ETV Bharat / city

ಹಿಜಾಬ್ ಹೆಸರಿನಲ್ಲಿ ನಮ್ಮ ಪ್ರದೇಶವನ್ನು ತಾಲಿಬಾನ್ ಮಾಡಲು ಅವಕಾಶ ನೀಡುವುದಿಲ್ಲ: ಕಟೀಲ್​ ಕಿಡಿ - ಹಿಜಾಬ್ ಬಗ್ಗೆ ಕಟೀಲ್​ ಹೇಳಿಕೆ

ರಾಜ್ಯದಲ್ಲಿ ಬಿಜೆಪಿ ನೇತೃತ್ವದ ಸರ್ಕಾರ ಇದ್ದು, ಹಿಜಾಬ್ ಅಥವಾ ಇಂತಹ ಯಾವುದೇ ಘಟನೆಗಳಿಗೆ ಆಸ್ಪದವಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್​ ಪ್ರತಿಕ್ರಿಯಿಸಿದ್ದಾರೆ.

BJP President naleen kumar katil
ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್
author img

By

Published : Feb 5, 2022, 12:15 PM IST

Updated : Feb 5, 2022, 12:33 PM IST

ಮಂಗಳೂರು (ದಕ್ಷಿಣ ಕನ್ನಡ): ರಾಜ್ಯದಲ್ಲಿ ಬಿಜೆಪಿ ನೇತೃತ್ವದ ಸರ್ಕಾರ ಇದ್ದು, ಹಿಜಾಬ್ ಅಥವಾ ಇಂತಹ ಯಾವುದೇ ಘಟನೆಗಳಿಗೆ ಆಸ್ಪದವಿಲ್ಲ. ನಮ್ಮ ಸರ್ಕಾರ ಈ ಬಗ್ಗೆ ಕಟ್ಟುನಿಟ್ಟಿನ ಕ್ರಮ ತೆಗೆದುಕೊಳ್ಳುತ್ತದೆ. ಕರಾವಳಿಯನ್ನು, ನಮ್ಮ ಪ್ರದೇಶವನ್ನು ತಾಲಿಬಾನ್ ಮಾಡಲು ಅವಕಾಶ ನೀಡುವುದಿಲ್ಲ ಎಂದು ಹಿಜಾಬ್ ವಿವಾದದ ಬಗ್ಗೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್​ ಅವರು ಮಂಗಳೂರಿನಲ್ಲಿಂದು ಖಾರವಾಗಿ ಪ್ರತಿಕ್ರಿಯೆ ನೀಡಿದರು.

ಹಿಜಾಬ್ ವಿವಾದದ ಬಗ್ಗೆ ಕಟೀಲ್​ ಪ್ರತಿಕ್ರಿಯೆ

ಶಾಲಾ-ಕಾಲೇಜು ಎನ್ನುವುದು ಸರಸ್ವತಿ ಮಂದಿರವಾಗಿದ್ದು, ಅಲ್ಲಿ ಶಾಲೆಯ ನಿಯಮಗಳೊಂದಿಗೆ ಶಿಕ್ಷಣ ಪಡೆಯುವುದು ಧರ್ಮ. ಶಾಲೆಯೊಳಗೆ ಬೇರೆ ಧರ್ಮವನ್ನು ತರುವುದು ಸರಿಯಲ್ಲ.‌ ಶಾಲೆಯಲ್ಲಿ ಶಾಲೆಯ ನಿಯಮದಡಿಯಲ್ಲಿ ವ್ಯಾಸಂಗ ಮಾಡಬೇಕು. ಮಕ್ಕಳಿಗೆ ಶಿಕ್ಷಣದ ಅವಶ್ಯಕತೆ ಇದೆ. ಯಾರಿಗೆ ಇಂತಹ ಶಾಲೆಗಳಲ್ಲಿ ಶಿಕ್ಷಣ ಪಡೆಯಲು ಮನಸ್ಸಿಲ್ಲವೋ ಅವರು ಬೇರೆ ದಾರಿ ಹುಡುಕಿಕೊಳ್ಳಲಿ ಎಂದರು.

ಇದನ್ನೂ ಓದಿ: ಸಂಸತ್​ನಲ್ಲಿ 'ಕರ್ನಾಟಕದ ಹಿಜಾಬ್' ಸದ್ದು: ಎಐಎಂಐಎಂ,ಡಿಎಂಕೆ - ಕಾಂಗ್ರೆಸ್​ ಸಂಸದರಿಂದ ತರಾಟೆ!

ಹಿಜಾಬ್ ಬಗ್ಗೆ ಸಿದ್ದರಾಮಯ್ಯ ಅವರು ಹೇಳಿಕೆ ನೀಡಿರುವುದನ್ನು ನಾನು ನೋಡಿದ್ದೇನೆ. ಅವರು ಸಿಎಂ ಆಗಿದ್ದಾಗ ಟಿಪ್ಪು ಜಯಂತಿ ನಡೆಸಿ ಸಾಮರಸ್ಯ ಹಾಳು ಮಾಡಿದ್ದಾರೆ. ಶಾದಿಭಾಗ್ಯದ ಹೆಸರಿನಲ್ಲಿ ಕೆಲವೇ ಕೆಲವು ಸಮುದಾಯಗಳಿಗೆ ಯೋಜನೆ ನೀಡಿದ್ದರು. ಈಗ ಇವರು ಹಿಜಾಬ್ ಬಗ್ಗೆ ಮಾತನಾಡುತ್ತಾರೆ. ಸಿದ್ದರಾಮಯ್ಯ ಬಹಳ ಎಚ್ಚರಿಕೆಯಿಂದ ಮಾತನಾಡಬೇಕು. ಹಿಜಾಬ್ ವಿಚಾರವೀಗ ನ್ಯಾಯಾಲಯದಲ್ಲಿದೆ. ಅಲ್ಲಿಂದ ಯಾವ ರೀತಿಯ ನಿರ್ದೇಶನ ಬರುತ್ತದೆಯೆಂದು ಕಾದು ನೋಡೋಣ ಎಂದರು.

Last Updated : Feb 5, 2022, 12:33 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.