ETV Bharat / city

ರಾಜ್ಯದಲ್ಲಿ‌ ಐದಾರು ಕೈಗಾರಿಕಾ ಟೌನ್‌ಶಿಪ್ ಮಾಡುವ ಗುರಿ : ಸಚಿವ ಜಗದೀಶ್ ಶೆಟ್ಟರ್ - ಕೈಗಾರಿಕಾ ಟೌನ್ ಶಿಪ್ ಕುರಿತು ಜಗದೀಶ್​ ಶೆಟ್ಟರ್​ ಹೇಳಿಕೆ

ಕೈಗಾರಿಕಾ ಬಂಡವಾಳ ಹೂಡಲು ವಿಶೇಷ ಸಾಲಸೌಲಭ್ಯ ಕೊಡುವ ಬಗ್ಗೆ ಮೂರು ಸೆಕ್ಟರ್ ಮಾಡಿಕೊಳ್ಳಲಾಗಿದೆ. ಶಿವಮೊಗ್ಗ, ಕಲಬುರಗಿ ಹಾಗೂ ಹುಬ್ಬಳ್ಳಿ-ಧಾರವಾಡದಲ್ಲಿ ಮೊದಲ ಹಂತದಲ್ಲಿ ಯೋಜನೆ ಹಾಕಿಕೊಳ್ಳಲಾಗಿದೆ..

11101446
ಜಗದೀಶ್ ಶೆಟ್ಟರ್
author img

By

Published : Mar 21, 2021, 7:55 PM IST

ಮಂಗಳೂರು : ರಾಜ್ಯದಲ್ಲಿ ಹೊಸದಾಗಿ ಐದಾರು ಕೈಗಾರಿಕಾ ಟೌನ್ ಶಿಪ್ ಮಾಡುವ ಗುರಿ ಇದೆ. ಈ ಬಗ್ಗೆ ಸಿಎಂ ಹಾಗೂ ನಗರಾಭಿವೃದ್ಧಿ ಇಲಾಖೆಯೊಂದಿಗೆ ಚರ್ಚೆ ನಡೆಸಿದ್ದೇನೆ. ಅವರೂ ಒಪ್ಪಿಕೊಂಡಿದ್ದಾರೆ. ಸಿಎಂ ಅವರು ಪೀಣ್ಯಾ ಟೌನ್‌ಶಿಪ್ ಮಾಡೋದಾಗಿ ಬಜೆಟ್​ನಲ್ಲಿಯೂ ಘೋಷಿಸಿದ್ದಾರೆ.

ಕನಿಷ್ಟ ಐದಾರು ಟೌನ್‌ಶಿಪ್​ಗಳನ್ನು ಮಾಡುವ ಗುರಿ ಇದೆ. ಈ ನಿಟ್ಟಿನಲ್ಲಿ ಪ್ರಯತ್ನ ನಡೆಯುತ್ತಿದೆ ಎಂದು ರಾಜ್ಯ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಖಾತೆ ಸಚಿವ ಜಗದೀಶ್ ಶೆಟ್ಟರ್ ಹೇಳಿದರು.

ನಗರದ ಟಿಎಂಎ ಪೈ ಕನ್ವೆನ್ಷನ್ ಸಭಾಂಗಣದಲ್ಲಿ ಸುದ್ದಿಗಾರರನ್ನು ಉದ್ದೇಶಿಸಿ ಮಾತನಾಡಿದ ಅವರು, ರಾಜ್ಯದಲ್ಲಿ ಕಳೆದ ಒಂದು ವರ್ಷದಲ್ಲಿ 382 ಯೋಜನೆಗಳ 76,376 ಕೋಟಿ ರೂ. ಮೊತ್ತದ ಬಂಡವಾಳ ಹೂಡಿಕೆ ಪ್ರಸ್ತಾವನೆ ಬಂದಿದೆ. ಇದರಿಂದ 1,77,700 ಮಂದಿಗೆ ಉದ್ಯೋಗಾವಕಾಶ ದೊರೆಯಲಿದೆ ಎಂದು ಹೇಳಿದರು.

ರಾಜ್ಯದಲ್ಲಿ‌ ಐದಾರು ಕೈಗಾರಿಕಾ ಟೌನ್ ಶಿಪ್ ಮಾಡುವ ಗುರಿ.. ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್..

ಬೆಂಗಳೂರಿನಂತೆ ಮಂಗಳೂರಿನಲ್ಲಿಯೂ ಇಲೆಕ್ಟ್ರಾನಿಕ್ ಸಿಟಿ ಮಾಡುವ ಪ್ರಸ್ತಾವನೆ ಸರ್ಕಾರದ ಮುಂದೆ ಸಲ್ಲಿಕೆಯಾಗಿತ್ತು ಎಂಬ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಶೆಟ್ಟರ್, ಈಗಾಗಲೇ ಹೂಡಿಕೆದಾರರು ಹೂಡಿಕೆ ಮಾಡಲು ಮುಂದೆ ಬಂದಿದ್ದಾರೆ.

ಈ ಬಗ್ಗೆ ಕಾರ್ಯಪ್ರವೃತ್ತರಾಗಲು‌ ನಾವು ತಯಾರಿದ್ದೇವೆ. ಈಗಾಗಲೇ ಮಂಗಳೂರಿನಲ್ಲಿ ಪ್ಲಾಸ್ಟಿಕ್ ಪಾರ್ಕ್ ಮಾಡುವ ಬಗ್ಗೆ ಕೇಂದ್ರ ಸರ್ಕಾರ ಘೋಷಣೆ ಮಾಡಿದೆ. ಆದಷ್ಟು ಶೀಘ್ರದಲ್ಲಿ ನಿರ್ಮಾಣವಾಗಲಿದೆ ಎಂದರು.

ಕೈಗಾರಿಕಾ ಬಂಡವಾಳ ಹೂಡಲು ವಿಶೇಷ ಸಾಲಸೌಲಭ್ಯ ಕೊಡುವ ಬಗ್ಗೆ ಮೂರು ಸೆಕ್ಟರ್ ಮಾಡಿಕೊಳ್ಳಲಾಗಿದೆ. ಶಿವಮೊಗ್ಗ, ಕಲಬುರಗಿ ಹಾಗೂ ಹುಬ್ಬಳ್ಳಿ-ಧಾರವಾಡದಲ್ಲಿ ಮೊದಲ ಹಂತದಲ್ಲಿ ಯೋಜನೆ ಹಾಕಿಕೊಳ್ಳಲಾಗಿದೆ.

ಇದರ ಫಲಿತಾಂಶ ನೋಡಿಕೊಂಡು ಈ ಯೋಜನೆಯನ್ನು ಬೇರೆ ಜಿಲ್ಲೆಗಳಿಗೂ ವಿಸ್ತರಣೆ ಮಾಡಲಿದ್ದೇವೆ. ಇದೇ ವಿಭಾಗದಲ್ಲಿ ಕೋಸ್ಟಲ್ ಭಾಗಕ್ಕೆ ಬೇರೆಯದೇ ಒಂದು ಝೋನ್ ಮಾಡುತ್ತೇವೆ ಎಂದು ಶೆಟ್ಟರ್ ಹೇಳಿದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.