ETV Bharat / city

ಪಿಯುಸಿ ರಿಸಲ್ಟ್ : ಉಡುಪಿಯೊಂದಿಗೆ ಪ್ರಥಮ ಸ್ಥಾನ ಹಂಚಿಕೊಂಡ ದಕ್ಷಿಣ ಕನ್ನಡ

ಮಂಗಳೂರಿನ ವಿಕಾಸ್ ಕಾಲೇಜಿನ ವಾಣಿಜ್ಯ ವಿಭಾಗದ ವಿದ್ಯಾರ್ಥಿನಿ ಅಪೂರ್ವ 594 ಅಂಕ ಪಡೆದಿದ್ದು, ಜಿಲ್ಲೆಗೆ ಪ್ರಥಮ ಸ್ಥಾನ ಪಡೆದಿದ್ದಾರೆ. ವಾಣಿಜ್ಯ ವಿಭಾಗದಲ್ಲಿ ಅವರು ರಾಜ್ಯಕ್ಕೆ ನಾಲ್ಕನೇ ಸ್ಥಾನ ಪಡೆದಿದ್ದಾರೆ. ಮಂಗಳೂರು ಬಾಸ್ಕೋಸ್ ಕಾಲೇಜಿನ ವಿದ್ಯಾರ್ಥಿನಿ ಪ್ರಥ್ವಿ ವಿಜ್ಞಾನ ವಿಭಾಗದಲ್ಲಿ 592 ಅಂಕ ಪಡೆದು ರಾಜ್ಯದಲ್ಲಿ 5ನೇ ಸ್ಥಾನ ಪಡೆದಿದ್ದಾರೆ..

PU results
ಪಿಯುಸಿ
author img

By

Published : Jul 14, 2020, 3:34 PM IST

ಮಂಗಳೂರು: ಶೈಕ್ಷಣಿಕ ಕ್ಷೇತ್ರದಲ್ಲಿ ಮುಂದಿರುವ ದಕ್ಷಿಣ ಕನ್ನಡ ಜಿಲ್ಲೆಯು, ಇಂದು ಪ್ರಕಟಗೊಂಡ ಪಿಯುಸಿ ಫಲಿತಾಂಶದಲ್ಲಿ ಮೊದಲ ಸ್ಥಾನವನ್ನು ಉಡುಪಿ ಜಿಲ್ಲೆಯೊಂದಿಗೆ ಹಂಚಿಕೊಂಡಿದೆ.

ಅವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ ಜಿಲ್ಲೆ ಮತ್ತು ಉಡುಪಿ ಶೇ.90.71 ಫಲಿತಾಂಶ ಪಡೆದು ಮೊದಲ ಸ್ಥಾನ ಹಂಚಿಕೊಂಡಿದೆ. ಕಳೆದ ಬಾರಿ ದಕ್ಷಿಣ ಕನ್ನಡ ಜಿಲ್ಲೆ 90.91 ಶೇ. ಫಲಿತಾಂಶ ಪಡೆದು ದ್ವಿತೀಯ ಸ್ಥಾನ ಪಡೆದಿತ್ತು. ಈ ಬಾರಿ ಶೇಕಡಾವಾರು ಫಲಿತಾಂಶದಲ್ಲಿ ಕಡಿಮೆಯಾದ್ರೂ ಎರಡೂ ಜಿಲ್ಲೆಗಳು ಮೊದಲ ಸ್ಥಾನ ಪಡೆದಿವೆ.

PU results
ಉಡುಪಿಯೊಂದಿಗೆ ಪ್ರಥಮ ಸ್ಥಾನ ಹಂಚಿಕೊಂಡ ದಕ್ಷಿಣ ಕನ್ನಡ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 34,287 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, ಅದರಲ್ಲಿ 29,494 ವಿದ್ಯಾರ್ಥಿಗಳು ತೇರ್ಗಡೆ ಯಾಗಿದ್ದಾರೆ.

ವಿದ್ಯಾರ್ಥಿನಿಯರ ಮೇಲುಗೈ : ಫಲಿತಾಂಶದಲ್ಲಿ ವಿದ್ಯಾರ್ಥಿನಿಯರೇ ಮೇಲುಗೈ ಸಾಧಿಸಿದ್ದಾರೆ. ಪರೀಕ್ಷೆಗೆ ಹಾಜರಾದ 17,189 ವಿದ್ಯಾರ್ಥಿನಿಯರಲ್ಲಿ 90.53 ಶೇ. ವಿದ್ಯಾರ್ಥಿನಿಯರು ತೇರ್ಗಡೆ ಹೊಂದಿದ್ದಾರೆ. 17,098 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, ಅದರಲ್ಲಿ 81.49 ಶೇ. ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ.

ಮಂಗಳೂರಿನ ವಿಕಾಸ್ ಕಾಲೇಜಿನ ವಾಣಿಜ್ಯ ವಿಭಾಗದ ವಿದ್ಯಾರ್ಥಿನಿ ಅಪೂರ್ವ 594 ಅಂಕ ಪಡೆದಿದ್ದು, ಜಿಲ್ಲೆಗೆ ಪ್ರಥಮ ಸ್ಥಾನ ಪಡೆದಿದ್ದಾರೆ. ವಾಣಿಜ್ಯ ವಿಭಾಗದಲ್ಲಿ ಅವರು ರಾಜ್ಯಕ್ಕೆ ನಾಲ್ಕನೇ ಸ್ಥಾನ ಪಡೆದಿದ್ದಾರೆ. ಮಂಗಳೂರು ಬಾಸ್ಕೋಸ್ ಕಾಲೇಜಿನ ವಿದ್ಯಾರ್ಥಿನಿ ಪ್ರಥ್ವಿ ವಿಜ್ಞಾನ ವಿಭಾಗದಲ್ಲಿ 592 ಅಂಕ ಪಡೆದು ರಾಜ್ಯದಲ್ಲಿ 5ನೇ ಸ್ಥಾನ ಪಡೆದಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.