ಮಂಗಳೂರು(ದಕ್ಷಿಣ ಕನ್ನಡ): ನಗರದಲ್ಲಿ ನಿನ್ನೆ ರಾತ್ರಿಯಿಂದ ನಿರಂತರ ಮಳೆಯಾಗುತ್ತಿದ್ದು, ಬೆಳಗ್ಗೆಯಿಂದ ಧಾರಾಕಾರವಾಗಿ ಸುರಿಯುತ್ತಿದೆ.
ವಾಡಿಕೆಯಂತೆ ಜೂನ್ ಮೊದಲ ವಾರದಲ್ಲಿ ರಾಜ್ಯಕ್ಕೆ ಮುಂಗಾರು ಪ್ರವೇಶಿಸುತ್ತದೆ. ಆದರೆ ಈ ಬಾರಿ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದ ಪರಿಣಾಮ ಅರಬ್ಬೀ ಸಮುದ್ರದಲ್ಲಿ ನಿಮ್ನ ಒತ್ತಡ ಉಂಟಾಗಿ ಮೇ 18ರಂದು ದಕ್ಷಿಣ ಒಳನಾಡು, ಕರಾವಳಿ ಪ್ರದೇಶಗಳಲ್ಲಿ ಗುಡುಗು, ಸಿಡಿಲು ಸಹಿತ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿತ್ತು.
ಅಲ್ಲದೆ ಭಾರತೀಯ ಹವಾಮಾನ ಇಲಾಖೆಯ ಮುನ್ಸೂಚನೆಯ ಪ್ರಕಾರ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದ ಪರಿಣಾಮ ಕರಾವಳಿ ತೀರದಲ್ಲಿ 'ಅಂಫಾನ್' ಚಂಡಮಾರುತದ ಭೀತಿಯೂ ಎದುರಾಗಿದೆ. ಆದ್ದರಿಂದ ಈ ಭಾಗದಲ್ಲಿ ಈಗಾಗಲೇ ಯಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.