ETV Bharat / city

ನಿಷೇಧಾಜ್ಞೆ ಉಲ್ಲಂಘಿಸಿದ ಯುವಕರ ವಿರುದ್ಧ ಪ್ರಕರಣ ದಾಖಲು: 6 ಬೈಕ್ ವಶಕ್ಕೆ - ಯುವಕರ ವಿರುದ್ಧ ಪ್ರಕರಣ ದಾಖಲು

ಪೊಲೀಸ್ ಉಪನಿರೀಕ್ಷಕ ಅವಿನಾಶ್ ತಮ್ಮ ಠಾಣಾ ಸಿಬ್ಬಂದಿಯೊಂದಿಗೆ ಕೊರೊನಾ ವೈರಸ್ ಕುರಿತು ಜಾಗೃತಿ ಮೂಡಿಸುತ್ತಿದ್ದ ಸಂದರ್ಭದಲ್ಲಿ ಯುವಕರು ಗುಂಪು ಸೇರಿದ್ದು ಕಂಡು ಬಂದಿದೆ.

Bantwal police station
ಬಂಟ್ವಾಳ ಪೊಲೀಸ್​ ಠಾಣೆ
author img

By

Published : Apr 3, 2020, 6:30 PM IST

ಬಂಟ್ವಾಳ(ದಕ್ಷಿಣ ಕನ್ನಡ): ನಿಷೇಧಾಜ್ಞೆ ಉಲ್ಲಂಘಿಸಿ ತಲಪಾಡಿ ಜುಮ್ಮಾ ಮಸೀದಿ ಬಳಿ ಕುಳಿತು ಹರಟೆ ಹೊಡೆಯುತ್ತಿದ್ದ ಎಂಟು ಯುವಕರ ವಿರುದ್ಧ ಪ್ರಕರಣ ದಾಖಲಿಸಿ, 6 ಬೈಕ್​ಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಈಗಾಗಲೇ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸೆಕ್ಷನ್​ 144 ಜಾರಿಯಲ್ಲಿದೆ. ಆದರೂ ಯವಕರು ಗುಂಪು ಸೇರಿದ್ದರು. ಮಸೀದಿಯ ಹೊರಗೆ ಬೈಕ್​ಗಳನ್ನು ನಿಲ್ಲಿಸಿ ಮಾತನಾಡುತ್ತಿದ್ದ ಯುವಕರು, ಪೊಲೀಸರು ಬರುತ್ತಿದ್ದಂತೆ ಅಲ್ಲಿಂದ ಕಾಲ್ಕಿತ್ತರು.

ಬೈಕ್​ಗಳನ್ನು ವಶಕ್ಕೆ ಪಡೆದ ಪೊಲೀಸರು, ನಿಷೇಧಾಜ್ಞೆ ಉಲ್ಲಂಘಿಸಿದ ಯುವಕರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.