ಮಂಗಳೂರು: ಮಂಗಳೂರು ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ ಕೋಮು ಪ್ರಚೋದನೆಯ ಸಂದೇಶ ರವಾನಿಸಿದ್ದ ಆರೋಪದ ಮೇಲೆ ವ್ಯಕ್ತಿಯೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ.
ಕೋಡಿ ಉಳ್ಳಾಲ ನಿವಾಸಿ ಅಬೂಬಕರ್ ಸಿದ್ದೀಕ್ (48) ಬಂಧಿತ ಆರೋಪಿ. ಪ್ರಚೋದನಕಾರಿ ಸಂದೇಶ ರವಾನಿಸಿದ ಆರೋಪದಲ್ಲಿ ಪೊಲೀಸರು ಹಲವರ ಮೇಲೆ ಪ್ರಕರಣ ದಾಖಲಿಸಿದ್ದು ಇಲ್ಲಿಯವರೆಗೆ ಇಬ್ಬರನ್ನು ವಶಕ್ಕೆ ಪಡೆದಿದ್ದಾರೆ
ಬಂಧಿತ ಆರೋಪಿ ಅಬೂಬಕರ್ ಸಿದ್ದೀಕ್ ವಿರುದ್ಧ ಬಂದರ್‌ನ ಸೈಬರ್ ಠಾಣೆಯಿಂದ ವಿಚಾರಣೆಗೆ ಹಾಜರಾಗುವಂತೆ ಡಿ.29ರಂದು ನೋಟಿಸ್ ನೀಡಲಾಗಿತ್ತು.ಈ ಕುರಿತು ಬರ್ಕೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.