ಸುಳ್ಯ: ಟಿಂಬರ್ ಲಾರಿ ಚಾಲಕರಿಂದ ಲಂಚ ಸ್ವೀಕಾರದ ಆರೋಪ ಹೊತ್ತಿದ್ದ ಉಪವಲಯ ಅರಣ್ಯಾಧಿಕಾರಿ ಹಾಗೂ ಮೋಜಣಿದಾರ ರಕ್ಷಿತ್ ಅವರನ್ನು ಕೊಡಗು ವೃತ್ತ ಅರಣ್ಯ ಸಂರಕ್ಷಣಾಧಿಕಾರಿಯವರು ಸೇವೆಯಿಂದ ಅಮಾನತುಗೊಳಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಸಂಪಾಜೆ ಗಡಿ ಚೆಕ್ ಪೋಸ್ಟ್ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ರಕ್ಷಿತ್ ಅವರು ಟಿಂಬರ್ ಲಾರಿ ಚಾಲಕನಿಂದ ಲಂಚಕ್ಕೆ ಬೇಡಿಕೆಯಿಟ್ಟು ಹಣವನ್ನು ಪಡೆಯುತ್ತಿದ್ದ ದೃಶ್ಯವನ್ನು ಸ್ವತಃ ಲಾರಿ ಚಾಲಕ ಮೊಬೈಲ್ನಲ್ಲಿ ಸೆರೆ ಹಿಡಿದಿದ್ದ. ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು.
ಓದಿ-Video viral: ಸಂಪಾಜೆ ಚೆಕ್ ಪೋಸ್ಟ್ನಲ್ಲಿ ಅಧಿಕಾರಿಗಳಿಂದ ಲಂಚಾವತಾರ ಆರೋಪ
ಅಲ್ಲದೆ, 'ಈಟಿವಿ ಭಾರತ'ವು ಈ ಕುರಿತು ಸವಿವರವಾದ ವರದಿಯನ್ನು ಪ್ರಸಾರ ಮಾಡಿತ್ತು. ಹೀಗಾಗಿ ಘಟನೆಯ ಕುರಿತು ತನಿಖೆ ಕೈಗೊಳ್ಳಲಾಗಿತ್ತು. ಕರ್ತವ್ಯ ನಿರ್ಲಕ್ಷ್ಯ, ನಂಬಿಕೆ ದ್ರೋಹ ಹಾಗೂ ಜವಾಬ್ದಾರಿ ನಿರ್ವಹಿಸಲು ವಿಫಲತೆ ಸಾಬೀತಾದ ಹಿನ್ನೆಲೆ ಅಧಿಕಾರಿಯನ್ನು ಕರ್ತವ್ಯದಿಂದ ಅಮಾನತು ಮಾಡಲಾಗಿದೆ ಎಂದು ತಿಳಿದು ಬಂದಿದೆ. ಸಧ್ಯ ಈ ಕುರಿತು ಅರಣ್ಯಾಧಿಕಾರಿಗಳು ಅಧಿಕೃತ ಮಾಹಿತಿ ನೀಡಬೇಕಿದೆ.