ಮಂಗಳೂರು: ಮಂಗಳೂರಿನಲ್ಲಿ ರಾಷ್ಟ್ರೀಯ ತನಿಖಾ ದಳ (ಎನ್ಐಎ) ಕಚೇರಿ ಆರಂಭಿಸುವ ಬಗ್ಗೆ ಸುಳಿವು ನೀಡಿರುವ ಸಿಎಂ ಬಸವರಾಜ ಬೊಮ್ಮಾಯಿ, ಈ ಬಗ್ಗೆ ಕೆಲವು ವಿಚಾರಗಳನ್ನು ಬಹಿರಂಗಪಡಿಸಲು ಆಗುವುದಿಲ್ಲ. ಮುಂದಿನ ದಿನಗಳಲ್ಲಿ ಈ ಬಗ್ಗೆ ಸೂಕ್ತ ನಿರ್ಧಾರ ತೆಗೆದುಕೊಳ್ಳಲಿದ್ದೇವೆ ಎಂದರು.
ಈಗಾಗಲೇ ಓರ್ವ ದಕ್ಷ ಗೃಹ ಸಚಿವರನ್ನು ರಾಜ್ಯಕ್ಕೆ ನೀಡಲಾಗಿದೆ. ಅವರು ಈಗಾಗಲೇ ಈ ಬಗ್ಗೆ ಎರಡು ಸಭೆ ಮಾಡಿದ್ದು, ಮುಂದೆಯೂ ಈ ನಿಟ್ಟಿನಲ್ಲಿ ಕೆಲವು ಸಭೆಗಳನ್ನು ನಡೆಸಲಿದ್ದಾರೆ. ಮುಂಬರುವ ದಿನಗಳಲ್ಲಿ ಗೃಹ ಸಚಿವರು ಇಲ್ಲಿಗೆ ಭೇಟಿ ಕೊಟ್ಟು ಪರಿಶೀಲಿಸಲಿದ್ದಾರೆ. ಆ ಬಳಿಕ ನಾವೆಲ್ಲರೂ ಒಟ್ಟಾಗಿ ಚರ್ಚಿಸಿ ನಿರ್ಧಾರ ತೆಗೆದುಕೊಳ್ಳಲಿದ್ದೇವೆ ಎಂದು ಸಿಎಂ ಹೇಳಿದರು.