ಮಂಗಳೂರು: ಕೋವಿಡ್ -19 ಸೋಂಕು ತಗುಲಿ ತೀವ್ರ ಉಸಿರಾಟದ ಸಮಸ್ಯೆಯಿಂದ ಸಾವನ್ನಪ್ಪಿದ್ದ ಬಂಟ್ವಾಳದ ಮಹಿಳೆಯ ಪತಿ ಮತ್ತು ಮಕ್ಕಳ ವರದಿ ನೆಗೆಟಿವ್ ಬಂದಿದೆ.
ಈಟಿವಿ ಭಾರತದೊಂದಿಗೆ ಮಾತನಾಡಿದ ದ.ಕ ಜಿಲ್ಲಾ ಆರೋಗ್ಯಾಧಿಕಾರಿ ರಾಮಚಂದ್ರ ಬಾಯರಿ, ಮೃತ ಮಹಿಳೆಯ ಪತಿ ಮತ್ತು ಇಬ್ಬರು ಮಕ್ಕಳ ಗಂಟಲು ದ್ರವದ ವರದಿ ನೆಗೆಟಿವ್ ಬಂದಿದೆ ಎಂದು ತಿಳಿಸಿದ್ದಾರೆ.
ಮೃತ ಸೋಂಕಿತ ಮಹಿಳೆಯ ಅತ್ತೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಅವರಿಗೆ ಉಸಿರಾಟದ ತೊಂದರೆ ಕಾಣಿಸಿಕೊಂಡ ಕಾರಣ ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತ ಮಹಿಳೆಯ ನೆರೆ ಮನೆಯ ಮಹಿಳೆಗೆ ಕೋವಿಡ್-19 ಇರುವುದು ದೃಢಪಟ್ಟಿದ್ದು, ಅವರಿಗೂ ಸಹ ಮಂಗಳೂರಿನ ವೆನ್ಲಾಕ್ ಆಸ್ಪತ್ರೆಯ ಐಸಿಯು (ತೀವ್ರ ನಿಗಾ ಘಟಕ) ದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.