ETV Bharat / city

ಕಾಶ್ಮೀರಿ ಪಂಡಿತರ ಮಕ್ಕಳಿಗೆ ಉಚಿತ ಶಿಕ್ಷಣ ನೀಡಲಿದೆ ಪುತ್ತೂರಿನ ಅಂಬಿಕಾ ವಿದ್ಯಾಸಂಸ್ಥೆ - ಕಾಶ್ಮೀರದ ಪಂಡಿತರ ಮಕ್ಕಳಿಗೆ ಉಚಿತ ಶಿಕ್ಷಣ ನೀಡಲಿರುವ ಅಂಬಿಕ ವಿದ್ಯಾಸಂಸ್ಥೆ

ಕಾಶ್ಮೀರಿ ಪಂಡಿತರಿಗೆ ಪುನರ್ವಸತಿ ಕಲ್ಪಿಸುವ ಬಗ್ಗೆ ಈ ಹಿಂದೆಯೇ ಚರ್ಚೆಯಾಗಿತ್ತು. ಈಗ ಪುತ್ತೂರಿನ ವಿದ್ಯಾಸಂಸ್ಥೆಯೊಂದು ಕಾಶ್ಮೀರಿ ಪಂಡಿತರ ಮಕ್ಕಳಿಗೆ ಉಚಿತವಾಗಿ ಶಿಕ್ಷಣ ನೀಡಲು ಮುಂದಾಗಿದೆ. ನಾಲ್ಕು ವಿದ್ಯಾರ್ಥಿಗಳು ಈಗಾಗಲೇ ದಾಖಲಾಗಿದ್ದಾರೆ.

ambika education institute giving free education for kashmir pandit childrens
ಕಾಶ್ಮೀರದ ಪಂಡಿತರ ಮಕ್ಕಳಿಗೆ ಉಚಿತ ಶಿಕ್ಷಣ ನೀಡಲಿರುವ ಅಂಬಿಕ ವಿದ್ಯಾಸಂಸ್ಥೆ
author img

By

Published : Apr 30, 2022, 7:25 PM IST

ಪುತ್ತೂರು(ದಕ್ಷಿಣ ಕನ್ನಡ): ದಿ ಕಾಶ್ಮೀರ್​ ಫೈಲ್ಸ್​ ಚಿತ್ರ ವೀಕ್ಷಿಸಿದ ಬಳಿಕ ಅಂಬಿಕಾ ಮಹಾವಿದ್ಯಾಲಯದ ಸಂಚಾಲಕ ಸುಬ್ರಹ್ಮಣ್ಯ ನಟ್ಟೋಜ್​ ಅವರು ಇತ್ತೀಚಿಗೆ ಜಮ್ಮುವಿಗೆ ಭೇಟಿ ನೀಡಿದ್ದರು. ಅಲ್ಲಿನ ಪರಿಸ್ಥಿತಿಯನ್ನು ಕಂಡ ಬಳಿಕ ದೇಶದ ಎಲ್ಲೆಡೆ ಇರುವ ಕಾಶ್ಮೀರಿ ಪಂಡಿತರ ಮಕ್ಕಳಿಗೆ 6ನೇ ತರಗತಿಯಿಂದ ಪದವಿವರೆಗೆ ಉಚಿತ ಶಿಕ್ಷಣವನ್ನು ನೀಡುವ ನಿರ್ಧಾರ ಮಾಡಿದ್ದಾರೆ. ಅದಲ್ಲದೇ ವಿದ್ಯಾರ್ಥಿಗಳಿಗೆ ವಸತಿ, ಆರೋಗ್ಯದ ವ್ಯವಸ್ಥೆಯನ್ನು ಒದಗಿಸುವ ಯೋಜನೆಯನ್ನು ರೂಪಿಸಿದ್ದಾರೆ.

ಸಾಮಾನ್ಯವಾಗಿ ಅಂಬಿಕಾ ಮಹಾವಿದ್ಯಾಲಯದ ವಸತಿ ಶಾಲೆಯಲ್ಲಿ ಕಲಿಯುವ ವಿದ್ಯಾರ್ಥಿಗೆ ವಾರ್ಷಿಕವಾಗಿ 80 ಸಾವಿರ ರೂಪಾಯಿಗಳನ್ನು ಭರಿಸಲಾಗುತ್ತದೆ. ಉಳಿದ ವ್ಯವಸ್ಥೆಗಳಿಗೆ 40 ಸಾವಿರ ರೂಪಾಯಿಗಳ ವೆಚ್ಚ ತಗುಲುತ್ತದೆ. ಒಟ್ಟಾರೆ ಒಬ್ಬ ವಿದ್ಯಾರ್ಥಿಗೆ ಅಂಬಿಕಾ ವಸತಿ ಶಾಲೆಯಲ್ಲಿ ಕಲಿಯಲು 1.20 ಲಕ್ಷ ವೆಚ್ಚ ತಗಲುತ್ತಿದ್ದು, ಕಾಶ್ಮೀರಿ ಪಂಡಿತರ ಮಕ್ಕಳ ಈ ಎಲ್ಲಾ ಖರ್ಚನ್ನು ವಿದ್ಯಾಲಯವೇ ಭರಿಸಲಿದೆ. ಸದ್ಯ ನಾಲ್ವರು ವಿದ್ಯಾರ್ಥಿಗಳು ಈಗಾಗಲೇ ದಾಖಲಾತಿ ಬಗ್ಗೆ ಮಾಹಿತಿ ಪಡೆದಿದ್ದಾರೆ ಎಂದು ಅಂಬಿಕಾ ಮಹಾವಿದ್ಯಾಲಯದ ಸಂಚಾಲಕ ಸುಬ್ರಹ್ಮಣ್ಯ ನಟ್ಟೋಜ್​ ತಿಳಿಸಿದ್ದಾರೆ.

ಕಾಶ್ಮೀರದ ಪಂಡಿತರ ಮಕ್ಕಳಿಗೆ ಉಚಿತ ಶಿಕ್ಷಣ ನೀಡಲಿರುವ ಅಂಬಿಕಾ ವಿದ್ಯಾಲಯ

ರಾಷ್ಟ್ರ ಪ್ರೇಮವನ್ನು ಮಕ್ಕಳಲ್ಲಿ ಬೆಳೆಸುವ ಅಂಬಿಕಾ ವಿದ್ಯಾಲಯ ಗಡಿಯಲ್ಲಿರುವ ಸೈನಿಕರಿಗೆ ಬೇಕಾದ ಅವಶ್ಯಕತೆಗಳನ್ನು ಪೂರೈಸುವ ಕೆಲಸವನ್ನೂ ಮಾಡಿದೆ. ಅಲ್ಲದೆ ದೇಶದ ಸೈನಿಕರಿಗೆ ಶ್ರದ್ಧಾಂಜಲಿ ಸೂಚಿಸುವ ನಿಟ್ಟಿನಲ್ಲಿ ಪುತ್ತೂರಿನಲ್ಲಿ ಅಮರ್ ಜವಾನ್ ಜ್ಯೋತಿಯನ್ನೂ ಸ್ಥಾಪಿಸಲಾಗಿದ್ದು, ವರ್ಷಪೂರ್ತಿ, ದಿನದ 24 ಗಂಟೆಯೂ ಇಲ್ಲಿ ಜ್ಯೋತಿ ಉರಿಯುವಂತೆ ವ್ಯವಸ್ಥೆಯನ್ನೂ ಅಂಬಿಕಾ ಮಹಾವಿದ್ಯಾಲಯ ಮಾಡಿದೆ.

ಇದನ್ನೂ ಓದಿ: ಕಾಶ್ಮೀರ ಫೈಲ್ಸ್ ಎಫೆಕ್ಟ್- ಕಾಶ್ಮೀರಿ ಪಂಡಿತರ ಮಕ್ಕಳಿಗೆ ಉಚಿತ ಶಿಕ್ಷಣದ ಆಫರ್ ನೀಡಿದ ಪುತ್ತೂರಿನ ವಿದ್ಯಾಸಂಸ್ಥೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.