ಮಂಗಳೂರು: ಸಮಾಜದಲ್ಲಿ ಬೇರೂರಿರುವ ಜಾತಿಬೇಧ, ಅಸಮತೋಲನ, ಶೋಷಣೆಯ ವಿರುದ್ಧ ನೂರಾರು ವರ್ಷಗಳ ಹಿಂದೆಯೇ ಧ್ವನಿ ಎತ್ತಿ ಸಾಮಾಜಿಕ ಸಮಾನತೆಯನ್ನು ಮೂಡಿಸಿದ ಬ್ರಹ್ಮಶ್ರೀ ನಾರಾಯಣ ಗುರುಗಳ ಆದರ್ಶ, ಚಿಂತನೆ ಇಂದಿಗೂ ಪ್ರಸ್ತುತ ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ.ಕೆ.ವಿ. ರಾಜೇಂದ್ರ ಹೇಳಿದರು.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಸಮಾಜದಲ್ಲಿರುವ ನ್ಯೂನತೆ, ಅಸಮಾನತೆಯ ವಿರುದ್ಧ ಹೋರಾಡಿದ ನಾರಾಯಣ ಗುರುಗಳ ಆದರ್ಶ ಇಂದಿಗೂ ಸ್ಪೂರ್ತಿ. ಪ್ರಸ್ತುತ ದಿನಗಳಲ್ಲಿ ಅಧಿಕಾರಿಗಳು ನಾರಾಯಣ ಗುರುಗಳ ಚಿಂತನೆಗಳನ್ನು ಮನನ ಮಾಡಿಕೊಂಡು ಸಮಾಜದಲ್ಲಿರುವ ಅಸಮಾನತನೆಗಳನ್ನು ಹೋಗಲಾಡಿಸುವಲ್ಲಿ ಪ್ರಾಮಾಣಿಕ ಪ್ರಯತ್ನ ನಡೆಸಿ, ಜವಾಬ್ದಾರಿಯುತವಾಗಿ ಕಾರ್ಯ ನಿರ್ವಹಿಸಬೇಕು ಎಂದರು.
ಮೂಡಾ ಅಧ್ಯಕ್ಷ ರವಿಶಂಕರ್ ಮಿಜಾರು ಮಾತನಾಡಿ, ಬ್ರಹ್ಮಶ್ರೀ ನಾರಾಯಣ ಗುರುಗಳು ಹಲವು ವರ್ಷಗಳ ಹಿಂದೆಯೇ ಸರಳತೆಯ ತತ್ತ್ವವನ್ನು ಪ್ರತಿಪಾದಿಸಿ, ಸಮಾಜದಲ್ಲಿರುವ ಜಾತಿ ಬೇಧವನ್ನು ಹೋಗಲಾಡಿಸುವಲ್ಲಿ ತಮ್ಮ ಬದುಕಿನುದ್ದಕ್ಕೂ ಹೋರಾಡಿದ ಮಹಾನ್ ಗುರುಗಳು. ಶಿಕ್ಷಣ ಒಂದೇ ಸಮಾಜದಲ್ಲಿ ಗೌರವ ತಂದುಕೊಡಬಲ್ಲದು ಎಂದು ಸಾರಿದ ಅವರು, 1912ರಲ್ಲಿ ಮಂಗಳೂರಿನ ಗೋಕರ್ಣ ಕ್ಷೇತ್ರದ ಶಿಲಾನ್ಯಾಸವನ್ನು ನೆರವೇರಿಸಿದ್ದರು ಎಂದರು.
ನಾರಾಯಣ ಗುರುಗಳ ಆದರ್ಶ, ಚಿಂತನೆ ಇಂದಿಗೂ ಪ್ರಸ್ತುತ: ಡಿಸಿ ಡಾ. ಕೆ.ವಿ. ರಾಜೇಂದ್ರ
ಸಮಾಜದಲ್ಲಿರುವ ನ್ಯೂನತೆ, ಅಸಮಾನತೆಯ ವಿರುದ್ಧ ಹೋರಾಡಿದ ನಾರಾಯಣ ಗುರುಗಳ ಆದರ್ಶ ಇಂದಿಗೂ ಸ್ಪೂರ್ತಿ. ಪ್ರಸ್ತುತ ದಿನಗಳಲ್ಲಿ ಅಧಿಕಾರಿಗಳು ಅವರ ಚಿಂತನೆಗಳನ್ನು ಮನನ ಮಾಡಿಕೊಂಡು ಸಮಾಜದಲ್ಲಿರುವ ಅಸಮಾನತನೆಗಳನ್ನು ಹೋಗಲಾಡಿಸುವಲ್ಲಿ ಪ್ರಾಮಾಣಿಕ ಪ್ರಯತ್ನ ನಡೆಸಬೇಕು ಎಂದು ದ.ಕ. ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಹೇಳಿದರು.