ಮಂಗಳೂರು: ಕೋವಿಡ್-19 ಸೋಂಕು ಶಂಕೆ ಹಿನ್ನೆಲೆಯಲ್ಲಿ ಮಂಗಳೂರಿನಲ್ಲಿ ಇಂದು 26 ಮಂದಿಯ ಗಂಟಲು ದ್ರವದ ಸ್ಯಾಂಪಲ್ಗಳನ್ನು ಪರೀಕ್ಷೆಗೆ ರವಾನೆ ಮಾಡಲಾಗಿದೆ.

ಮಂಗಳೂರಲ್ಲಿ ಈವರೆಗೆ 38,865 ಮಂದಿಯನ್ನು ಸ್ಕ್ರೀನಿಂಗ್ ಮಾಡಲಾಗಿದೆ. 24 ಮಂದಿಯನ್ನು ಮಂಗಳೂರಿನ ಇಎಸ್ಐ ಹಾಸ್ಪಿಟಲ್ನಲ್ಲಿ ಕ್ವಾರಂಟೈನ್ನಲ್ಲಿ ಇರಿಸಲಾಗಿದ್ದು, ವೆನ್ಲಾಕ್ ಆಸ್ಪತ್ರೆಯ ಕ್ವಾರೆಂಟೈನ್ನಲ್ಲಿ ಯಾರೂ ಇಲ್ಲ. 3,970 ಮಂದಿ 28 ದಿನಗಳ ಹೋಂ ಕ್ವಾರಂಟೈನ್ ಮುಗಿಸಿದ್ದಾರೆ.
ಈವರೆಗೆ 462 ಮಂದಿಯ ಗಂಟಲು ದ್ರವ ಪಡೆಯಲಾಗಿದ್ದು, ಅದರಲ್ಲಿ 32 ಮಂದಿಯ ವರದಿ ಇನ್ನೂ ಬರಬೇಕಾಗಿದೆ. ಈವರೆಗೆ 430 ಮಂದಿಯ ವರದಿ ಬಂದಿದ್ದು, ಅದರಲ್ಲಿ 418 ಮಂದಿಯ ನೆಗೆಟಿವ್ ಬಂದಿದೆ. 12 ಮಂದಿಯಲ್ಲಿ ಸೋಂಕು ದೃಢಗೊಂಡಿದ್ದು, ಓರ್ವ ವೃದ್ಧೆ ಸೇರಿ ಇಂದು 7 ಮಂದಿ ಈಗಾಗಲೇ ಗುಣಮುಖರಾಗಿ ಮನೆಗೆ ತೆರಳಿದ್ದಾರೆ. 5 ಮಂದಿ ಇನ್ನೂ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಜಿಲ್ಲಾಧಿಕಾರಿಯವರ ಪ್ರಕಟಣೆ ತಿಳಿಸಿದೆ.