ಮಂಗಳೂರು : ರಾಜ್ಯದಲ್ಲಿ ಕೊರೊನಾ ಕಠಿಣ ಕರ್ಫ್ಯೂ ಹಿನ್ನೆಲೆ ಇಂದು ಬೆಳಗ್ಗೆ 10 ಗಂಟೆಯಾಗುತ್ತಿದ್ದಂತೆ ಮಂಗಳೂರು ನಗರದಲ್ಲಿ ವಾಹನ ಸಂಚಾರಕ್ಕೆ ನಿರ್ಬಂಧ ಹೇರಲಾಗಿದೆ.
ನಗರದ ವಿವಿಧೆಡೆ ಬ್ಯಾರಿಕೇಡ್ ಹಾಕಿ ರಸ್ತೆಗಳಲ್ಲಿ ವಾಹನ ಸಂಚಾರ ತಡೆಯಲಾಗುತ್ತಿದೆ. ಬೆಳಿಗ್ಗೆ 10 ಗಂಟೆಯವರೆಗೆ ಅವಶ್ಯಕ ವಸ್ತುಗಳ ಖರೀದಿಗೆ ಅವಕಾಶ ನೀಡಲಾಗಿದ್ದ ಕಾರಣ, ಜನರ ಓಡಾಟಕ್ಕೆ ಅವಕಾಶ ನೀಡಲಾಗಿತ್ತು.
ಆದರೆ, 10 ಗಂಟೆಯಾಗುತ್ತಿದ್ದಂತೆ ಪೊಲೀಸರು ವಾಹನಗಳನ್ನು ತಡೆದು ವಿಚಾರಿಸುತ್ತಿದ್ದಾರೆ. ವಾಹನಗಳನ್ನು ಪರಿಶೀಲಿಸಿ ಮುಂದಕ್ಕೆ ಹೋಗಲು ಬಿಡುತ್ತಿದ್ದಾರೆ. ಅನಗತ್ಯ ತಿರುಗಾಡುವವರಿಗೆ ಎಚ್ಚರಿಕೆ ನೀಡಿ ಕಳುಹಿಸುತ್ತಿದ್ದಾರೆ. ಇನ್ನು, 10 ಗಂಟೆ ಬಳಿಕ ಮಂಗಳೂರು ನಗರ ಸಂಪೂರ್ಣ ಸ್ತಬ್ಧವಾಗಿದೆ.