ETV Bharat / city

ಮಂಗಳೂರಿನಲ್ಲಿ ಸಿಸಿಬಿ ಕಾರ್ಯಾಚರಣೆ: ಮಾದಕ ವಸ್ತು ಮಾರುತ್ತಿದ್ದ 12 ವಿದ್ಯಾರ್ಥಿಗಳ ಬಂಧನ

author img

By

Published : Jul 9, 2022, 2:20 PM IST

ಮಂಗಳೂರಿನಲ್ಲಿ ಸಿಸಿಬಿ ಭರ್ಜರಿ ಕಾರ್ಯಾಚರಣೆ- ಗಾಂಜಾ ಮಾರಾಟ ಮತ್ತು ಸೇವನೆ ಆರೋಪದಡಿ 12 ವಿದ್ಯಾರ್ಥಿಗಳ ಬಂಧನ - ಪೊಲೀಸರ ಮಾಹಿತಿ

ganja seize
ಜಪ್ತಿ ಮಾಡಲಾದ ಗಾಂಜಾ

ಮಂಗಳೂರು: ನಗರದಲ್ಲಿ ಸಾರ್ವಜನಿಕರಿಗೆ ಹಾಗೂ ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾವನ್ನು ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ 12 ಮಂದಿ ವಿದ್ಯಾರ್ಥಿಗಳನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ಶಾನೂಫ್ ಅಬ್ದುಲ್ ಗಫೂರ್(21), ಮೊಹಮ್ಮದ್ ರಸೀನ್(22), ಗೋಕುಲ ಕೃಷ್ಣನ್(22), ಶಾರೂನ್ ಆನಂದ(19), ಅನಂತು ಕೆ.ಪಿ(18), ಅಮಲ್(21), ಅಭಿಷೇಕ(21), ನಿದಾಲ್(21), ಶಾಹೀದ್ ಎಂ.ಟಿ.ಪಿ(22), ಫಹಾದ್ ಹಬೀಬ್(22), ಮೊಹಮ್ಮದ್ ರಿಶಿನ್(22), ರಿಜಿನ್ ರಿಯಾಜ್(22) ಬಂಧಿತರು. ಬಂಧಿತ ವಿದ್ಯಾರ್ಥಿಗಳೆಲ್ಲರೂ ಕೇರಳ ರಾಜ್ಯದವರಾಗಿದ್ದಾರೆ.

ಆರೋಪಿಗಳ ಪೈಕಿ 9 ಮಂದಿ ವಿದ್ಯಾರ್ಥಿಗಳು ಯೇನೆಪೋಯ ಕಾಲೇಜಿನ ಪದವಿ ವಿದ್ಯಾರ್ಥಿಗಳಾಗಿದ್ದು, 3 ಮಂದಿ ವಿದ್ಯಾರ್ಥಿಗಳು ಇಂದಿರಾ ನರ್ಸಿಂಗ್ ಕಾಲೇಜಿನ ವಿದ್ಯಾರ್ಥಿಗಳಾಗಿದ್ದಾರೆ. ಆರೋಪಿಗಳ ಪೈಕಿ 8 ಮಂದಿ ವಿದ್ಯಾರ್ಥಿಗಳು ಅಂತಿಮ ವರ್ಷದ ಬಿಬಿಎ, ಬಿಸಿಎ ಪದವಿ, ವಿಧಿ ವಿಜ್ಞಾನ (ಫಾರೆನ್ಸಿಕ್ ಸೈನ್ಸ್) ವ್ಯಾಸಂಗವನ್ನು, ಮತ್ತು ಓರ್ವ ಪ್ರಥಮ ವರ್ಷದ ಬಿಬಿಎ ಪದವಿ ವ್ಯಾಸಂಗವನ್ನು ಯೇನೆಪೋಯ ಕಾಲೇಜು, ಬಲ್ಮಠ, ಮಂಗಳೂರು ಇಲ್ಲಿ ಮಾಡುತ್ತಿದ್ದಾರೆ. ಹಾಗೂ ಇಂದಿರಾ ನರ್ಸಿಂಗ್ ಕಾಲೇಜಿನಲ್ಲಿ ಪ್ರಥಮ ವರ್ಷದಲ್ಲಿ ವ್ಯಾಸಂಗ ಮಾಡುತ್ತಿರುವ 3 ಮಂದಿ ವಿದ್ಯಾರ್ಥಿಗಳ ಪೈಕಿ ಒಬ್ಬಾತ ವಿದ್ಯಾರ್ಥಿ ನರ್ಸಿಂಗ್ ಪದವಿ, ಓರ್ವ ರೇಡಿಯೋಲಾಜಿ , ಹಾಗೂ ಇನ್ನೋರ್ವ ಅಲೈಡ್ ಸೈನ್ಸ್ ಪದವಿ ವ್ಯಾಸಂಗ ಮಾಡುತ್ತಿದ್ದಾರೆ.

ಇವರು ಕಾಲೇಜಿನ ವಿದ್ಯಾರ್ಥಿಗಳಿಗೆ ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಗಾಂಜಾವನ್ನು ಮಾರಾಟದ ಬಗ್ಗೆ ಹಾಗೂ ಸೇವನೆ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿ ಪಡೆದ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದಾರೆ. ನಗರದ ವೆಲೆನ್ಸಿಯಾ ಸೂಟರ್ ಪೇಟೆ 3ನೇ ಕ್ರಾಸ್​​ನ ವಸತಿ ಗೃಹವೊಂದರ ಮೇಲೆ ದಾಳಿ ನಡೆಸಿ ವಿದ್ಯಾರ್ಥಿಗಳನ್ನು ಬಂಧಿಸಿದ್ದಾರೆ.

ಬಂಧಿತರಿಂದ ಒಟ್ಟು 900 ಗ್ರಾಂ ತೂಕದ ರೂ. 20 ಸಾವಿರ ಮೌಲ್ಯದ ಗಾಂಜಾ, ಗಾಂಜಾವನ್ನು ಸೇದುವ ಸ್ಮೋಕಿಂಗ್ ಪೈಪ್, ರೋಲಿಂಗ್ ಪೇಪರ್, 4,500 ರೂ ನಗದು, 11 ಮೊಬೈಲ್ ಫೋನ್​ ಹಾಗೂ ಡಿಜಿಟಲ್ ತೂಕ ಮಾಪನವನ್ನು ವಶಪಡಿಸಿಕೊಳ್ಳಲಾಗಿದೆ. ವಶಪಡಿಸಿಕೊಂಡ ಸೊತ್ತಿನ ಒಟ್ಟು ಮೌಲ್ಯ ರೂ. 2,85,000 ರೂ. ಎಂದು ಅಂದಾಜಿಸಲಾಗಿದೆ.

ಇದನ್ನೂ ಓದಿ: ಬೆಳಗಾವಿಯಲ್ಲಿ ನಾಪತ್ತೆಯಾಗಿದ್ದ ಸುಬೇದಾರ್ ತಿಂಗಳ ಬಳಿಕ ಪತ್ತೆ.. ಖಿನ್ನತೆಯಿಂದ ಹಳೆಯದೆಲ್ಲ ಮರೆವು

ETV Bharat Logo

Copyright © 2024 Ushodaya Enterprises Pvt. Ltd., All Rights Reserved.