ಉಪ್ಪಿನಂಗಡಿ(ದಕ್ಷಿಣ ಕನ್ನಡ): ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿ ಸಮೀಪದ ಮಣ್ಣಗುಂಡಿ ಎಂಬಲ್ಲಿ ಸಾಕು ಕರು ತೆಗೆದುಕೊಂಡು ಹೋಗುತ್ತಿದ್ದ ಮಹಿಳೆ ಮೇಲೆ ಸಂಘಟನೆಯೊಂದರ ಕಾರ್ಯಕರ್ತರು ಹಲ್ಲೆ ನಡೆಸಿದ್ದಾರೆ. ಬಜರಂಗ ದಳದ ಕಾರ್ಯಕರ್ತರು ಮಹಿಳೆ ಮೇಲೆ ಹಲ್ಲೆ ಮಾಡಿ, ಕಿರುಕುಳ ನೀಡಿರುವ ವರದಿಗಳನ್ನು ಕೇಳಿ ಅತೀವ ಬೇಸರವಾಗಿದೆ. ಬಜರಂಗದಳದ ಕಾರ್ಯಕರ್ತರು ರಣಹದ್ದುಗಳ ರೀತಿ ವರ್ತಿಸುತ್ತಿದ್ದಾರೆ ಎಂದು ವಿಧಾನಸಭೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಟ್ವೀಟ್ ಮೂಲಕ ಪ್ರತಿಕ್ರಿಯಿಸಿದ್ದಾರೆ.
ಈ ಕುರಿತು ಟ್ವಿಟ್ ಮಾಡಿರುವ ಅವರು, ಕರ್ನಾಟಕದಲ್ಲಿ ಕಾನೂನು, ಸುವ್ಯವಸ್ಥೆ ವ್ಯವಸ್ಥಿತವಾಗಿಲ್ಲ. ಇದು ಕರ್ನಾಟಕದ ಹಿತದೃಷ್ಟಿಯಿಂದ ಒಳ್ಳೆಯದಲ್ಲ. ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ರಾಜೀನಾಮೆ ನೀಡಲಿ. ಬಿಜೆಪಿಯು ನಕಲಿ ಚೌಕಿದಾರರಿಂದ ತುಂಬಿದೆ ಮತ್ತು ಕರ್ನಾಟಕವು ಯುಪಿಯಂತಾಗುವುದನ್ನು ತಪ್ಪಿಸಲು ಬದಲಾವಣೆಯ ಅಗತ್ಯವಿದೆ ಎಂದಿದ್ದಾರೆ.
-
The law & order in Karnataka under @BJP4Karnataka minister @JnanendraAraga is non-existent.
— Siddaramaiah (@siddaramaiah) April 30, 2022 " class="align-text-top noRightClick twitterSection" data="
It is for the benefit of Karnataka we demand the resignation of @JnanendraAraga.
BJP is filled with fake chowkidars, & Karnataka needs change to avoid becoming like UP.#StopHatred
">The law & order in Karnataka under @BJP4Karnataka minister @JnanendraAraga is non-existent.
— Siddaramaiah (@siddaramaiah) April 30, 2022
It is for the benefit of Karnataka we demand the resignation of @JnanendraAraga.
BJP is filled with fake chowkidars, & Karnataka needs change to avoid becoming like UP.#StopHatredThe law & order in Karnataka under @BJP4Karnataka minister @JnanendraAraga is non-existent.
— Siddaramaiah (@siddaramaiah) April 30, 2022
It is for the benefit of Karnataka we demand the resignation of @JnanendraAraga.
BJP is filled with fake chowkidars, & Karnataka needs change to avoid becoming like UP.#StopHatred
ಹಿಂದೂ ಸಂಸ್ಕೃತಿಯ ರಕ್ಷಕರು ಎಂದು ಬಜರಂಗದಳ ಕಾರ್ಯಕರ್ತರು ಹೇಳಿಕೊಳ್ಳುತ್ತಾರೆ. ಅವರ ಯಾವ ಧಾರ್ಮಿಕ ಗ್ರಂಥಗಳು ಮಹಿಳೆಯ ಮಂಗಳಸೂತ್ರ ಮತ್ತು ಸೀರೆ ಎಳೆಯಲು ಕೇಳಿಕೊಂಟ್ಟಿವೆ.? ಅಥವಾ ಇದು ಅವರ ಪೂರ್ವಜರು ಕಲಿಸಿದ ಪಾಠವೇ? ಬಜರಂಗದಳಕ್ಕೆ ಸೇರಿದ ದುಷ್ಕರ್ಮಿಗಳ ವಿರುದ್ಧ ಪ್ರಕರಣ ದಾಖಲಿಸಲು ಪೊಲೀಸರು ಹಿಂದೇಟು ಹಾಕುತ್ತಿದ್ದಾರೆ ಎಂಬುದಾಗಿಯೂ ವರದಿಯಾಗಿದೆ ಎಂದಿದ್ದಾರೆ.
ಕರ್ನಾಟಕದ ಪೊಲೀಸ್ ಇಲಾಖೆಯು ಜನಸಾಮಾನ್ಯರಿಗಾಗಿ ಕೆಲಸ ಮಾಡುತ್ತಿದೆಯೇ ಅಥವಾ ಬಿಜೆಪಿ ಮತ್ತು ಅದರ ಮಿತ್ರಪಕ್ಷಗಳ ಗೂಂಡಾಗಳಿಗಾಗಿ ಕೆಲಸ ಮಾಡುತ್ತಿದೆಯೇ? ಎಂದು ಸಿದ್ದರಾಮಯ್ಯ ಟ್ವೀಟ್ ಮೂಲಕ ಪ್ರತಿಕ್ರಿಯಿಸಿದ್ದಾರೆ.
ಇದನ್ನೂ ಓದಿ: ಪಿಎಸ್ಐ ನೇಮಕಾತಿ ಅಕ್ರಮ: ಟಾಪ್ 10 ರ್‍ಯಾಂಕ್‌ನಲ್ಲಿ ಪಾಸ್ ಆಗಿದ್ದ ಕಾನ್ಸ್ಟೇಬಲ್ ಬಂಧನ?