ETV Bharat / city

ಅತ್ತೆ, ಸೊಸೆಯಾಯ್ತು, ಈಗ ನೆರೆಮನೆಯಾಕೆ ಸೋಂಕಿಗೆ ಬಲಿ!: ರಾಜ್ಯದಲ್ಲಿ 22ಕ್ಕೇರಿದ ಸಾವಿನ ಸರಣಿ - corona deaths in karnataka

ಮಂಗಳೂರಿನ ವೆನ್ಲಾಕ್​ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಕೊರೊನಾ ಸೋಂಕಿತ ಮಹಿಳೆ ಇಂದು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದು, ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಾವಿನ ಸಂಖ್ಯೆ 22ಕ್ಕೆ ಏರಿಕೆಯಾಗಿದೆ.

corona
ಕೊರೊನಾ
author img

By

Published : Apr 30, 2020, 8:35 PM IST

ಮಂಗಳೂರು: ಮಂಗಳೂರಿನಲ್ಲಿ ಕೊರೊನಾ ಸೋಂಕಿತ ಮಹಿಳೆ ಇಂದು ಸಾವನ್ನಪ್ಪಿದ್ದಾರೆ. ಈ ಮೂಲಕ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾದಿಂದ ಮೃತಪಟ್ಟವರ ಸಂಖ್ಯೆ ಮೂರಕ್ಕೆ ಏರಿಕೆಯಾಗಿದೆ.

ಬಂಟ್ವಾಳ ಕಸಬಾದ ಮಹಿಳೆ ಕೊರೊನಾ ಸೋಂಕಿಗೊಳಗಾಗಿ ಮಂಗಳೂರಿನ ವೆನ್ಲಾಕ್ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಇಂದು ಸಂಜೆ 5.40ಕ್ಕೆ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ.

ಬಂಟ್ವಾಳ ಕಸಬಾ ಗ್ರಾಮದ ಅತ್ತೆ ಮತ್ತು ಸೊಸೆ ಇತ್ತೀಚೆಗೆ ಸಾವನ್ನಪ್ಪಿದ್ದರು. ಬಂಟ್ವಾಳದ ಅತ್ತೆ ಸೊಸೆ ಮನೆಯ ನೆರಮನೆಯಲ್ಲಿದ್ದ ಈ ಮಹಿಳೆ ಮತ್ತು ಮಗಳಿಗೆ ಕೊರೊನಾ ದೃಢಪಟ್ಟಿತ್ತು. ಇವರಿಗೆ ವೆನ್ಲಾಕ್​ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು.

ಇತ್ತೀಚೆಗೆ ತೀವ್ರ ಉಸಿರಾಟದ ಸಮಸ್ಯೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅವರನ್ನು ಐಸಿಯುನಲ್ಲಿ ಇರಿಸಿ ವೆಂಟಿಲೇಟರ್ ಚಿಕಿತ್ಸೆ ನೀಡಲಾಗುತ್ತಿದ್ದು, ಇಂದು ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ. ಈ ಮೂಲಕ ರಾಜ್ಯದಲ್ಲಿ ಕೊರೊನಾ ಸೋಂಕಿನಿಂದ ಸಾವನ್ನಪ್ಪಿದವರ ಸಂಖ್ಯೆ 22ಕ್ಕೆ ಏರಿಕೆಯಾಗಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.