ಮಂಗಳೂರು : ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಅವರದ್ದು ಎನ್ನಲಾದ ಆಡಿಯೋ ನಕಲಿ ಎಂದು ಆರೋಪಿಸಿ ಈ ಕುರಿತು ತನಿಖೆ ನಡೆಸುವಂತೆ ದಕ್ಷಿಣ ಕನ್ನಡ ಜಿಲ್ಲೆಯ ಶಾಸಕರು ಪೊಲೀಸ್ ಕಮಿಷನರ್ಗೆ ದೂರು ಸಲ್ಲಿಸಿದ್ದಾರೆ.
ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ ಕಾಮತ್, ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್, ಮೂಡಬಿದ್ರೆ ಶಾಸಕ ಉಮಾನಾಥ್ ಕೋಟ್ಯಾನ್, ಪುತ್ತೂರು ಶಾಸಕ ಸಂಜೀವ ಮಠಂದೂರು, ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಮತ್ತು ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ್ ಅವರು ಮಂಗಳೂರು ನಗರ ಪೊಲೀಸ್ ಆಯುಕ್ತ ಶಶಿಕುಮಾರ್ಗೆ ದೂರು ನೀಡಿ, ಆಡಿಯೋ ಸತ್ಯಾಸತ್ಯತೆ ಬಯಲಿಗೆಳೆಯುವಂತೆ ಒತ್ತಾಯಿಸಿದ್ದಾರೆ.
ಪೊಲೀಸ್ ಕಮಿಷನರ್ ಕಚೇರಿಗೆ ಆಗಮಿಸಿದ ಐವರು ಶಾಸಕರು, ವೈರಲ್ ಆಡಿಯೋ ನಕಲಿಯಾಗಿದೆ. ಆಡಿಯೋ ಬಿಡುಗಡೆ ಮಾಡಿದವರು ಮತ್ತು ಸೃಷ್ಟಿಸಿದವರನ್ನು ಶೀಘ್ರವೇ ಬಂಧಿಸುವಂತೆ ಆಗ್ರಹಿಸಿದರು.