ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು ಕೊರೊನಾದಿಂದಾಗಿ ಎಂಟು ಮಂದಿ ಸಾವನ್ನಪ್ಪಿದ್ದಾರೆ.
ಎಂಟು ಮಂದಿಯಲ್ಲಿ ಇಬ್ಬರು ಶಿವಮೊಗ್ಗದ ಭದ್ರಾವತಿಯವರಾಗಿದ್ದು, ಆರು ಮಂದಿ ದಕ್ಷಿಣ ಕನ್ನಡ ಜಿಲ್ಲೆಯವರಾಗಿದ್ದಾರೆ.
ಶಿವಮೊಗ್ಗದ ಭದ್ರಾವತಿಯ 67 ವರ್ಷದ ಇಬ್ಬರು ಪುರುಷರು, ಮಂಗಳೂರಿನ 44 ವರ್ಷದ ಪುರುಷ, 56 ವರ್ಷದ ಪುರುಷ, 75 ವರ್ಷದ ಮಹಿಳೆ, 65 ವರ್ಷದ ಮಹಿಳೆ, ಬಂಟ್ವಾಳದ 42 ವರ್ಷದ ಮಹಿಳೆ ಮತ್ತು ಪುತ್ತೂರಿನ 61 ವರ್ಷದ ಮಹಿಳೆ ಮೃತಪಟ್ಟವರು. ಈ ಮೂಲಕ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾದಿಂದ ಸಾವನ್ನಪ್ಪಿದವರ ಸಂಖ್ಯೆ 107ಕ್ಕೆ ಏರಿಕೆಯಾಗಿದೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು 180 ಮಂದಿಗೆ ಕೊರೊನಾ ದೃಢಪಟ್ಟಿದೆ. ಇದರಲ್ಲಿ ಪ್ರಾಥಮಿಕ ಸಂಪರ್ಕದಿಂದ 56, ಐಎಲ್ಐ ನಿಂದ 68, ಎಸ್ಎಆರ್ಐ ಪ್ರಕರಣದಿಂದ 10, ವಿದೇಶದಿಂದ ಬಂದ ಒಬ್ಬರಿಗೆ ಕೊರೊನಾ ದೃಢಪಟ್ಟಿದೆ. ಉಳಿದಂತೆ 45 ಮಂದಿಯ ಸಂಪರ್ಕ ಪತ್ತೆ ಹಚ್ಚಲಾಗುತ್ತಿದೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಈವರೆಗೆ 4,394 ಮಂದಿಗೆ ಕೊರೊನಾ ದೃಢಪಟ್ಟಿದೆ. ಇಂದು 125 ಮಂದಿ ಗುಣಮುಖರಾಗಿದ್ದು, ಈವರೆಗೆ ಗುಣಮುಖರಾದವರ ಸಂಖ್ಯೆ 1,987 ಕ್ಕೆ ಏರಿಕೆಯಾಗಿದೆ. 2,300 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ.