ಮಂಗಳೂರು: ದಕ್ಷಿಣಕನ್ನಡ ಜಿಲ್ಲೆಯ ಸಹಕಾರಿ ಧುರೀಣರು ಶ್ರೀರಾಮ ಮಂದಿರ ನಿರ್ಮಾಣಕ್ಕೆ ಒಂದು ಕೋಟಿಗೂ ಅಧಿಕ ದೇಣಿಗೆ ನೀಡಲು ನಿರ್ಧರಿಸಿದ್ದಾರೆ ಎಂದು ಗುರುವಂದನಾ ಸಮಿತಿ ಅಧ್ಯಕ್ಷ ದೇವಿಪ್ರಸಾದ್ ಶೆಟ್ಟಿ ಬೆಳಪು ಹೇಳಿದರು.
ನಗರದ ಎಸ್ಸಿಡಿಸಿಸಿ ಬ್ಯಾಂಕ್ನಲ್ಲಿ ಮಾಧ್ಯಮಗೋಷ್ಟಿ ನಡೆಸಿ ಮಾತನಾಡಿದ ಅವರು, ಉಡುಪಿ ಪೇಜಾವರ ಮಠಾಧೀಶ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಅವರಿಗೆ ಗುರುವಂದನೆ, ಶ್ರೀರಾಮ ಮಂದಿರ ನಿರ್ಮಾಣಕ್ಕೆ ನಿಧಿ ಸಮರ್ಪಣೆ ಮತ್ತು ಸಹಕಾರ ರತ್ನ ಡಾ. ಎಂ.ಎನ್.ರಾಜೇಂದ್ರ ಕುಮಾರ್ ಅವರ 72ನೇ ಹುಟ್ಟುಹಬ್ಬ ಸಂಭ್ರಮವು ಫೆಬ್ರವರಿ 24ರಂದು ನಡೆಯಲಿದೆ. ಅಂದೇ ಪೇಜಾವರ ಶ್ರೀಗಳಿಗೆ ನಿಧಿ ಸಮರ್ಪಣೆ ಮಾಡಲಾಗುವುದು ಎಂದರು.
ಓದಿ: ದಾವಣಗೆರೆಯಲ್ಲಿ ಭೂಗಳ್ಳರ ಹಾವಳಿ: ಅಕ್ರಮ ಕಟ್ಟಡಗಳನ್ನು ತೆರವುಗೊಳಿಸಿದ ದೂಡಾ ಅಧಿಕಾರಿಗಳು
ಜಿಲ್ಲೆಯ ಸಹಕಾರಿ ಕ್ಷೇತ್ರದಲ್ಲಿರುವ ಎಲ್ಲರೂ ಸೇರಿ ಒಂದು ಕೋಟಿಗೂ ಅಧಿಕ ದೇಣಿಗೆ ನೀಡಲಿದ್ದಾರೆ. ಎಸ್ಸಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಡಾ.ಎಂ.ಎನ್.ರಾಜೇಂದ್ರ ಕುಮಾರ್ ತಮ್ಮ ವೈಯಕ್ತಿಕ ನಿಧಿಯಿಂದ 5 ಲಕ್ಷ, ನವೋದಯ ಚಾರಿಟೇಬಲ್ ಟ್ರಸ್ಟ್ನಿಂದ 5 ಲಕ್ಷ ದೇಣಿಗೆ ನೀಡುತ್ತಿದ್ದಾರೆ ಎಂದು ತಿಳಿಸಿದರು.