ETV Bharat / city

ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಯ ದರೋಡೆ ಮಾಡಿದ ಇಬ್ಬರ ಬಂಧನ

ರಸ್ತೆಯ ಬಳಿ ನಡೆದುಕೊಂಡು ಹೋಗುತ್ತಿರುವ ವ್ಯಕ್ತಿಯನ್ನು ದರೋಡೆ ಮಾಡಿದ ಇಬ್ಬರು ಆರೋಪಿಗಳನ್ನು ಪಣಂಬೂರು ಪೊಲೀಸರು ಬಂಧಿಸಿದ್ದಾರೆ.

ಇಬ್ಬರ ಬಂಧನ
author img

By

Published : Aug 12, 2019, 4:52 AM IST

ಮಂಗಳೂರು: ನಗರದ ಹೊರವಲಯದ ಬೈಕಂಪಾಡಿಯ ಕಾವೇರಿ ಫೋರ್ಡ್ ಕಂಪೆನಿಯ ರಸ್ತೆಯ ಬಳಿ ನಡೆದುಕೊಂಡು ಹೋಗುತ್ತಿರುವ ವ್ಯಕ್ತಿಯನ್ನು ದರೋಡೆ ಮಾಡಿದ ಇಬ್ಬರು ಆರೋಪಿಗಳನ್ನು ಪಣಂಬೂರು ಪೊಲೀಸರು ಬಂಧಿಸಿದ್ದಾರೆ.

ಕಸಬ ಬೆಂಗ್ರೆ ತೌಹೀದ್ ಮಂಜಿಲ್ ನಿವಾಸಿ ಸರ್ಫರಾಜ್ (28) ಹಾಗೂ ಕಸಬ ಬೆಂಗ್ರೆಯ ಸೈಯದ್ ಅಫ್ರಿದ್ ಯಾನೆ ಕುಡಿಯ ಅಪ್ಪಿ (21) ಬಂಧಿತರು. ಆಗಸ್ಟ್ 6 ರಂದು ಆರೋಪಿಗಳು ಬೈಕಂಪಾಡಿಯ ಕಾವೇರಿ ಫೋರ್ಡ್ ಕಂಪೆನಿಯ ರಸ್ತೆಯ ಬಳಿ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಯೋರ್ವರ ಮೊಬೈಲ್ ಹಾಗೂ ಬ್ಯಾಗ್ ಕಸಿದುಕೊಂಡು ಪರಾರಿಯಾಗಿದ್ದರು. ಈ ಬಗ್ಗೆ ಪಣಂಬೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಪೊಲೀಸರು ಆರೋಪಿಗಳನ್ನು ಪತ್ತೆ ಹಚ್ಚಿ ಆರೋಪಿಗಳಿಂದ ಕೃತ್ಯಕ್ಕೆ ಬಳಸಿದ ನಂಬರ್ ಪ್ಲೇಟ್ ಇಲ್ಲದ ಸ್ಕೂಟರ್, ತಲವಾರು ಮತ್ತು ಕಬ್ಬಿಣದ ರಾಡ್‌ಗಳನ್ನು ವಶಪಡಿಸಿಕೊಂಡಿದ್ದಾರೆ. ಪೊಲೀಸರು ವಶಪಡಿಸಿಕೊಂಡ ಒಟ್ಟು ಮೌಲ್ಯ 68 ಸಾವಿರ ರೂ. ಎಂದು ಅಂದಾಜಿಸಲಾಗಿದೆ.

ಪೊಲೀಸ್ ಆಯುಕ್ತ ಡಾ.ಪಿ.ಎಸ್ ಹರ್ಷ ನಿರ್ದೇಶನದಂತೆ ಡಿಸಿಪಿಗಳಾದ ಹನುಮಂತರಾಯ, ಲಕ್ಷ್ಮೀ ಗಣೇಶ್ ಮಾರ್ಗದರ್ಶನದಲ್ಲಿ ಎಸಿಪಿ ಶ್ರೀನಿವಾಸ ಗೌಡ ನೇತೃತ್ವದಲ್ಲಿ ಪಣಂಬೂರು ಇನ್ಸ್​ಪೆಕ್ಟರ್ ಅಜ್ಮತ್‌ಅಲಿ, ಪಿಎಸ್​ಐ ಎಂ.ಎನ್.ಉಮೇಶ್‌ಕುಮಾರ್ ಹಾಗೂ ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.

Intro:ಮಂಗಳೂರು: ನಗರದ ಹೊರವಲಯದ ಬೈಕಂಪಾಡಿಯ ಕಾವೇರಿ ಫೋರ್ಡ್ ಕಂಪೆನಿಯ ರಸ್ತೆಯ ಬಳಿ ನಡೆದುಕೊಂಡು ಹೋಗುತ್ತಿರುವ ವ್ಯಕ್ತಿಯನ್ನು ದರೋಡೆ ಮಾಡಿದ ಇಬ್ಬರು ಆರೋಪಿಗಳನ್ನು ಪಣಂಬೂರು ಪೊಲೀಸರು ಬಂಧಿಸಿದ್ದಾರೆ.

ಕಸಬ ಬೆಂಗ್ರೆ ತೌಹೀದ್ ಮಂಜಿಲ್ ನಿವಾಸಿ ಸರ್ಫರಾಜ್ (28) ಹಾಗೂ ಕಸಬ ಬೆಂಗ್ರೆಯ ಸೈಯದ್ ಅಫ್ರಿದ್ ಯಾನೆ ಕುಡಿಯ ಅಪ್ಪಿ(21) ಬಂಧಿತರು.

ಆಗಸ್ಟ್ 6 ರಂದು ಆರೋಪಿಗಳು ಬೈಕಂಪಾಡಿಯ ಕಾವೇರಿ ಫೋರ್ಡ್ ಕಂಪೆನಿಯ ರಸ್ತೆಯ ಬಳಿ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಯೋರ್ವರ ಮೊಬೈಲ್ ಹಾಗೂ ಬ್ಯಾಗ್ ಕಸಿದುಕೊಂಡು ಪರಾರಿಯಾಗಿದ್ದರು. ಈ ಬಗ್ಗೆ ಪಣಂಬೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

Body:ಪೊಲೀಸರು ಆರೋಪಿಗಳನ್ನು ಪತ್ತೆ ಹಚ್ಚಿ ಆರೋಪಿಗಳಿಂದ ಕೃತ್ಯಕ್ಕೆ ಬಳಸಿದ ನಂಬರ್ ಪ್ಲೇಟ್ ಇಲ್ಲದ ‘ಗ್ರೇ’ ಬಣ್ಣದ ಆಕ್ಟಿವಾ ಸ್ಕೂಟರ್, ತಲವಾರು ಮತ್ತು ಕಬ್ಬಿಣದ ರಾಡ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ. ಸ್ವಾಧೀನಪಡಿಸಿದ ಸೊತ್ತಿನ ಒಟ್ಟು ಮೌಲ್ಯ 68 ಸಾವಿರ ರೂ. ಎಂದು ಅಂದಾಜಿಸಲಾಗಿದೆ.

ಪೊಲೀಸ್ ಆಯುಕ್ತ ಡಾ.ಪಿ.ಎಸ್.ಹರ್ಷ ನಿರ್ದೇಶನದಂತೆ ಡಿಸಿಪಿಗಳಾದ ಹನುಮಂತರಾಯ, ಲಕ್ಷ್ಮೀ ಗಣೇಶ್ ಮಾರ್ಗದರ್ಶನದಲ್ಲಿ ಎಸಿಪಿ ಶ್ರೀನಿವಾಸ ಗೌಡ ನೇತೃತ್ವದಲ್ಲಿ ಪಣಂಬೂರು ಇನ್‌ಸ್ಪೆಕ್ಟರ್ ಅಜ್ಮತ್‌ಅಲಿ, ಪಿಎಸ್ಸೈ ಎಂ.ಎನ್.ಉಮೇಶ್‌ಕುಮಾರ್ ಹಾಗೂ ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.

Reporter_Vishwanath PanjimogaruConclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.