ಮಂಗಳೂರು: ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿರುವ ಅಪಾರ್ಟ್ಮೆಂಟ್ಗಳಲ್ಲಿ ಕೊರೊನಾ ಪಾಸಿಟಿವ್ ಪ್ರಕರಣ ಕಾಣಿಸಿಕೊಂಡರೆ ಅಂತಹ ಅಪಾರ್ಟ್ಮೆಂಟ್ನಲ್ಲಿರುವ ಎಲ್ಲಾ ನಿವಾಸಿಗಳ ಕೊರೊನಾ ಪರೀಕ್ಷೆ ನಡೆಸಲು ನಿರ್ಧರಿಸಲಾಗಿದೆ.
ನಗರದಲ್ಲಿ ಕೊರೊನಾ ಪಾಸಿಟಿವ್ ಪ್ರಕರಣ ಕಡಿಮೆಗೊಳಿಸುವ ನಿಟ್ಟಿನಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಪ್ರಸ್ತುತ ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಶೇಕಡಾ 17ರಷ್ಟು ಕೊರೊನಾ ಪ್ರಕರಣಗಳು ವರದಿಯಾಗುತ್ತಿವೆ. ಈ ಕಾರಣದಿಂದ ಅತೀ ಹೆಚ್ಚಿನ ಸಂಖ್ಯೆಯಲ್ಲಿ ಪ್ರಾಥಮಿಕ ಸಂಪರ್ಕಿತರ ಪರೀಕ್ಷೆಗೆ ಒಳಪಡಿಸಬೇಕಾಗುತ್ತದೆ. ಈ ನಿಟ್ಟಿನಲ್ಲಿ ಇನ್ನು ಮುಂದೆ ಅಪಾರ್ಟ್ಮೆಂಟ್ಗಳಲ್ಲಿ ಕೊರೊನಾ ಪ್ರಕರಣ ಕಂಡು ಬಂದ್ರೆ ವಸತಿ ಸಮುಚ್ಚಯದ ಎಲ್ಲಾ ನಿವಾಸಿಗಳನ್ನು ಪ್ರಾಥಮಿಕ ಸಂಪರ್ಕಕಿತರೆಂದು ಪರಿಗಣಿಸಿ ಕೋವಿಡ್ ಪರೀಕ್ಷೆ ನಡೆಸಲು ನಿರ್ಧರಿಸಲಾಗಿದೆ.