ETV Bharat / city

ವಕೀಲನಿಂದ ಯುವತಿಗೆ ಲೈಂಗಿಕ ಕಿರುಕುಳ ಪ್ರಕರಣ.. ರಾಜೇಶ್​ ವಿರುದ್ಧ ಚಾರ್ಜ್​ಶೀಟ್​ ಸಲ್ಲಿಕೆ - ರಾಜೇಶ್​ ವಿರುದ್ಧ ಚಾರ್ಜ್​ಶೀಟ್​ ಸಲ್ಲಿಕೆ

ಕಾನೂನು ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿರುವ ಆರೋಪಿ ನ್ಯಾಯವಾದಿ ಕೆಎಸ್​ಎನ್ ರಾಜೇಶ್ ಭಟ್ ವಿರುದ್ಧ ಪೊಲೀಸರು ನ್ಯಾಯಾಲಯಕ್ಕೆ ಜಾರ್ಜ್​ಶೀಟ್​ ಸಲ್ಲಿಸಿದ್ದಾರೆ.

Rajesh advocate Mangalore news  Chargesheet against lawyer Rajesh  student sexual harassment case in Mangalore  Mangaluru crime news  ನ್ಯಾಯಾಲಯದ ಮುಂದೆ ವಕೀಲ ರಾಜೇಶ್​ ಶರಣು  ವಕೀಲ ರಾಜೇಶ್​ ವಿರುದ್ಧ ಲುಕ್​ಔಟ್​ ನೋಟಿಸ್​ ಸಂತ್ರಸ್ತ ಯುವತಿ ಸ್ನೇಹಿತೆಗೆ ಬೆದರಿಕೆ  ವಕೀಲನಿಂದ ಯುವತಿಗೆ ಲೈಂಗಿಕ ಕಿರುಕುಳ ಪ್ರಕರಣ  ರಾಜೇಶ್​ ವಿರುದ್ಧ ಚಾರ್ಜ್​ಶೀಟ್​ ಸಲ್ಲಿಕೆ  ಕಾನೂನು ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ
ವಕೀಲನಿಂದ ಯುವತಿಗೆ ಲೈಂಗಿಕ ಕಿರುಕುಳ ಪ್ರಕರಣ
author img

By

Published : Aug 18, 2022, 11:35 AM IST

ಮಂಗಳೂರು: ನಗರದ ಕಾನೂನು ಕಾಲೇಜಿನ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣದ ಆರೋಪಿ ವಕೀಲ ಕೆಎಸ್‌ಎನ್ ರಾಜೇಶ್ ವಿರುದ್ಧ ಮಂಗಳೂರಿನ ಜೆಎಂಎಫ್‌ಸಿ ಮೂರನೇ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿಯನ್ನು ಪೊಲೀಸರು ಸಲ್ಲಿಸಿದ್ದಾರೆ.

25 ಸೆಪ್ಟಂಬರ್​ 2021ರಂದು ಮಧ್ಯಾಹ್ನ ರಾಜೇಶ್ ತನ್ನ ಕಚೇರಿಯಲ್ಲಿ ಇಂಟರ್ನ್​ಶಿಪ್‌ಗೆಂದು ಬಂದಿದ್ದ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ್ದನು. ಅಷ್ಟೇ ಅಲ್ಲ ಆಕೆಗೆ ಜೀವಬೆದರಿಕೆ ಹಾಕಿದ್ದ. ಪ್ರಕರಣ ದಾಖಲಾದ ಬಳಿಕ ಆರೋಪಿ ರಾಜೇಶ್ ತುಂಬಾ ದಿನಗಳವರೆಗೆ ತಲೆ ಮರೆಸಿಕೊಂಡಿದ್ದನು. ಪೊಲೀಸರಿಗೆ ಆರೋಪಿ ಸಿಕ್ಕಿಬಿದ್ದಿದ್ದನು. ಆತನಿಗೆ ಅನಂತ ಭಟ್ ಮತ್ತು ಅಚ್ಯುತ ಭಟ್ ನೆರವು, ಆಶ್ರಯ ಒದಗಿಸಿದ್ದರು ಎಂದು ಚಾರ್ಜ್ ಶೀಟ್​ನಲ್ಲಿ ಉಲ್ಲೇಖಿಸಲಾಗಿದೆ.

ಮಂಗಳೂರು ನಗರ ಪೊಲೀಸ್ ಕಮೀಷನರ್ ಎನ್. ಶಶಿಕುಮಾರ್ ಅವರು ತನಿಖೆಯನ್ನು ಅಂದಿನ ಎಸಿಪಿ ರಂಜಿತ್ ಬಂಡಾರು ಅವರಿಗೆ ವಹಿಸಿದ್ದರು. ಅನಂತರ ಎಸಿಪಿ ದಿನಕರ ಶೆಟ್ಟಿ ತನಿಖೆ ಮುಂದುವರಿಸಿ ನ್ಯಾಯಾಲಯಕ್ಕೆ ಚಾರ್ಜ್​ಶೀಟ್ ಸಲ್ಲಿಸಿದ್ದಾರೆ.

ವಕೀಲನಿಂದ ಯುವತಿಗೆ ಲೈಂಗಿಕ ಕಿರುಕುಳ ಪ್ರಕರಣ: 25 ಸೆಪ್ಟಂಬರ್​ 2021ರಂದು ಮಧ್ಯಾಹ್ನ ರಾಜೇಶ್ ತನ್ನ ಕಚೇರಿಯಲ್ಲಿ ಇಂಟರ್ನ್​ಶಿಪ್‌ಗೆಂದು ಬಂದಿದ್ದ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂಬ ಆರೋಪ ಕೇಳಿ ಬಂದಿತ್ತು. ಈ ಘಟನೆಗೆ ಸಂಬಂಧಿಸಿದಂತೆ ಮಂಗಳೂರು ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ತನಿಖೆ ವೇಳೆ, ಸಂತ್ರಸ್ತೆಯ ಜೊತೆ ವಕೀಲ ಮಾತನಾಡಿರುವ ಆಡಿಯೋ ವೈರಲ್ ಆಗಿತ್ತು. ಆ ಆಡಿಯೋವನ್ನು ಎಡಿಟ್ ಮಾಡಲಾಗಿದೆ ಎಂದು ವಕೀಲರು ಉರ್ವ ಪೊಲೀಸ್ ಠಾಣೆಗೆ ಬಂದು ಆರೋಪಿಸಿದ್ದರು.

ಸಂತ್ರಸ್ತ ಯುವತಿ ಸ್ನೇಹಿತೆಗೆ ಬೆದರಿಕೆ: ಇದರ ನಡುವೆ ಸಂತ್ರಸ್ತೆ ಯುವತಿಯ ಸ್ನೇಹಿತೆಗೆ ವಕೀಲನ ಕಡೆಯವರು ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಲಾಗಿತ್ತು. ಈ ಬಗ್ಗೆ ಯುವತಿಯ ಸ್ನೇಹಿತೆ ಮಹಿಳಾ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. ಪ್ರಕರಣ ಸಂಬಂಧ ಐಪಿಎಸ್ ಅಧಿಕಾರಿ ಎಸಿಪಿ ರಂಜಿತ್ ಬಂಡಾರು ಅವರನ್ನು ತನಿಖಾಧಿಕಾರಿಯನ್ನಾಗಿ ನೇಮಿಸಿ ತನಿಖೆ ನಡೆಸಲಾಗುತ್ತಿದೆ ಎಂದು ಮಂಗಳೂರು ನಗರ ಪೊಲೀಸ್ ‌ಕಮಿಷನರ್ ಶಶಿಕುಮಾರ್​ ಮಾಹಿತಿ ನೀಡಿದ್ದರು.

ವಕೀಲ ರಾಜೇಶ್​ ವಿರುದ್ಧ ಲುಕ್​ಔಟ್​ ನೋಟಿಸ್​: ಕಾನೂನು ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿರುವ ಆರೋಪಿ ನ್ಯಾಯವಾದಿ ರಾಜೇಶ್ ಭಟ್ ವಿದೇಶಕ್ಕೆ ಪರಾರಿಯಾಗದಂತೆ ಪೊಲೀಸರು ಬೇಹುಗಾರಿಕಾ ಸಂಸ್ಥೆಯ (ಐಬಿ) ಮೂಲಕ ದೇಶದ ಎಲ್ಲ ವಿಮಾನ ನಿಲ್ದಾಣಗಳಿಗೆ ಲುಕ್ ಔಟ್ ನೋಟಿಸ್ ಜಾರಿ ಮಾಡಿದ್ದರು. ಅಲ್ಲದೇ ಅವರ 12 ಬ್ಯಾಂಕ್ ಅಕೌಂಟ್​​ಗಳನ್ನು ಫ್ರೀಝ್ ಮಾಡಲಾಗಿತ್ತು.

ನ್ಯಾಯಾಲಯದ ಮುಂದೆ ವಕೀಲ ರಾಜೇಶ್​ ಶರಣು: ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿರುವ ಪ್ರಕರಣದ ಬಳಿಕ ವಕೀಲ ರಾಜೇಶ್ ನಾಪತ್ತೆಯಾಗಿದ್ದರು. ವಕೀಲ ರಾಜೇಶ್ ಬ್ಯಾಂಕ್ ಖಾತೆ ಸ್ಥಗಿತಗೊಳಿಸಿ, ಲುಕ್​​ಔಟ್ ನೋಟೀಸ್ ಜಾರಿಗೊಳಿಸಲಾಗಿತ್ತು. ಆರೋಪಿ ವಕೀಲರಿಗೆ ಸಹಕಾರ ನೀಡಿದ ಕಾರಣಕ್ಕೆ ವಕೀಲನ ಪತ್ನಿ ಸೇರಿದಂತೆ ಹಲವರನ್ನು ಬಂಧಿಸಲ್ಪಟ್ಟಿದ್ದರೂ ಆರೋಪಿ ಪತ್ತೆಯಾಗಿರಲಿಲ್ಲ. 2021 ಡಿಸೆಂಬರ್​ 20ರಂದು ಆರೋಪಿ ನ್ಯಾಯಾಲಯದ ಮುಂದೆ ಶರಣಾಗಿದ್ದರು.

ಓದಿ: ಕಾನೂನು ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ಆರೋಪ : ವಕೀಲ್​​​ ರಾಜೇಶ್​ ಭಟ್​​​ ಬಾರ್ ಕೌನ್ಸಿಲ್​ನಿಂದ ಅಮಾನತು

ETV Bharat Logo

Copyright © 2025 Ushodaya Enterprises Pvt. Ltd., All Rights Reserved.