ETV Bharat / city

ಬ್ರಹ್ಮಶ್ರೀ ನಾರಾಯಣ ಗುರುಗಳ ಸ್ತಬ್ಧಚಿತ್ರ ನಿರಾಕರಣೆ ಖಂಡಿಸಿ ದಕ್ಷಿಣ ಕನ್ನಡ ಕಾಂಗ್ರೆಸ್​​ ಸ್ವಾಭಿಮಾನ ನಡಿಗೆ

ಬ್ರಹ್ಮಶ್ರೀ ನಾರಾಯಣ ಗುರು ಸ್ತಬ್ಧಚಿತ್ರ ನಿರಾಕರಣೆ ಹಿನ್ನೆಲೆಯಲ್ಲಿ ಮಂಗಳೂರಿನಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್​ನಿಂದ ಸ್ವಾಭಿಮಾನಿ ನಡಿಗೆ ಹಮ್ಮಿಕೊಳ್ಳಲಾಗಿದ್ದು, ಸಂಜೆ ವೇಳೆಗೆ ಅಂತ್ಯಗೊಳ್ಳಲಿದೆ..

Dakshina kannada  congress protest over brahmashri narayanaguru tableau
ಬ್ರಹ್ಮಶ್ರೀ ನಾರಾಯಣ ಗುರುಗಳ ಸ್ತಬ್ಧಚಿತ್ರ ನಿರಾಕರಣೆ ಖಂಡಿಸಿ ದಕ್ಷಿಣ ಕನ್ನಡ ಕಾಂಗ್ರೆಸ್​​ ಸ್ವಾಭಿಮಾನ ನಡಿಗೆ
author img

By

Published : Jan 26, 2022, 2:27 PM IST

ಮಂಗಳೂರು : ದೆಹಲಿಯ ಗಣರಾಜ್ಯೋತ್ಸವ ಪರೇಡ್​​ನಲ್ಲಿ ಬ್ರಹ್ಮಶ್ರೀ ನಾರಾಯಣ ಗುರು ಸ್ತಬ್ಧಚಿತ್ರ ನಿರಾಕರಣೆ ಹಿನ್ನೆಲೆಯಲ್ಲಿ ಮಂಗಳೂರಿನಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್​ನಿಂದ ಸ್ವಾಭಿಮಾನಿ ನಡಿಗೆಗೆ ಚಾಲನೆ ದೊರಕಿತು.

ಮಂಗಳೂರಿನ ಬ್ರಹ್ಮಬೈದರ್ಕಳ ಗರಡಿಯಲ್ಲಿ ಚಾಲನೆ ದೊರಕಿದ್ದು, ಅಲ್ಲಿಂದ ಹೊರಟಿರುವ ಜಾಥಾ ಪಂಪ್‌ವೆಲ್, ನಂತೂರು, ಕುಲಶೇಖರ ಸೇರಿ ನಗರದ ವಿವಿಧೆಡೆ ಈ ಜಾಥಾ ಸಂಚಾರ ನಡೆಸಲಿದೆ. ಈ ಜಾಥಾ ಸಂಜೆ 4 ಗಂಟೆಗೆ ಉರ್ವ ಮೈದಾನಕ್ಕೆ ಆಗಮಿಸಲಿದ್ದು, ಬಳಿಕ ಅಲ್ಲಿಂದ ಕುದ್ರೋಳಿ ಕ್ಷೇತ್ರಕ್ಕೆ ಕಾಲ್ನಡಿಗೆ ಜಾಥಾದ ಮೂಲಕ ತೆರಳಲಿದೆ.

ದಕ್ಷಿಣ ಕನ್ನಡ ಕಾಂಗ್ರೆಸ್​ನಿಂದ ಸ್ವಾಭಿಮಾನ ನಡಿಗೆ

ನಿಮ್ಮ ಸೂಕ್ತ ಸಂಗಾತಿ ಹುಡುಕುತ್ತಿರುವಿರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ ನೋಂದಣಿ ಉಚಿತ

ಅಲ್ಲದೆ ಮಧ್ಯಾಹ್ನ ಮೂರು ಗಂಟೆಗೆ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಬಿಲ್ಲವ ಸಂಘಟನೆಗಳ ವತಿಯಿಂದ ಕೇಂದ್ರದ ಮಾಜಿ ಸಚಿವ ಬಿ.ಜನಾರ್ದನ ಪೂಜಾರಿಯವರ ನೇತೃತ್ವದಲ್ಲಿ ಸ್ವಾಭಿಮಾನ ಜಾಥಾ ನಡೆಯಲಿದೆ. ಈ ಜಾಥಾವು ಮಂಗಳೂರಿನ ಬ್ರಹ್ಮಬೈದರ್ಕಳ ಗರಡಿಯಲ್ಲಿ ಚಾಲನೆ ದೊರಕಿ, ಕುದ್ರೋಳಿ ಕ್ಷೇತ್ರದಲ್ಲಿ ಅಂತ್ಯಗೊಳ್ಳಲಿದೆ.

ಇದನ್ನೂ ಓದಿ: Republic Day: ಗಣರಾಜ್ಯೋತ್ಸವ ಪರೇಡ್​ನಲ್ಲಿ ಗಮನಸೆಳೆದ ಕರ್ನಾಟಕದ ಸ್ತಬ್ಧಚಿತ್ರ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.