ಎಂದು ಘೋಷಿಸಲಾಗಿದೆ. ಈ ಕಾಲೇಜಿನಲ್ಲಿ ಗುರುವಾರ 2 ಮತ್ತು ಇಂದು 8 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ.

ಈ ಹಿನ್ನೆಲೆಯಲ್ಲಿ ಕಾಲೇಜನ್ನು ಕಂಟೋನ್ಮೆಂಟ್ ಜೋನ್ ಎಂದು ಘೋಷಿಸಿ ನಿರ್ಬಂಧ ಹೇರಲಾಗಿದೆ. ಕಾಲೇಜಿನ ವಿದ್ಯಾರ್ಥಿಗಳು ಮತ್ತು ಸಿಬ್ಬಂದಿ ಸೇರಿದಂತೆ 374 ಮಂದಿಯ ಗಂಟಲು ದ್ರವವನ್ನು ಪರೀಕ್ಷೆಗೆ ಕಳುಹಿಸಲಾಗಿದೆ.

7 ದಿನಗಳ ಕಾಲ ತರಗತಿಗಳನ್ನು ನಡೆಸದಂತೆ ಸೂಚಿಸಲಾಗಿದೆ. ಇಬ್ಬರು ನರ್ಸಿಂಗ್ ಅಧಿಕಾರಿಗಳನ್ನು ಕಾಲೇಜಿನ ಬಗ್ಗೆ ‌ನಿಗಾವಹಿಸಲು ನೇಮಕ ಮಾಡಲಾಗಿದೆ. ಪಾಸಿಟಿವ್ ಬಂದ ವಿದ್ಯಾರ್ಥಿಗಳನ್ನು ಪ್ರತ್ಯೇಕವಾಗಿ ಇಟ್ಟು ಚಿಕಿತ್ಸೆ ನೀಡಲಾಗುತ್ತಿದೆ ಎಂದು ದ.ಕ. ಜಿಲ್ಲಾಡಳಿತ ಮೂಲಗಳು ತಿಳಿಸಿದೆ.

(ಇದನ್ನೂ ಓದಿ: Watch.. ಮತ್ತೆ ಯಾವತ್ತೂ ಈ ಹಾಡು ಹಾಡುವುದಿಲ್ಲ... ಅಪ್ಪು ನೆನೆದು ಎನ್​ಟಿಆರ್ ಭಾವುಕ)

ETV Bharat Logo

Copyright © 2024 Ushodaya Enterprises Pvt. Ltd., All Rights Reserved.