ಮಂಗಳೂರು : ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ 10.62 ಲಕ್ಷ ರೂಪಾಯಿ ಮೌಲ್ಯದ ಚಿನ್ನವನ್ನು ಮಂಗಳೂರು ಕಸ್ಟಮ್ಸ್ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ.
ಕೇರಳದ ಕಾಸರಗೋಡು ಮೂಲದ ಪ್ರಯಾಣಿಕ ಚಿನ್ನವನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ. ಈತ ದುಬೈನಿಂದ ರವಿವಾರ ರಾತ್ರಿ ಮಂಗಳೂರು ತಲುಪಿದ್ದ. ಈ ವೇಳೆ ಅಧಿಕಾರಿಗಳು ತಪಾಸಣೆ ನಡೆಸಿದಾಗ, ಜ್ಯೂಸರ್ ನಲ್ಲಿ ಅಡಗಿಸಿಡಲಾಗಿದ್ದ ಚಿನ್ನ ಪತ್ತೆಯಾಗಿದೆ.
ಬಂಧಿತನಿಂದ ಒಟ್ಟು 199 ಗ್ರಾಂ ಚಿನ್ನವನ್ನು ವಶಪಡಿಕೊಳ್ಳಲಾಗಿದ್ದು, ಇದರ ಮೌಲ್ಯ ರೂ. 10,62,660 ಎಂದು ಅಂದಾಜಿಸಲಾಗಿದೆ. ಅಕ್ರಮವಾಗಿ ಚಿನ್ನ ಸಾಗಿಸುತ್ತಿದ್ದ ಆರೋಪಿಯನ್ನು ವಶಕ್ಕೆ ಪಡೆದ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ.
ಓದಿ : ಡಿಕೆಶಿ ನಿಂದಿಸಿದ್ದ ಆರೋಪಿಗೆ 2 ವರ್ಷ ಜೈಲು ಶಿಕ್ಷೆ, ದಂಡ ವಿಧಿಸಿದ ಕೋರ್ಟ್