ETV Bharat / city

ಲವ್ ಜಿಹಾದ್ ತಡೆಗೆ ಮುಂದಿನ ಅಧಿವೇಶನದಲ್ಲಿ ಕಾನೂನು : ಕಟೀಲ್

author img

By

Published : Nov 28, 2020, 4:44 PM IST

ತುಷ್ಟೀಕರಣ ನೀತಿಯಿಂದಾಗಿ ಕಾಂಗ್ರೆಸ್ ಇಂದು ಮೂಲೆಗುಂಪಾಗಿದೆ. ಗ್ರಾಮಗಳಲ್ಲಿ ನಿಜವಾದ ಸ್ವರಾಜ್ಯ ಮೂಡಿಬರಲು ಬಿಜೆಪಿ ಅಧಿಕಾರಕ್ಕೆ ಬರುವುದು ಅನಿವಾರ್ಯ..

BJP president and MP Nalin Kumar Kateel talk news
ಸಂಸದ ನಳಿನ್ ಕುಮಾರ್ ಕಟೀಲ್

ಬಂಟ್ವಾಳ : ಲವ್ ಜಿಹಾದ್ ತಡೆಗೆ ಮುಂದಿನ ಅಧಿವೇಶನದಲ್ಲಿ ಕಾನೂನು ರೂಪಿಸಲಾಗುವುದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ. ಬಂಟ್ವಾಳದ ಸ್ಪರ್ಶ ಕಲಾ ಮಂದಿರದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ವತಿಯಿಂದ ಬಂಟ್ವಾಳ, ಮೂಡುಬಿದಿರೆ, ಮಂಗಳೂರು, ಮಂಗಳೂರು ನಗರ ಉತ್ತರ ಕ್ಷೇತ್ರ ವ್ಯಾಪ್ತಿಗೆ ಒಳಪಟ್ಟ ಬಿಜೆಪಿ ಗ್ರಾಮ ಸ್ವರಾಜ್ಯ ಸಮಾವೇಶದಲ್ಲಿ ಅವರು ಮಾತನಾಡಿದರು.

ಸಂಸದ ನಳಿನ್ ಕುಮಾರ್ ಕಟೀಲ್

ಪ್ರತಿ ಪಂಚಾಯತ್‌ಗೆ 1 ರಿಂದ 2 ಕೋಟಿ ರೂ.ಗಳಷ್ಟು ಅನುದಾನ ಬರಲಿದೆ. ಗ್ರಾಮ ಪಂಚಾಯತ್ ಅಧ್ಯಕ್ಷರು ಪ್ರಧಾನಿಯಷ್ಟೇ ಪವರ್ ಫುಲ್ ಆಗಲಿದ್ದಾರೆ ಎಂದರು. ದೇಶ ವಿರೋಧಿ ಕೃತ್ಯಗಳನ್ನು ಬಿಜೆಪಿ ಸಹಿಸುವುದಿಲ್ಲ. ಮಂಗಳೂರಿನಲ್ಲಿ ಕಿಡಿಗೇಡಿಗಳು ಬರೆದ ದೇಶದ್ರೋಹಿ ಗೋಡೆಬರಹಕ್ಕೆ ಸಂಬಂಧಿಸಿ ಆರೋಪಿಗಳನ್ನು ಬಂಧಿಸುವಂತೆ ಗೃಹ ಸಚಿವರು ಸೂಚನೆ ನೀಡಿದ್ದಾರೆ ಎಂದರು.

ತುಷ್ಟೀಕರಣ ನೀತಿಯಿಂದಾಗಿ ಕಾಂಗ್ರೆಸ್ ಇಂದು ಮೂಲೆಗುಂಪಾಗಿದೆ. ಗ್ರಾಮಗಳಲ್ಲಿ ನಿಜವಾದ ಸ್ವರಾಜ್ಯ ಮೂಡಿಬರಲು ಬಿಜೆಪಿ ಅಧಿಕಾರಕ್ಕೆ ಬರುವುದು ಅನಿವಾರ್ಯ ಎಂದು ಕಾರ್ಯಕ್ರಮವನ್ನು ಉದ್ಘಾಟಿಸಿದ ಉಪಮುಖ್ಯಮಂತ್ರಿ ಡಾ. ಸಿ.ಎನ್.ಅಶ್ವತ್ಥ್ ನಾರಾಯಣ ಹೇಳಿದರು.

ಬಿಜೆಪಿ ರಾಜ್ಯ ಉಪಾಧ್ಯಕ್ಷೆ, ಸಂಸದೆ ಶೋಭಾ ಕರಂದ್ಲಾಜೆ ಮಾತನಾಡಿ, ಬಿಜೆಪಿ ಈಗ ಗೆಲ್ಲುವ ಪಾರ್ಟಿ ಆಗಿದೆ. ನಮ್ಮ ವಿಚಾರಧಾರೆಯನ್ನು ಒಪ್ಪಿ ಹೊಸ ನೀರು ಬಂದ ಕಾರಣದಿಂದಲೇ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದಿದೆ. ಗ್ರಾಮಮಟ್ಟದಲ್ಲೂ ಇಂತಹ ಕ್ರಾಂತಿಯಾಗಬೇಕಿದೆ ಎಂದರು.

ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಮಹೇಶ್ ಟೆಂಗಿನಕಾಯಿ, ಕೋಲಾರ ಸಂಸದ ಮುನಿಸ್ವಾಮಿ, ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು, ಶಾಸಕರಾದ ಉಮಾನಾಥ ಕೋಟ್ಯಾನ್, ಡಾ. ವೈ. ಭರತ್ ಶೆಟ್ಟಿ, ವೇದವ್ಯಾಸ ಕಾಮತ್ ಮಾತನಾಡಿದರು.

ಇದನ್ನೂ ಓದಿ: ನಾವು ಇನ್ನೂ ಮಂತ್ರಿ ಆಗಿಲ್ಲ, ನಮ್ಮ ಹಣೆಬರಹ ಕೆಟ್ಟಿರಬೇಕು.. ಎಂಎಲ್‌ಸಿ ಎಂಟಿಬಿ ನಾಗರಾಜ್​

ETV Bharat Logo

Copyright © 2024 Ushodaya Enterprises Pvt. Ltd., All Rights Reserved.