ಮಂಗಳೂರು: ನಗರದ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಕ್ರಮ ಚಿನ್ನ ಸಾಗಾಟವನ್ನು ಪತ್ತೆ ಹಚ್ಚಿದ ಮಂಗಳೂರು ಕಸ್ಟಮ್ಸ್ ಅಧಿಕಾರಿಗಳು ಪ್ರಯಾಣಿಕನನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ಏರ್ ಇಂಡಿಯಾ ವಿಮಾನದಲ್ಲಿ ದುಬೈನಿಂದ ಆಗಮಿಸಿದ ಪ್ರಯಾಣಿಕನನ್ನು ತಪಾಸಣೆ ನಡೆಸಿದಾಗ ಚಿನ್ನವನ್ನು ಕರಗಿಸಿ ಪೇಸ್ಟ್ ರೂಪದಲ್ಲಿ ದೇಹದಲ್ಲಿ ಅಳವಡಿಸಿ ಸಾಗಾಟ ಮಾಡಿರುವುದು ಪತ್ತೆಯಾಗಿದೆ. ಅದನ್ನು ತೂಕ ಮಾಡಿದಾಗ 487.110 ಗ್ರಾಂ. ಚಿನ್ನ ಲಭಿಸಿದೆ.
ಸುಮಾರು 18.21 ಲಕ್ಷ ರೂ. ಮೌಲ್ಯದ ಚಿನ್ನ ಮತ್ತು ಪ್ರಯಾಣಿಕನನ್ನು ವಶಕ್ಕೆ ಪಡೆದುಕೊಂಡ ಕಸ್ಟಮ್ ಅಧಿಕಾರಿಗಳು ಪ್ರಕರಣ ದಾಖಲಿಸಿಕೊಂಡಿದ್ದಾರೆ.