ETV Bharat / city

ಮಂಗಳೂರಿನ ಕಾಲೇಜಿನಲ್ಲಿ ರ್‍ಯಾಗಿಂಗ್ ಪ್ರಕರಣ: 9 ವಿದ್ಯಾರ್ಥಿಗಳ ಬಂಧನ - ಶ್ರೀನಿವಾಸ ಫಾರ್ಮಸಿ ಕಾಲೇಜ್​

ರ್‍ಯಾಗಿಂಗ್ ಮಾಡಿರುವ ಆರೋಪದ ಹಿನ್ನೆಲೆ ಮಂಗಳೂರಿನ ಶ್ರೀನಿವಾಸ ಫಾರ್ಮಸಿ ಕಾಲೇಜಿನ ದ್ವಿತೀಯ ಹಾಗೂ ತೃತೀಯ ವರ್ಷದ 9 ವಿದ್ಯಾರ್ಥಿಗಳನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ.

ragging case
9 ವಿದ್ಯಾರ್ಥಿಗಳ ಬಂಧನ
author img

By

Published : Jan 22, 2021, 5:30 PM IST

ಮಂಗಳೂರು: ರ್‍ಯಾಗಿಂಗ್ ಮಾಡಿರುವ ಆರೋಪದ ಹಿನ್ನೆಲೆ ನಗರದ ಶ್ರೀನಿವಾಸ ಫಾರ್ಮಸಿ ಕಾಲೇಜಿನ 9 ಮಂದಿ ವಿದ್ಯಾರ್ಥಿಗಳನ್ನು ಇಂದು ಮಂಗಳೂರು ಪೊಲೀಸರು ಬಂಧಿಸಿದ್ದಾರೆ‌.

ರ್‍ಯಾಗಿಂಗ್ ಪ್ರಕರಣದ ಕುರಿತು ಮಾಹಿತಿ ನೀಡಿದ ಪೊಲೀಸ್ ಆಯುಕ್ತ ಶಶಿಕುಮಾರ್ ಎನ್.

ಶ್ರೀನಿವಾಸ ಫಾರ್ಮಸಿ ಕಾಲೇಜಿನ ದ್ವಿತೀಯ ಹಾಗೂ ತೃತೀಯ ವರ್ಷದ ವಿದ್ಯಾರ್ಥಿಗಳನ್ನು ಬಂಧಿಸಲಾಗಿದೆ.

ಈ ಬಗ್ಗೆ ನಗರ ಪೊಲೀಸ್ ಆಯುಕ್ತ ಶಶಿಕುಮಾರ್ ಎನ್.ಮಾಹಿತಿ ನೀಡಿದ್ದು, ಕೇರಳ ರಾಜ್ಯದ ಕಾಸರಗೋಡು ತಾಲೂಕಿನ ಮೈಥೊಡೆ ಗ್ರಾಮದ ವಿದ್ಯಾರ್ಥಿಯೊಬ್ಬ ಕಾಲೇಜಿನಲ್ಲಿ ಜ. 7ರಂದು ಎರಡು ಲಕ್ಷ ರೂ. ವೆಚ್ಚ ಭರಿಸಿ ಮೊದಲನೇ ವರ್ಷದ ಫಾರ್ಮಸಿ ಪದವಿಗೆ ದಾಖಲಾತಿ ಪಡೆದಿದ್ದ. ಬಳಿಕ ಹಾಸ್ಟೆಲ್​ನಲ್ಲಿ ಉಳಿದುಕೊಂಡಿದ್ದ. ಕೆಲ ದಿನಗಳ ಹಿಂದೆ ಆತನ ತಂದೆ ಮಂಗಳೂರು ನಗರದ ಉಪ ಪೊಲೀಸ್ ಆಯುಕ್ತರಿಗೆ ಕರೆ ಮಾಡಿ, ತಮ್ಮ ಮಗ ಏಕಾಏಕಿ ಕಾಲೇಜು ಬಿಟ್ಟು ಬಂದಿದ್ದಾನೆ. ಕಾಲೇಜಿಗೆ ಹೋಗುವುದಿಲ್ಲ ಎನ್ನುತ್ತಿದ್ದಾನೆ ಎಂದು ತಿಳಿಸಿದ್ದಾರೆ. ಈ ಬಗ್ಗೆ ವಿದ್ಯಾರ್ಥಿಯನ್ನು ಕರೆಸಿ ವಿಚಾರಿಸಿದಾಗ ಸೀನಿಯರ್ ವಿದ್ಯಾರ್ಥಿಗಳು ರ್‍ಯಾಗಿಂಗ್ ಮಾಡುತ್ತಿರುವುದು ತಿಳಿದು ಬಂದಿದೆ.

ರ್‍ಯಾಗಿಂಗ್ ಬಗ್ಗೆ ಮಾಹಿತಿ ನೀಡಿದ ಪೊಲೀಸ್ ಆಯುಕ್ತರು, ಕಾಲೇಜಿನ ಸೀನಿಯರ್ ವಿದ್ಯಾರ್ಥಿಗಳು, ಸಂತ್ರಸ್ತ ವಿದ್ಯಾರ್ಥಿ ಹಾಗೂ ಆತನ ಸಹಪಾಠಿಯನ್ನು ತಮ್ಮ ಪಿಜಿಗೆ ಕರೆಸಿಕೊಂಡು ಅವರ ಜೊತೆ ಅನುಚಿತವಾಗಿ ವರ್ತಿಸಿದ್ದಾರೆ. ಜೊತೆಗೆ ಹೇರ್ ಸ್ಟೈಲ್ ಮಾಡಬಾರದೆಂದು ಹೇಳಿ ಆರು ಮಂದಿಯನ್ನು‌ ಸಲೂನ್​ಗೆ ಕಳುಹಿಸಿ, ಕಟಿಂಗ್ ಮಾಡಿಸಿಕೊಂಡು ನಮ್ಮೆದುರಿಗೆ ಬಂದು ನಿಲ್ಲಬೇಕೆಂದು ಹೇಳಿದ್ದಾರೆ. ಈ ಹಿನ್ನೆಲೆಯಲ್ಲಿ ಶ್ರೀನಿವಾಸ ಫಾರ್ಮಸಿ ಕಾಲೇಜಿನ ಒಟ್ಟು 9 ಮಂದಿ‌ ಸೀನಿಯರ್ ವಿದ್ಯಾರ್ಥಿಗಳನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ ಎಂದರು.

ಇನ್ನು ಈ ವಿದ್ಯಾರ್ಥಿಗಳ ಮೇಲೆ ಐಪಿಸಿ ಕಲಂ ಅಡಿ‌‌ ಹಾಗೂ ಕರ್ನಾಟಕ ಶಿಕ್ಷಣ ಕಾಯ್ದೆ ಅನ್ವಯ ಪ್ರಕರಣ ದಾಖಲಾಗಿದೆ. ತಕ್ಷಣ ಅವರನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗುತ್ತದೆ. ಈ ಕಾಲೇಜಿನ ಪ್ರಾಂಶುಪಾಲರು, ಹಾಸ್ಟೆಲ್ ವಾರ್ಡನ್, ವಿದ್ಯಾರ್ಥಿಗಳ ಕೌನ್ಸೆಲರ್ ಮೂವರನ್ನು ಕರೆಸಿ ವಿಚಾರಣೆ ಮಾಡಿದಾಗ ತಮಗೆ ಈ ಬಗ್ಗೆ ತಿಳಿದಿಲ್ಲ. ಯಾವುದೇ ದೂರು ಬಂದಿಲ್ಲ ಎಂಬ ಉಡಾಫೆ ಉತ್ತರ ನೀಡಿದ್ದಾರೆ. ಹಾಗಾಗಿ ಈ ಕುರಿತು ಹೆಚ್ಚಿನ ತನಿಖೆ ನಡೆಸಲಾಗುತ್ತದೆ ಎಂದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.