ಮಂಗಳೂರು: ಕರ್ನಾಟಕ ಪ್ರವಾಸದಲ್ಲಿದ್ದ ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ಶರದ್ ಅರವಿಂದ ಬೋಬ್ಡೆ ಅವರು ಇಂದು ಮಧ್ಯಾಹ್ನ 12 ಗಂಟೆಗೆ ಮಂಗಳೂರು ವಿಮಾನ ನಿಲ್ದಾಣದ ಮೂಲಕ ದೆಹಲಿಗೆ ವಾಪಸ್ ತೆರಳಿದ್ದಾರೆ.
ಗುರುವಾರ ಬೆಳಗ್ಗೆ ದೆಹಲಿಯಿಂದ ವಿಮಾನದ ಮೂಲಕ ಮಂಗಳೂರಿಗೆ ಆಗಮಿಸಿದ ಸಿಜೆಐ ಶರದ್ ಅರವಿಂದ್ ಬೋಬ್ಡೆ ಅವರು, ಮಂಗಳೂರಿನಿಂದ ಗುರುವಾರ ಸಂಜೆ ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿಗೆ ಆಗಮಿಸಿ ರಾತ್ರಿ ಶಾರದ ಮಠದಲ್ಲಿ ವಾಸ್ತವ್ಯ ಹೂಡಿದ್ದರು. ಇಂದು ಬೆಳಗ್ಗೆ ಶಾರದಾ ದೇವಿಯ ದರ್ಶನ ಪಡೆದು ವಿಶೇಷ ಪೂಜೆ ಮಾಡಿಸಿದ್ರು. ನಂತರ ನರಸಿಂಹ ವನದಲ್ಲಿರುವ ಗುರುಗಳ ನಿವಾಸಕ್ಕೆ ತೆರಳಿ ಜಗದ್ಗುರು ಶ್ರೀ ಭಾರತೀ ತೀರ್ಥ ಸ್ವಾಮೀಜಿ ಹಾಗೂ ಜಗದ್ಗುರು ಶ್ರೀ ವಿಧುಶೇಖರ ಭಾರತೀ ತೀರ್ಥ ಸ್ವಾಮೀಜಿಗಳ ದರ್ಶನವನ್ನು ಪಡೆದರು.
ಬಳಿಕ ಶೃಂಗೇರಿಯಿಂದ ಮಂಗಳೂರಿಗೆ ಪ್ರಯಾಣ ಬೆಳಸಿ ಅಲ್ಲಿಂದ ಮಧ್ಯಾಹ್ನ 12 ಗಂಟೆ ವಿಮಾನದ ಮೂಲಕ ದೆಹಲಿಗೆ ವಾಪಸ್ ತೆರಳಿದ್ದಾರೆ.