ಮಂಗಳೂರು: ರಸ್ತೆ ಬದಿಯ ತಡೆಗೋಡೆಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಚಾಲಕ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಗುಂಡ್ಯ ಸಮೀಪ ನಡೆದಿದೆ.
ಬೆಂಗಳೂರಿನ ಜಾಲಹಳ್ಳಿ ನಿವಾಸಿ ನಾಗರಾಜ(60) ಮೃತ ದುರ್ದೈವಿ. ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಶಿರಾಡಿ ಗುಂಡ್ಯ ಶ್ರೀ ಚೌಡೇಶ್ವರಿ ದೇವಸ್ಥಾನದ ಸಮೀಪ ಅಪಘಾತ ನಡೆದಿದೆ. ಕಾರಿನಲ್ಲಿದ್ದ ಹನುಮಂತ ನಾಯಕ್ ಎಂಬುವವರಿಗೆ ಗಂಭೀರವಾಗಿ ಗಾಯವಾಗಿದ್ದು, ನೆಲ್ಯಾಡಿಯ ಅಶ್ವಿನಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಬೆಂಗಳೂರಿನಿಂದ ಪುತ್ತೂರು ವಿವೇಕಾನಂದ ಕಾಲೇಜಿಗೆ ಹೋಗುತ್ತಿದ್ದ ಸಂದರ್ಭದಲ್ಲಿ ಕಾರು ಚಾಲಕನ ನಿಯಂತ್ರಣ ತಪ್ಪಿ ತಡೆಗೋಡೆಗೆ ಡಿಕ್ಕಿ ಹೊಡೆದಿದೆ. ಪೊಲೀಸರು ಸ್ಥಳಕ್ಕೆ ಆಗಮಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.