ಕೊಣಾಜೆ(ದಕ್ಷಿಣ ಕನ್ನಡ): ಅಸೈಗೋಳಿಯಲ್ಲಿ ಕೆಎಸ್‌ಆರ್‌ಪಿಯಲ್ಲಿ ಪೊಲೀಸ್ ಕಾನ್‌ಸ್ಟೇಬಲ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಅನಿಲ್ ಕುಮಾರ್, ಕೊಣಾಜೆ ಅಸೈಗೋಳಿಯ ಪೊಲೀಸ್ ವಸತಿ ಗೃಹದಿಂದ ನಾಪತ್ತೆಯಾಗಿದ್ದಾರೆ. ಘಟನೆ ಸಂಬಂಧ ಕೊಣಾಜೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಅಸೈಗೋಳಿಯ ಕರ್ನಾಟಕ ಮೀಸಲು ಪೊಲೀಸ್ ಪಡೆಯ ಏಳನೇ ಬೆಟಾಲಿಯನ್‌ನ 29 ವರ್ಷದ ಅನಿಲ್ ಕುಮಾರ್ ಚಿಕ್ಕಮಗಳೂರು ಜಿಲ್ಲೆ ಮೂಲದವರು. ಅನಿಲ್ ಅವರು ತಾಯಿ, ಪತ್ನಿಯೊಂದಿಗೆ ಅಸೈಗೋಳಿಯ ಪೊಲೀಸ್ ವಸತಿಗೃಹದಲ್ಲಿ ವಾಸವಾಗಿದ್ದರು.
ಗುರುವಾರ ಸಂಜೆಯಿಂದ ಅವರು ನಾಪತ್ತೆಯಾಗಿದ್ದು, ಈ ಬಗ್ಗೆ ಕೊಣಾಜೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಕುಟುಂಬದ ಕಲಹದ ಕಾರಣದಿಂದ ಬೇಸತ್ತು ಅವರು ನಾಪತ್ತೆಯಾಗಿರಬಹುದು ಎಂದು ಸಂಶಯಿಸಲಾಗಿದೆ. ಸತ್ಯ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.