ETV Bharat / city

ತೀರ್ಪಿಗೆ ವಿರೋಧ: ಪ್ರತಿಭಟನೆ ನಡೆಸುತ್ತಿದ್ದ ಐವರು SDPI ಮುಖಂಡರು ಪೊಲೀಸ್​ ವಶಕ್ಕೆ - SDPI leaders protest against babri masjid verdict

ಇಂದು ಪ್ರಕಟಗೊಂಡ ಬಾಬ್ರಿ ಮಸೀದಿ ಐತಿಹಾಸಿಕ ತೀರ್ಪು ವಿರೋಧಿಸಿ, ಮಂಗಳೂರಿನ ಜಿಲ್ಲಾಧಿಕಾರಿ ಕಚೇರಿ ಮುಂದೆ ಎಸ್​ಡಿಪಿಐ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದರು. ಅನುಮತಿ ಪಡೆಯದೇ ಪ್ರತಿಭಟನೆ ನಡೆಸಿದ ಹಿನ್ನೆಲೆಯಲ್ಲಿ ಐವರು ಎಸ್​ಡಿಪಿಐ ಮುಖಂಡರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

arrest of SDPI leaders in Mangalore
SDPI ಮುಖಂಡರು ಪೊಲೀಸ್​ ವಶಕ್ಕೆ
author img

By

Published : Sep 30, 2020, 5:25 PM IST

ಮಂಗಳೂರು: ಬಾಬ್ರಿ ಮಸೀದಿ ತೀರ್ಪು ವಿರೋಧಿಸಿ ಮಂಗಳೂರಿನಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಐವರು ಎಸ್​ಡಿಪಿಐ ಮುಖಂಡರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ಇಂದು ಪ್ರಕಟಗೊಂಡ ಬಾಬ್ರಿ ಮಸೀದಿ ಐತಿಹಾಸಿಕ ತೀರ್ಪು ವಿರೋಧಿಸಿ, ಮಂಗಳೂರಿನಲ್ಲಿರುವ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟಿಸಲು ಎಸ್​ಡಿಪಿಐ ಆಯೋಜಿಸಿತ್ತು. ಪ್ರತಿಭಟನೆ ನಡೆಸುತ್ತಿದ್ದ ವೇಳೆ, ಅಲ್ಲಿಗೆ ಬಂದ ಪೊಲೀಸರು ಪ್ರತಿಭಟನಾಕಾರರನ್ನು ವಶಕ್ಕೆ ಪಡೆದರು. ಎಸ್​ಡಿಪಿಐ ರಾಜ್ಯ ಮುಖಂಡ ಅಶ್ರಫ್ ಮಾಚಾರ್ ಸೇರಿದಂತೆ ಐವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಮುಖಂಡರನ್ನು ವಶಕ್ಕೆ ಪಡೆದ ಹಿನ್ನೆಲೆಯಲ್ಲಿ ಪ್ರತಿಭಟನೆಗೆ ಬಂದಿದ್ದ ಇತರ ಕಾರ್ಯಕರ್ತರು ಅಲ್ಲಿಂದ ತೆರಳಿದರು.

SDPI ಮುಖಂಡರು ಪೊಲೀಸ್​ ವಶಕ್ಕೆ

ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಪ್ರತಿಭಟನೆ ನಡೆಸಲು ಇತ್ತೀಚೆಗೆ ಅವಕಾಶ ನಿರಾಕರಿಸಲಾಗಿದ್ದು, ಇಂದು ನಡೆಯುವ ಪ್ರತಿಭಟನೆಗೆ ಎಸ್​ಡಿಪಿಐ ಕಾರ್ಯಕರ್ತರು ಪೊಲೀಸರ ಅನುಮತಿಯನ್ನು ಪಡೆದುಕೊಂಡಿರಲಿಲ್ಲ. ಏಕಾಏಕಿ ಪ್ರತಿಭಟನೆ ನಡೆಸಲು ಬಂದ ಹಿನ್ನೆಲೆಯಲ್ಲಿ ಪ್ರತಿಭಟನೆ ನಡೆಯುತ್ತಿದ್ದಂತೆಯೆ ಮುಖಂಡರನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.