ಮಂಗಳೂರು: ಇಲ್ಲಿನ ಪಡೀಲ್ನಲ್ಲಿರುವ ಮಂಗಳೂರು ಜಂಕ್ಷನ್ ರೈಲು ನಿಲ್ದಾಣದ ಹೊರಭಾಗದ ಫುಟ್ಪಾತ್ನಲ್ಲಿ ಮಲಗಿದ್ದವರ ಮೇಲೆ ಕಾರೊಂದು ಹರಿದಿದೆ. ಅಪಘಾತದಿಂದ ಇಬ್ಬರು ಗಾಯಗೊಂಡಿದ್ದಾರೆ. ಇಂದು ಮುಂಜಾನೆ ಮೂರು ಗಂಟೆ ಸಮಯಕ್ಕೆ ಈ ದುರ್ಘಟನೆ ನಡೆದಿದೆ.
ಮಂಗಳೂರು ಜಂಕ್ಷನ್ ರೈಲ್ವೆ ನಿಲ್ದಾಣದ ಪಾರ್ಕಿಂಗ್ನಲ್ಲಿದ್ದ ಕಾರನ್ನು ಅಲ್ಲೇ ಮುಂದಕ್ಕೆ ಇಡುವ ವೇಳೆ ಕಾರು ಫುಟ್ಪಾತ್ ಮೇಲೆ ಮಲಗಿದ್ದ ಇಬ್ಬರ ಮೇಲೆ ಕಾರು ಹರಿದಿದ್ದು, ಉಳಿದವರು ಸ್ವಲ್ಪದರಲ್ಲೇ ಪಾರಾಗಿದ್ದಾರೆ. ಸ್ಥಳದಲ್ಲಿದ್ದ ಬೇರೆ ನಾಲ್ಕು ಕಾರುಗಳು ಜಖಂಗೊಂಡಿವೆ.
ಇದನ್ನೂ ಓದಿ: ಧಾರವಾಡದಲ್ಲಿ ಕೊರೊನಾ ಹಾವಳಿ.. ಎಸ್.ಡಿ.ಎಂ ಮೆಡಿಕಲ್ ಕಾಲೇಜಿನ 50ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಕೋವಿಡ್ ಸೋಂಕು
ಇಬ್ಬರು ಗಾಯಾಳುಗಳಲ್ಲಿ ಓರ್ವನ ಸ್ಥಿತಿ ಗಂಭೀರವಾಗಿದ್ದು, ನಗರದ ವೆನ್ಲಾಕ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಕುರಿತು ಕಂಕನಾಡಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.