ETV Bharat / city

ಬಾಲ್ಯ ವಿವಾಹಕ್ಕೆ ಅವಕಾಶ ನೀಡಿದರೆ ಕಠಿಣ ಕ್ರಮ: ಜಿಲ್ಲಾಧಿಕಾರಿ ಕೆ.ವಿ. ರಾಜೇಂದ್ರ ಎಚ್ಚರಿಕೆ - ದಕ್ಷಿಣ ಕನ್ನಡ ಸುದ್ದಿ

ಬಾಲ್ಯ ವಿವಾಹ ಪ್ರಕರಣಗಳು ಕಂಡುಬಂದರೆ ಮಕ್ಕಳ ಪಾಲಕರು, ಕಲ್ಯಾಣ ಮಂಟಪಗಳ ಮುಖ್ಯಸ್ಥರು, ಆಹ್ವಾನ ಪತ್ರಿಕೆ ಮುದ್ರಿಸಿದ ಪ್ರಿಂಟಿಂಗ್ ಪ್ರೆಸ್, ಮದುವೆಯ ಧಾರ್ಮಿಕ ಕಾರ್ಯದಲ್ಲಿ ಪಾಲ್ಗೊಂಡ ಧಾರ್ಮಿಕ ವ್ಯಕ್ತಿಗಳ ವಿರುದ್ಧವೂ ಕೇಸು ದಾಖಲಿಸಲಾಗುವುದು ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಕೆ.ವಿ.ರಾಜೇಂದ್ರ ಸೂಚಿಸಿದ್ದಾರೆ.

Action to be taken if child marriage is allowed: District Collector KV Rajendra
ಬಾಲ್ಯ ವಿವಾಹಕ್ಕೆ ಅವಕಾಶ ನೀಡಿದರೆ ಕಠಿಣ ಕ್ರಮ:ಜಿಲ್ಲಾಧಿಕಾರಿ ಕೆ.ವಿ.ರಾಜೇಂದ್ರ ಎಚ್ಚರಿಕೆ
author img

By

Published : Sep 4, 2020, 11:54 PM IST

ಮಂಗಳೂರು: ಬಾಲ್ಯ ವಿವಾಹ ನಡೆಸುವವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಜರುಗಿಸುವಂತೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಕೆ.ವಿ. ರಾಜೇಂದ್ರ ಸೂಚಿಸಿದ್ದಾರೆ.

ದ.ಕ. ಜಿಲ್ಲಾ ಪಂಚಾಯತ್ ನೇತ್ರಾವತಿ ಸಭಾಂಗಣದಲ್ಲಿ ನಡೆದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಜಿಲ್ಲಾ ಮಟ್ಟದ ವಿವಿಧ ಸಮಿತಿಗಳ ಸಭೆಯನ್ನುದ್ದೇಶಿಸಿ ಮಾತನಾಡಿದರು. ಬಾಲ್ಯ ವಿವಾಹ ಪ್ರಕರಣಗಳು ಕಂಡುಬಂದರೆ ಮಕ್ಕಳ ಪಾಲಕರು, ಕಲ್ಯಾಣ ಮಂಟಪಗಳ ಮುಖ್ಯಸ್ಥರು, ಆಹ್ವಾನ ಪತ್ರಿಕೆ ಮುದ್ರಿಸಿದ ಪ್ರಿಂಟಿಂಗ್ ಪ್ರೆಸ್, ಮದುವೆಯ ಧಾರ್ಮಿಕ ಕಾರ್ಯದಲ್ಲಿ ಪಾಲ್ಗೊಂಡ ಧಾರ್ಮಿಕ ವ್ಯಕ್ತಿಗಳ ವಿರುದ್ಧವೂ ಕೇಸು ದಾಖಲಿಸಲಾಗುವುದು. ಯಾವುದೇ ಕಾರಣಕ್ಕೂ ಬಾಲ್ಯ ವಿವಾಹಕ್ಕೆ ಅವಕಾಶ ನೀಡಬಾರದು. ಇಂತಹ ಮಾಹಿತಿ ಬಂದರೆ ಕೂಡಲೇ ಅದನ್ನು ತಡೆಗಟ್ಟಬೇಕು ಎಂದು ತಿಳಿಸಿದರು.

ಇನ್ನು ಜಿಲ್ಲೆಯಲ್ಲಿ ವಿಧವೆಯರು ಪಿಂಚಣಿ ವಂಚಿತರಾಗಬಾರದು. ಈ ನಿಟ್ಟಿನಲ್ಲಿ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ಜಿಲ್ಲೆಯ ಪ್ರತಿ ಅಂಗನವಾಡಿ ಕಾರ್ಯಕರ್ತೆಯರಿಂದ ಮಾಹಿತಿ ಪಡೆದು, ಕೂಡಲೇ ವರದಿ ನೀಡಬೇಕು. ಸರ್ಕಾರದಿಂದ ಪೂರೈಕೆ ಮಾಡಲಾದ ಸ್ಯಾನಿಟರಿ ಪ್ಯಾಡ್​ಗಳನ್ನು ಎಲ್ಲಾ ಶಾಲಾ ಹೆಣ್ಣು ಮಕ್ಕಳಿಗೆ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ವಿತರಿಸಿ, ಅದರ ಮಾಹಿತಿಯನ್ನು ನೀಡಬೇಕು. ಜೊತೆಗೆ ಬಳಕೆಯಾದ ನಂತರ ಬಿಸಾಡಲು ಇರುವ ತ್ಯಾಜ್ಯ ಸಂಗ್ರಹಣಾ ತೊಟ್ಟಿ ಮತ್ತು ಸುಡುವಿಕೆ ಯಂತ್ರ ಸರಿಯಾಗಿದೆಯೇ ಎಂದು ಪರಿಶೀಲಿಸಬೇಕು ಎಂದರು.

ಬಂಟ್ವಾಳ, ಬೆಳ್ತಂಗಡಿ ತಾಲೂಕಿನಲ್ಲಿ ಬಾಲ್ಯ ವಿವಾಹ ಪ್ರಕರಣಗಳು ನಡೆಯುತ್ತಿರುವ ಬಗ್ಗೆ ಮಾಹಿತಿ ಗಮನಕ್ಕೆ ಬಂದಿದೆ. ಸಂಬಂಧಪಟ್ಟ ಅಧಿಕಾರಿಗಳು ಅಂಗನವಾಡಿ ಕಾರ್ಯಕರ್ತೆಯರಿಂದ ಆಯಾ ವ್ಯಾಪ್ತಿಯಲ್ಲಿ ಮಾಹಿತಿ ಪಡೆದುಕೊಂಡು ತಪ್ಪಿತಸ್ಥರ ವಿರುದ್ಧ ಕೇಸ್​ ದಾಖಲಿಸಬೇಕು. ಹೆಣ್ಣು ಮಕ್ಕಳು ಋತುಸ್ರಾವದ ಸಮಯದಲ್ಲಿ ಶುಚಿತ್ವ ಹಾಗೂ ಆರೋಗ್ಯ ಕಾಪಾಡಿಕೊಳ್ಳಲು ಅನುಕೂಲವಾಗುವ ನಿಟ್ಟಿನಲ್ಲಿ ಹಾಗೂ ಶುಚಿತ್ವವಿಲ್ಲದ ಅಭ್ಯಾಸಗಳಿಂದ ಉಂಟಾಗುವ ಸೋಂಕುಗಳಿಂದ ಶಾಲೆಗೆ ಗೈರಾಗುವುದನ್ನು ತಪ್ಪಿಸಲು ಗ್ರಾಮೀಣ ಮಟ್ಟದಲ್ಲಿ ಜಾಗೃತಿ ಕಾರ್ಯಕ್ರಮಗಳನ್ನು ಮೂಡಿಸಬೇಕು.

ಈ ವರ್ಷ ಶಾಲಾ ಕಾಲೇಜು ಪ್ರಾರಂಭವಾಗುವ ಮೊದಲು ಶಿಶು ಅಭಿವೃದ್ಧಿ ಅಧಿಕಾರಿಗಳು ಗ್ರಾಮೀಣ ಗುಡ್ಡಗಾಡು ಪ್ರದೇಶಗಳಲ್ಲಿ ಅಂಗನವಾಡಿ ಕೇಂದ್ರ, ಶಾಲಾ ಕಾಲೇಜು, ವಸತಿ ನಿಲಯಗಳಲ್ಲಿ ಸರಿಯಾದ ಕಂಪೌಂಡ್, ಶೌಚಾಲಯ, ಹೆಣ್ಣು ಮಕ್ಕಳಿಗೆ ಪ್ರತ್ಯೇಕ ವಿಶ್ರಾಂತಿ ಕೊಠಡಿ ಇನ್ನಿತರ ಸೌಕರ್ಯಗಳು ಇದೆಯೇ ಎಂದು ಪರಿಶೀಲಿಸಿ ಮಾಹಿತಿ ನೀಡಬೇಕು. ದೌರ್ಜನ್ಯಕ್ಕೊಳಗಾದ ಮಹಿಳೆಯರಿಗೆ ಒಂದೇ ಸೂರಿನಡಿ ವೈದ್ಯಕೀಯ ಸೌಲಭ್ಯ, ಪೊಲೀಸ್ ನೆರವು, ಆಪ್ತ ಸಮಾಲೋಚನೆ, ಕಾನೂನು ನೆರವು ಹಾಗೂ ತಾತ್ಕಾಲಿಕ ಆಶ್ರಯ ನೀಡಲು ಜಿಲ್ಲಾ ಲೇಡಿಗೋಶನ್ ಆಸ್ಪತ್ರೆಯಲ್ಲಿ 24*7 ಕಾರ್ಯನಿರ್ವಹಿಸುವ ‘ಸಖಿ’ ಸೆಂಟರ್ ಪ್ರಾರಂಭಿಸಲಾಗಿದೆ. ಸಖಿ ಸೆಂಟರ್ ಇನ್ನಷ್ಟು ಪರಿಣಾಮಕಾರಿಯಾಗಿ ಕಾರ್ಯ ನಿರ್ವಹಿಸಬೇಕು ಎಂದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.