ಮಂಗಳೂರು: ಮಂಗಳೂರಿನ ಖಾಸಗಿ ಬಸ್ವೊಂದರಲ್ಲಿ ಯುವತಿಯೊಬ್ಬಳಿಗೆ ಲೈಂಗಿಕ ಕಿರುಕುಳ ನೀಡಲಾಗಿದೆ ಎಂಬ ಪ್ರಕರಣದ ಆರೋಪಿಯನ್ನು ಶೀಘ್ರ ಬಂಧಿಸಲಾಗುವುದು ಎಂದು ಮಂಗಳೂರು ಪೊಲೀಸ್ ಕಮೀಷನರ್ ಶಶಿಕುಮಾರ್ ತಿಳಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಭಾಗಿಯಾಗಿ ಮಾತನಾಡಿದ ಅವರು, ಖಾಸಗಿ ಬಸ್ನಲ್ಲಿ ವ್ಯಕ್ತಿಯೊಬ್ಬ ಲೈಂಗಿಕ ಕಿರುಕುಳ ನೀಡಿರುವ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಯುವತಿಯೊಬ್ಬಳು ಬರೆದುಕೊಂಡಿದ್ದಳು. ಈ ಬಗ್ಗೆ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಲು ಇಲಾಖೆ ಮುಂದಾಗಿತ್ತು. ಆದರೆ ಮಹಿಳೆಯೇ ದೂರು ನೀಡುತ್ತೇನೆ ಎಂದು ತಿಳಿಸಿದ್ದು, ಅದರಂತೆ ದೂರು ದಾಖಲಿಸಿಕೊಳ್ಳಲಾಗಿದೆ ಎಂದರು.
ಇದನ್ನೂ ಓದಿ: ಬಸ್ನಲ್ಲಿ ಅನುಭವಿಸಿದ ಲೈಂಗಿಕ ಕಿರುಕುಳದ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಬರೆದ ಯುವತಿ!
ಆರೋಪಿಯ ಪತ್ತೆಗಾಗಿ ತಂಡ ರಚಿಸಲಾಗಿದ್ದು, ಶೀಘ್ರ ಆರೋಪಿಯನ್ನು ಬಂಧಿಸಲಾಗುವುದು ಎಂದು ತಿಳಿಸಿದ್ದಾರೆ.