ಮಂಗಳೂರು: ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಂದಿನಿಂದ ವಿದೇಶದಿಂದ ಬರುವ ಪ್ರಯಾಣಿಕರಿಗೆ ಸ್ಟ್ಯಾಂಪಿಂಗ್ ಸೀಲ್ ಹಾಕಲಾಗುತ್ತಿದೆ.
ಕೇಂದ್ರ ಸರ್ಕಾರದ ನಿರ್ದೇಶನದಂತೆ ಕೈಗೆ ಸ್ಟ್ಯಾಂಪಿಂಗ್ ಮಾಡಲಾಗುತ್ತದೆ. ಅಲ್ಲದೇ, ವಿದೇಶದಿಂದ ಬರುವ ಪ್ರಯಾಣಿಕರು ಆರೋಗ್ಯವಾಗಿದ್ದರೂ 14 ದಿನ ಹೋಮ್ ಕ್ವಾರಂಟೈನ್ ಆಗಿ ಮನೆಯಲ್ಲಿ ವೈದ್ಯಕೀಯ ನಿಗಾ ಇರಿಸಲಾಗುತ್ತಿದೆ.
ಇಂದು ಬೆಳಗ್ಗೆ ಬಂದ ವಿದೇಶಿ ಪ್ರಯಾಣಿಕರಿಗೆ ಮತದಾನದ ವೇಳೆ ಬೆರಳಿಗೆ ಹಾಕುವಂತೆ ಶಾಯಿಯನ್ನು ಹಾಕಲಾಗಿತ್ತು. ಸಂಜೆಯಿಂದ ಸ್ಟ್ಯಾಂಪಿಂಗ್ ಒತ್ತಲಾಗುತ್ತಿದೆ.