ಮಂಗಳೂರು: ಮಹಾನಗರ ಪಾಲಿಕೆಯ ಬಜಾಲ್ ವಾರ್ಡ್ನಲ್ಲಿ 1 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾಗುವ ರಸ್ತೆ ಕಾಮಗಾರಿಗೆ ಶಾಸಕ ವೇದವ್ಯಾಸ ಕಾಮತ್ ಶಿಲಾನ್ಯಾಸ ನೆರವೇರಿಸಿದರು.
ಬಳಿಕ ಮಾತನಾಡಿದ ವೇದವ್ಯಾಸ ಕಾಮತ್, ಬಜಾಲ್ ವಾರ್ಡ್ ಸರ್ವತೋಮುಖ ಅಭಿವೃದ್ಧಿಗಾಗಿ ವಿಶೇಷ ಅನುದಾನಗಳನ್ನು ಒದಗಿಸಲಾಗುತ್ತಿದೆ. ಆದ್ದರಿಂದ ಬಜಾಲ್ ಜಲ್ಲಿಗುಡ್ಡೆಯ ಕೋರ್ದಬ್ಬು ದೇವಸ್ಥಾನ ಬಳಿಯಿಂದ ಕಾನಕರಿಯ ಬಂಟ ಮಂದಿರದವರೆಗಿನ ರಸ್ತೆ ಸಂಪೂರ್ಣ ಹಾಳಾಗಿರೋದರಿಂದ ಮಳೆಗಾಲದಲ್ಲಿ ಸಂಚರಿಸುವುದು ಕಷ್ಟವಾಗಿತ್ತು. ಹಾಗಾಗಿ ಮುಖ್ಯಮಂತ್ರಿಯವರ ವಿಶೇಷ ಅನುದಾನದಿಂದ ಲೋಕೋಪಯೋಗಿ ಇಲಾಖೆಯ ಮೂಲಕ 1 ಕೋಟಿ ರೂ. ಅನುದಾನ ಬಿಡುಗಡೆಗೊಳಿಸಿ ರಸ್ತೆ ಕಾಮಗಾರಿ ಕೈಗೆತ್ತಿಕೊಳ್ಳಲಾಗಿದೆ ಎಂದರು.
ವಲಸೆ ಕಾರ್ಮಿಕರ ಕೊರತೆಯಿಂದ ಕಾಮಗಾರಿ ನಿಧಾನಗೊಳ್ಳುತ್ತಿದ್ದು, ಕಾಮಗಾರಿ ತ್ವರಿತವಾಗಿ ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ. ಸಾರ್ವಜನಿಕರೂ ಸಹಕರಿಸಬೇಕೆಂದು ಮನವಿ ಮಾಡಿದರು.
ಈ ವೇಳೆ ಸ್ಥಳೀಯ ಪಾಲಿಕೆ ಸದಸ್ಯ ಅಶ್ರಫ್, ಮನಪಾ ಸ್ಥಾಯಿ ಸಮಿತಿ ಅಧ್ಯಕ್ಷ ಜಗದೀಶ್ ಶೆಟ್ಟಿ ಬೋಳೂರು, ಪೂರ್ಣಿಮಾ, ಬಿಜೆಪಿ ನಾಯಕರಾದ ಚಂದ್ರಶೇಖರ ಜಯನಗರ, ಭಾಸ್ಕರ ಚಂದ್ರ ಶೆಟ್ಟಿ, ವಸಂತ್ ಪೂಜಾರಿ, ಶಿವಾಜಿ ರಾವ್, ಯಶವಂತ ಶೆಟ್ಟಿ, ಹರಿಪ್ರಸಾದ್, ಸ್ಥಳಿಯರಾದ ಉಸ್ಮಾನ್, ವಿನೀತ್, ಇಮ್ತಿಯಾಜ್, ಪ್ರೀತೇಶ್, ರಾಮಣ್ಣ ಕಾನಕರಿಯ ಮತ್ತಿತರರು ಉಪಸ್ಥಿತರಿದ್ದರು.