ಮಂಗಳೂರು: ನಗರದಲ್ಲಿ ಕೊರೊನಾ ಸೋಂಕಿಗೆ ಮದ್ದು ಸಿಂಪಡಿಸಲಾಗುತ್ತದೆ. ಆದ್ದರಿಂದ ರಾತ್ರಿ 10 ಗಂಟೆಯಿಂದ ಬೆಳಗ್ಗೆ 5ರವರೆಗೆ ಯಾರೂ ಹೊರಗೆ ಬರಬಾರದು ಎಂಬ ಸುದ್ದಿ ಸಂಸ್ಥೆಯೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಅದು ಶುದ್ಧ ಸುಳ್ಳು ಎಂದು ದಕ್ಷಿಣ ಕನ್ನಡ ಜಿಲ್ಲಾಡಳಿತ ಸ್ಪಷ್ಟಪಡಿಸಿದೆ.
ಅಲ್ಲದೆ, ಈ ರೀತಿಯಲ್ಲಿ ಸಾರ್ವಜನಿಕರಿಗೆ ತಪ್ಪು ಸಂದೇಶಗಳನ್ನು ಹರಿಬಿಡುತ್ತಿರುವ ಸಾಮಾಜಿಕ ಜಾಲತಾಣಗಳ ವಿರುದ್ಧ ಕ್ರಮ ಜರುಗಿಸಲು ಈಗಾಗಲೇ ಜಿಲ್ಲಾಧಿಕಾರಿಗಳಿಗೂ ಸೂಚನೆ ನೀಡಲಾಗಿದೆ.