ಕಡಬ : ಮಹಿಳೆಯೊಬ್ಬರ ಮೊಬೈಲ್‌ನ ಹೆಲ್ಮೆಟ್ ಧರಿಸಿದ ಯುವಕನೊಬ್ಬ ಕದ್ದು ಪರಾರಿಯಾಗಿರುವ ಘಟನೆ ಕಡಬದಲ್ಲಿ ನಡೆದಿದೆ.
ಕಡಬದ ಬ್ಯಾಂಕ್ ಆಫ್ ಬರೋಡಾ ಎಟಿಎಂ ಕೇಂದ್ರಕ್ಕೆ ರೇಖಾ ಎಂಬುವರು ಹಣ ಪಡೆಯಲು ಬಂದಿದ್ದರು. ಈ ಸಂದರ್ಭದಲ್ಲಿ ಹಣ ಬಾರದ ಹಿನ್ನೆಲೆ ಮೊಬೈಲ್‌ನ ಅಲ್ಲೇ ಬಿಟ್ಟು ಪಕ್ಕದಲ್ಲಿದ್ದ ಬ್ಯಾಂಕ್ ಸಿಬ್ಬಂದಿ ಕರೆಯಲು ಬ್ಯಾಂಕ್ಗೆ ಹೋಗಿದ್ದರು. ವಾಪಸ್ ಬಂದು ನೋಡಿದಾಗ ಮೊಬೈಲ್ ಇಲ್ಲದಿರುವುದು ಗಮನಕ್ಕೆ ಬಂದಿದೆ. ಕಳ್ಳತನದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ಇನ್ನು, ಮೊಬೈಲ್ ಕಳೆದು ಹೋಗಿರುವ ಬಗ್ಗೆ ಕಡಬ ಪೊಲೀಸ್ ಠಾಣೆಯಲ್ಲಿ ಮಹಿಳೆ ದೂರು ನೀಡಿದ್ದು, ಪೊಲೀಸರು ತನಿಖೆ ಪ್ರಾರಂಭಿಸಿದ್ದಾರೆ.