ಮಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಕಾರ್ಯಕರ್ತರನ್ನು ಬೇರ್ಪಡಿಸಲು ಯಾರಿಂದಲೂ ಸಾಧ್ಯವಿಲ್ಲ ಎಂದು ನಗರಾಭಿವೃದ್ಧಿ ಸಚಿವ ಯು.ಟಿ.ಖಾದರ್ ಹೇಳಿದರು.
ನಗರದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸಮ್ಮಿಶ್ರ ಸರ್ಕಾರ ಸುಭದ್ರವಾಗಿದೆ. ಬಿಜೆಪಿ ಕಳೆದ ಒಂದು ವರ್ಷದಿಂದ ಸರ್ಕಾರ ಬೀಳಿಸಲು ಪ್ರಯತ್ನ ಪಡುತ್ತಾ ಇದೆ. ಈ ಹಿಂದೆಯು ಯಶಸ್ವಿಯಾಗಿಲ್ಲ. ಈ ಬಾರಿಯು ಯಶಸ್ವಿಯಾಗುವುದಿಲ್ಲ. ಸಮ್ಮಿಶ್ರ ಸರ್ಕಾರ ಜನಪರ ಕಾರ್ಯಕ್ರಮಗಳನ್ನು, ಅಭಿವೃದ್ಧಿ ಯೋಜನೆಯನ್ನು ಕೊಟ್ಟಿದೆ ಎಂದರು.