ETV Bharat / city

ಮಂಗಳೂರು-ಬೆಂಗಳೂರು ಹೆದ್ದಾರಿಯ ಗುಂಡಿ ಮುಚ್ಚಲು ಸೂಚನೆ: ನಳಿನ್ ಕುಮಾರ್ ಕಟೀಲ್

author img

By

Published : Aug 26, 2020, 5:34 PM IST

ಜಿಲ್ಲೆಯಲ್ಲಿ ಸುರಿದ ಮಳೆಯಿಂದಾಗಿ ಹೆದ್ದಾರಿಗಳ ಹಲವು ಕಡೆಗಳಲ್ಲಿ ಹೊಂಡ-ಗುಂಡಿಗಳು ಬಿದ್ದಿದ್ದು, ಅವುಗಳನ್ನು ಮಳೆ ಕಡಿಮೆಯಾದ ತಕ್ಷಣವೇ ದುರಸ್ತಿ ಮಾಡುವಂತೆ ಹೆದ್ದಾರಿ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಸಂಸದ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ.

BJP  State President Nalin Kumar Kateel  Statement
ಮಂಗಳೂರು-ಬೆಂಗಳೂರು ಹೆದ್ದಾರಿಯ ಗುಂಡಿ ಮುಚ್ಚಲು ಸೂಚಿಸಲಾಗಿದೆ: ನಳಿನ್ ಕುಮಾರ್ ಕಟೀಲ್

ಪುತ್ತೂರು (ದಕ್ಷಿಣ ಕನ್ನಡ): ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಮಳೆಯ ಕಾರಣದಿಂದಾಗಿ ಹಲವು ಕಡೆಗಳಲ್ಲಿ ಹೊಂಡ-ಗುಂಡಿಗಳು ನಿರ್ಮಾಣಗೊಂಡಿದ್ದು, ಮಳೆ ಕಡಿಮೆಯಾದ ತಕ್ಷಣವೇ ಅವುಗಳನ್ನು ದುರಸ್ತಿಪಡಿಸಲಾಗುವುದು ಎಂದು ಸಂಸದ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ನಳೀನ್​ ಕುಮಾರ್​ ಕಟೀಲ್

ಪುತ್ತೂರಿನಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಜಿಲ್ಲೆಯಲ್ಲಿ ಸುರಿದ ಮಳೆಯಿಂದಾಗಿ ಹೆದ್ದಾರಿಗಳ ಕೆಲವು ಕಡೆಗಳಲ್ಲಿ ಹೊಂಡ-ಗುಂಡಿಗಳು ಬಿದ್ದಿದ್ದು, ಅವುಗಳನ್ನು ಮಳೆ ಕಡಿಮೆಯಾದ ತಕ್ಷಣವೇ ದುರಸ್ತಿ ಮಾಡುವಂತೆ ಹೆದ್ದಾರಿ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ರಸ್ತೆಗೆ ಡಾಂಬರೀಕರಣ ಮಾಡುವ ಎಲ್ಲಾ ಪ್ಲಾಂಟ್​ಗಳು ಸೆಪ್ಟಂಬರ್ ಬಳಿಕವೇ ಕಾರ್ಯಾಚರಣೆ ನಡೆಸುವುದರಿಂದ ತಕ್ಷಣಕ್ಕೆ ಮರು ಡಾಂಬರೀಕರಣ ಮಾಡುವುದು ಸಾಧ್ಯವಿಲ್ಲ ಎಂದರು.

ಬಿ.ಸಿ.ರೋಡ್​ನಿಂದ ಅಡ್ಡಹೊಳೆವರೆಗಿನ ಹೆದ್ದಾರಿಯನ್ನು ಚತುಷ್ಪಥ ಮಾಡುವ ಕಾಮಗಾರಿ ಕೆಲವು ಕಾನೂನಾತ್ಮಕ ಸಮಸ್ಯೆಯಿಂದ ನಿಂತಿದೆ. ಇದೀಗ ಮತ್ತೆ ಮರು ಟೆಂಡರ್ ಕರೆಯಲಾಗಿದ್ದು, ಸದ್ಯದಲ್ಲೇ ಈ ಕಾಮಗಾರಿಯೂ ಆರಂಭಗೊಳ್ಳಲಿದೆ ಎಂದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.