ETV Bharat / city

ಮಂಗಳೂರು: ಎಸ್ಪಿ ಕಚೇರಿಗೆ ಹೋಗುತ್ತಿದ್ದ ಎಎಸ್ಐ ಕುಸಿದು ಬಿದ್ದು ಸಾವು!

ಎಎಸ್ಐ ತಿಪ್ಪಣ ನಾಗವ್ವ ಮಾದರ ಅವರು ಎಸ್​​ಪಿ ಕಚೇರಿಯಲ್ಲಿರುವ ಬೆರಳು ಮುದ್ರೆ ಘಟಕಕ್ಕೆ ಎ.ಬಿ ಶೆಟ್ಟಿ ಸರ್ಕಲ್ ಬಳಿಯಿಂದ ನಡೆದುಕೊಂಡು ಹೋಗುತ್ತಿದ್ದ ವೇಳೆ ಕುಸಿದುಬಿದ್ದು ಸಾವನ್ನಪ್ಪಿದ್ದಾರೆ.

author img

By

Published : Mar 5, 2022, 10:52 AM IST

ASI Tippanna died after collapsed in Mangalore
ಮಂಗಳೂರಿನಲ್ಲಿ ಕುಸಿದುಬಿದ್ದು ಎಎಸ್ಐ ಸಾವು

ಮಂಗಳೂರು (ದಕ್ಷಿಣ ಕನ್ನಡ): ದಕ್ಷಿಣ ಕನ್ನಡ ಜಿಲ್ಲಾ ಎಸ್ಪಿ ಕಚೇರಿಗೆ ನಡೆದುಕೊಂಡು ಹೋಗುತ್ತಿದ್ದ ಎಎಸ್ಐ ಒಬ್ಬರು ಕುಸಿದುಬಿದ್ದು ಸಾವನ್ನಪ್ಪಿದ ಘಟನೆ ಶುಕ್ರವಾರದಂದು ನಡೆದಿದೆ. ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿಯಲ್ಲಿ ಬೆರಳುಮುದ್ರೆ ಘಟಕದಲ್ಲಿ ಸಹಾಯಕ ಪೊಲೀಸ್ ಉಪನಿರೀಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದ ತಿಪ್ಪಣ ನಾಗವ್ವ ಮಾದರ (37) ಮೃತಪಟ್ಟವರು.

ಮೂಲತಃ ಬೆಳಗಾವಿ ಜಿಲ್ಲೆಯ ರಾಮದುರ್ಗದ ಇವರು 2011ರಲ್ಲಿ ಪೊಲೀಸ್ ಕಾನ್ಸ್​ಟೇಬಲ್ ಆಗಿ ಇಲಾಖೆಗೆ ಸೇರಿದ್ದರು. ಬಾಗಲಕೋಟೆಯಲ್ಲಿ ಹೆಡ್ ಕಾನ್ಸ್​ಟೇಬಲ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಇವರು ಆರು ತಿಂಗಳ ಹಿಂದೆ ಮುಂಬಡ್ತಿಗೊಂಡು ದಕ್ಷಿಣ ಕನ್ನಡ ಜಿಲ್ಲಾ ಬೆರಳು ಮುದ್ರೆ ಘಟಕದಲ್ಲಿ ಎಎಸ್ಐ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದರು.

ಇದನ್ನೂ ಓದಿ: ಅವಹೇಳನಕಾರಿ ಹೇಳಿಕೆ: ನಟ ಚೇತನ್ ವಿರುದ್ಧ ಚಾರ್ಜ್​​​​ಶೀಟ್ ಸಲ್ಲಿಕೆಗೆ ಅನುಮತಿ ಕೇಳಿದ ಪೊಲೀಸರು

ಎಸ್​​ಪಿ ಕಚೇರಿಯಲ್ಲಿರುವ ಬೆರಳು ಮುದ್ರೆ ಘಟಕಕ್ಕೆ ಎ.ಬಿ ಶೆಟ್ಟಿ ಸರ್ಕಲ್ ಬಳಿಯಿಂದ ನಡೆದುಕೊಂಡು ಹೋಗುತ್ತಿದ್ದಾಗ ಕುಸಿದುಬಿದ್ದಿದ್ದಾರೆ. ಕೂಡಲೇ ಅವರನ್ನು ಎಂ.ವಿ ಶೆಟ್ಟಿ ಆಸ್ಪತ್ರೆಗೆ ದಾಖಲಿಸಿ ಪ್ರಥಮ ಚಿಕಿತ್ಸೆ ನೀಡಿ ಬಳಿಕ ಕೆಎಂಸಿ ಆಸ್ಪತ್ರೆಗೆ ಕೊಂಡೊಯ್ಯುವ ವೇಳೆ ಸಾವನ್ನಪ್ಪಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.