ಮಂಗಳೂರು: ಲಾಕ್ಡೌನ್ನಿಂದ ಸ್ತಬ್ದಗೊಂಡಿದ್ದ ಜನಜೀವನ ಅನ್ಲಾಕ್ ಬಳಿಕ ಸಹಜ ಸ್ಥಿತಿಗೆ ಮರಳುತ್ತಿದೆ. ಆದರೆ, ಜನರು ಕೊರೊನಾ ಮಾರ್ಗಸೂಚಿಗಳನ್ನು ಪಾಲಿಸದ ಕಾರಣ ಸೋಂಕಿತರ ಸಂಖ್ಯೆ ಗಣನೀಯವಾಗಿ ಏರುತ್ತಿದೆ. ಈ ನಿಟ್ಟಿನಲ್ಲಿ ಎಚ್ಚರ ಅಗತ್ಯ.
ಲಾಕ್ಡೌನ್ನಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ಕಡಿಮೆಯೇ ಇದ್ದವು. ಆದರೆ, ಲಾಕ್ಡೌನ್ ಸಡಿಲಗೊಳ್ಳುತ್ತಿದ್ದಂತೆ ಒಂದೇ ಸಮನೆ ಏರಿದವು. ಅದಕ್ಕೆ ಜನ ಸಂಚಾರ ಹೆಚ್ಚಾಗಿದ್ದೇ ಕಾರಣ. ಹೀಗಾಗಿ, ಓಡಾಡುವಾಗ ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ ಕಾಪಾಡುವುದು ಮತ್ತು ಸ್ಯಾನಿಟೈಸರ್ ಬಳಸುವುದು ಬಹಳ ಮುಖ್ಯ.
ಸಾರ್ವಜನಿಕ ಸಾರಿಗೆಗಳಲ್ಲಿ ಓಡಾಟ ಮತ್ತು ಸಮಾರಂಭಗಳಲ್ಲಿ ಭಾಗವಹಿಸುವುದು, ಜನರ ಗುಂಪುಗೂಡುವಿಕೆ ಮಾಡಬಾರದು. ಸಾರ್ವಜನಿಕ ಸ್ಥಳಗಳಲ್ಲಿ ಸಾಮಾಜಿಕ ಅಂತರ ಕಟ್ಟುನಿಟ್ಟಾಗಿ ಪಾಲಿಸಿ ಎಂದು ವೈದ್ಯರು ಸಲಹೆ ನೀಡುತ್ತಾರೆ.
ಆದರೆ, ಜನರು ಕ್ಯಾರೇ ಎನ್ನುತ್ತಿಲ್ಲ. ಹೀಗಾಗಿ, ಸಾರ್ವಜನಿಕರೇ ಪರಿಸ್ಥಿತಿಯನ್ನು ಮನವರಿಕೆ ಮಾಡಿಕೊಂಡು ಸರ್ಕಾರ ಸೂಚಿಸಿರುವ ಕೊರೊನಾ ನಿಯಮಗಳನ್ನು ಪಾಲಿಸಬೇಕಿದೆ.