ETV Bharat / city

ಬೈಕಂಪಾಡಿ ಎಪಿಎಂಸಿ ರೈಲ್ವೆ ಹಳಿ ಬಳಿ ವ್ಯಕ್ತಿಯ ಮೃತದೇಹ ಪತ್ತೆ: ಕತ್ತು ಕೊಯ್ದು ಕೊಲೆ ಶಂಕೆ - ಕತ್ತು ಕೊಯ್ದು ಕೊಲೆಗೈದ ಶಂಕೆ

ಬೈಕಂಪಾಡಿ ಎಪಿಎಂಸಿ ರೈಲ್ವೆ ಹಳಿ ಬಳಿ ವ್ಯಕ್ತಿಯೋರ್ವನ ಮೃತದೇಹ ಪತ್ತೆಯಾಗಿದೆ. ಸ್ಥಳಕ್ಕೆ ಮಂಗಳೂರು ನಗರ ಪೊಲೀಸ್ ಕಮಿಷನರ್ ಎನ್ ಶಶಿಕುಮಾರ್, ಡಿಸಿಪಿ ಹರಿರಾಂ ಶಂಕರ್ ಹಾಗೂ ಪಣಂಬೂರು ಪೊಲೀಸ್ ಠಾಣಾ ಇನ್ಸ್​ಪೆಕ್ಟರ್ ಭೇಟಿ ನೀಡಿ ಪರಿಶೀಲಿಸಿದರು.

A man dead body found in APMC railway track

author img

By

Published : Apr 12, 2021, 12:45 PM IST

ಮಂಗಳೂರು: ನಗರದ ಬೈಕಂಪಾಡಿ ಎಪಿಎಂಸಿ ರೈಲ್ವೆ ಹಳಿ ಬಳಿ ವ್ಯಕ್ತಿಯೋರ್ವನ ಮೃತದೇಹ ಪತ್ತೆಯಾಗಿದ್ದು, ಕತ್ತು ಕೊಯ್ದು ಕೊಲೆಗೈದಿರುವ ಶಂಕೆ ವ್ಯಕ್ತವಾಗಿದೆ.

ರೈಲ್ವೆ ಹಳಿ ಬಳಿ ವ್ಯಕ್ತಿಯ ಮೃತದೇಹ ಪತ್ತೆ

ಬೈಕಂಪಾಡಿ ಕೈಗಾರಿಕಾ ಪ್ರದೇಶದ ಕಾರ್ಮಿಕ ಯಲ್ಲಪ್ಪ ಕೊಲೆಯಾದ ವ್ಯಕ್ತಿ. ಕಾರ್ಮಿಕನ ಮೃತದೇಹ ಪತ್ತೆಯಾದ ಪ್ರದೇಶದಲ್ಲಿ ಜನ ಸಂಚಾರ ವಿರಳವಾಗಿದ್ದು, ರಾತ್ರಿ ವೇಳೆ ಈ ಕೃತ್ಯ ಎಸಗಲಾಗಿದೆ ಎಂಬ ಶಂಕೆ ವ್ಯಕ್ತಪಡಿಸಲಾಗಿದೆ.

ಇಂದು ಬೆಳಗ್ಗೆ ವಿಚಾರ ಬೆಳಕಿಗೆ ಬರುತ್ತಿದ್ದಂತೆ ಸ್ಥಳಕ್ಕೆ ಮಂಗಳೂರು ನಗರ ಪೊಲೀಸ್ ಕಮಿಷನರ್ ಎನ್ ಶಶಿಕುಮಾರ್, ಡಿಸಿಪಿ ಹರಿರಾಂ ಶಂಕರ್ ಹಾಗೂ ಪಣಂಬೂರು ಪೊಲೀಸ್ ಠಾಣಾ ಇನ್ಸ್​ಪೆಕ್ಟರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಶ್ವಾನದಳ, ಬೆರಳಚ್ಚು ತಜ್ಞರು ಹಾಗೂ ಪೊಲೀಸರು ಭೇಟಿ ನೀಡಿ ಶವ ಮಹಜರು ನಡೆಸಿದ್ದಾರೆ.

ಈ ಕುರಿತು ಪಣಂಬೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.