ETV Bharat / city

ನೆಲ್ಯಾಡಿ ಬಳಿ ಗ್ಯಾಸ್ ಟ್ಯಾಂಕರ್- ಡೀಸೆಲ್ ಟ್ಯಾಂಕರ್ ನಡುವೆ ಡಿಕ್ಕಿ

author img

By

Published : Feb 27, 2021, 7:59 AM IST

Updated : Feb 27, 2021, 8:15 AM IST

ಮಂಗಳೂರಿನಿಂದ ಬೆಂಗಳೂರು ಕಡೆಗೆ ಗ್ಯಾಸ್ ತುಂಬಿಸಿಕೊಂಡು ಹೋಗುತ್ತಿದ್ದ ಟ್ಯಾಂಕರ್ ಹಾಗೂ ಕೋಲಾರದಿಂದ ಮಂಗಳೂರು ಕಡೆಗೆ ಬರುತ್ತಿದ್ದ ಖಾಲಿ ಡೀಸೆಲ್ ಟ್ಯಾಂಕರ್​ ನಡುವೆ ರಾಷ್ಟ್ರೀಯ ಹೆದ್ದಾರಿ 75ರ ನೆಲ್ಯಾಡಿ ಹೊಸಮಜಲು ಮಸೀದಿ ಸಮೀಪ ಡಿಕ್ಕಿ ಸಂಭವಿಸಿದೆ.

A collision between a gas tanker and a diesel tanker
ಗ್ಯಾಸ್ ಟ್ಯಾಂಕರ್, ಡೀಸೆಲ್ ಟ್ಯಾಂಕರ್ ನಡುವೆ ಡಿಕ್ಕಿ

ನೆಲ್ಯಾಡಿ (ದಕ್ಷಿಣಕನ್ನಡ): ನೆಲ್ಯಾಡಿಯ ಹೊಸಮಜಲು ಎಂಬಲ್ಲಿ ಗ್ಯಾಸ್ ಟ್ಯಾಂಕರ್ ಮತ್ತು ಡೀಸೆಲ್ ಟ್ಯಾಂಕರ್ ಡಿಕ್ಕಿ ಸಂಭವಿಸಿದ್ದು, ಗ್ಯಾಸ್ ಸೋರಿಕೆಯಾಗದ ಕಾರಣ ದೊಡ್ಡ ಅನಾಹುತವೊಂದು ತಪ್ಪಿದೆ.

ನೆಲ್ಯಾಡಿ ಬಳಿ ಗ್ಯಾಸ್ ಟ್ಯಾಂಕರ್- ಡೀಸೆಲ್ ಟ್ಯಾಂಕರ್ ನಡುವೆ ಡಿಕ್ಕಿ

ಮಂಗಳೂರಿನಿಂದ ಬೆಂಗಳೂರು ಕಡೆಗೆ ಗ್ಯಾಸ್ ತುಂಬಿಸಿಕೊಂಡು ಹೋಗುತ್ತಿದ್ದ ಟ್ಯಾಂಕರ್ ಹಾಗೂ ಕೋಲಾರದಿಂದ ಮಂಗಳೂರು ಕಡೆಗೆ ಬರುತ್ತಿದ್ದ ಖಾಲಿ ಡೀಸೆಲ್ ಟ್ಯಾಂಕರ್ ರಾಷ್ಟ್ರೀಯ ಹೆದ್ದಾರಿ 75ರ ನೆಲ್ಯಾಡಿ ಹೊಸಮಜಲು ಮಸೀದಿ ಸಮೀಪ ಬೆಳಗಿನ ಜಾವ 5:30ರ ಸುಮಾರಿಗೆ ಪರಸ್ಪರ ಅಪಘಾತ ಸಂಭವಿಸಿದೆ.

ಡೀಸೆಲ್ ಟ್ಯಾಂಕರ್ ಚಾಲಕನ ಅಜಾಗರೂಕತೆಯೇ ಅಪಘಾತಕ್ಕೆ ಕಾರಣ ಎನ್ನಲಾಗಿದ್ದು, ಚಾಲಕರಿಬ್ಬರೂ ಸಣ್ಣಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ. ಉಪ್ಪಿನಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ನೆಲ್ಯಾಡಿ ಹೊರ ಠಾಣೆ ಪೊಲೀಸರು ಘಟನಾ ಸ್ಥಳದಲ್ಲಿ ಪರಿಶೀಲನೆ ನಡೆಸಿದ್ದಾರೆ.

ಓದಿ: ಮರಾಠ ಸಮುದಾಯಕ್ಕೆ 2ಎ ಮೀಸಲಾತಿ ನೀಡಬೇಕು: ಸಚಿವ ಶ್ರೀಮಂತ ಪಾಟೀಲ್

ಅಪಘಾತ ನಡೆದ ಸ್ಥಳದ ಪಕ್ಕದಲ್ಲಿ ಖಾಸಗಿ ಆಸ್ಪತ್ರೆ, ಮಸೀದಿ ಸೇರಿದಂತೆ ಹಲವಾರು ಮನೆಗಳಿದ್ದು, ಅದೃಷ್ಟವಶಾತ್ ಗ್ಯಾಸ್ ಸೋರಿಕೆಯಾಗದ ಕಾರಣ ದೊಡ್ಡ ದುರಂತವೊಂದು ತಪ್ಪಿದೆ.

Last Updated : Feb 27, 2021, 8:15 AM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.