ETV Bharat / city

ಬಹುಗ್ರಾಮ ಕುಡಿಯುವ ನೀರಿನ ಯೋಜನೆಗೆ ದಕ್ಷಿಣ ಕನ್ನಡ ಮೊದಲ ಆದ್ಯತೆ : ಈಶ್ವರಪ್ಪ - ಕೆ ಎಸ್​ ಈಶ್ವರಪ್ಪ ಸುದ್ದಿ

ದಕ್ಷಿಣ ಕನ್ನಡ ಜಿಲ್ಲೆಗೆ ಬೇಕಾದ ಬಹುಗ್ರಾಮ ಕುಡಿಯುವ ನೀರಿನ ಯೋಜನೆಯ ಬಗ್ಗೆ ಚರ್ಚೆ ಮಾಡಿ ನನಗೆ ತಿಳಿಸಿದರೆ, ಬಹುಗ್ರಾಮ ಕುಡಿಯುವ ನೀರಿನ ಯೋಜನೆಗೆ ಮೊದಲನೆಯ ಆದ್ಯತೆ ಈ ಜಿಲ್ಲೆಗೆ ನೀಡುತ್ತೇನೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದ್ದಾರೆ.

ಕೆ.ಎಸ್.ಈಶ್ವರಪ್ಪ ಮಾತು
author img

By

Published : Nov 9, 2019, 6:12 AM IST

ಮಂಗಳೂರು: ಬಹುಗ್ರಾಮ ಕುಡಿಯುವ ನೀರಿನ ಯೋಜನೆ ವಿಚಾರವಾಗಿ ಮೊದಲನೆಯ ಆದ್ಯತೆ ದಕ್ಷಿಣ ಕನ್ನಡ ಜಿಲ್ಲೆಗೆ ನೀಡುತ್ತೇನೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದ್ದಾರೆ.

ದ.ಕ ಗ್ರಾಪಂ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು ಹಾಗೂ ಪಿಡಿಒ ಅಧಿಕಾರಿಗಳ ಚಿಂತನ-ಮಂಥನ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಬಹುಗ್ರಾಮ ಕುಡಿಯುವ ನೀರಿನ ಯೋಜನೆಗೆ ಹೆಚ್ಚಿನ ಒತ್ತು ನೀಡಲು ರಾಜ್ಯ ಸರ್ಕಾರ ತೀರ್ಮಾನಿಸಿದೆ. ನರೇಂದ್ರ ಮೋದಿಯವರು ಕುಡಿಯುವ ನೀರಿಗಾಗಿ ಪ್ರತಿ ಮನೆ‌-ಮನೆಗೂ ನಳ್ಳಿ ವ್ಯವಸ್ಥೆ ಮಾಡಬೇಕೆಂದು ಚಿಂತನೆ ನಡೆಸುತ್ತಿದ್ದಾರೆ. ಆ ನಿಟ್ಟಿನಲ್ಲಿಯೂ ನಾವು ಮುಂದುವರಿಯುತ್ತಿದ್ದೇವೆ ಎಂದು ಹೇಳಿದರು.

ಕೆ.ಎಸ್.ಈಶ್ವರಪ್ಪ ಮಾತು

ಜಿಲ್ಲೆಯ ಅನೇಕ ಗ್ರಾಮಗಳಲ್ಲಿ ಸ್ಮಶಾನಗಳ ಕೊರತೆಯಿದೆ. ಆದ್ದರಿಂದ ತಾಪಂ, ಗ್ರಾಪಂ, ಜಿಪಂ ಸದಸ್ಯರು ಸ್ಮಶಾನಗಳಿಗೆ ಯೋಗ್ಯವಾದ ಸ್ಥಳಗಳನ್ನು ಸೂಚಿಸಿದಲ್ಲಿ ಅದಕ್ಕೆ ಬೇಕಾದ ಅನುದಾನವನ್ನು ರಾಜ್ಯ ಸರ್ಕಾರ ವ್ಯವಸ್ಥೆ ಮಾಡುತ್ತದೆ. ಸ್ವಚ್ಛ ಭಾರತದ ಮೂಲಕ ಘನ ತ್ಯಾಜ್ಯ ನಿರ್ವಹಣೆಗೆ ಕ್ಲಸ್ಟರ್ ಮೂಲಕ ಏಳೆಂಟು ಗ್ರಾಪಂ ಸೇರಿ ಯುನಿಟ್ ಮಾಡಿದರೆ, ಸರ್ಕಾರ ಇದರ ನಿರ್ವಹಣೆಗೆ ಬೇಕಾದ ಅನುದಾನವನ್ನು ಒದಗಿಸುತ್ತದೆ ಎಂದು ಹೇಳಿದರು.

ವಿದ್ಯುತ್ ಕೊರತೆ ನಿವಾರಣೆಗೆ ಸೋಲಾರ್ ಮೂಲಕ ವಿದ್ಯುತ್ ಉತ್ಪಾದನಾ ಘಟಕಗಳನ್ನು ನಿರ್ಮಾಣ ಮಾಡುವ ಚಿಂತನೆಯನ್ನು ರಾಜ್ಯ ಸರ್ಕಾರ ಕೈಗೆತ್ತಿಕೊಂಡಿದೆ. ಅದಕ್ಕೆ ಗ್ರಾ.ಪಂಗೆ ಸರ್ಕಾರದಿಂದ ಏನು ಸಹಕಾರ ಬೇಕೋ ಅದನ್ನು ನಾವು ಕೊಡುತ್ತೇವೆ. ಇದಕ್ಕೆ ಗ್ರಾಪಂ ಅಧ್ಯಕ್ಷರು ನಿಮ್ಮ ಸಮಿತಿಯ ಸದಸ್ಯರನ್ನು ಕರೆದು ಸಭೆ ನಡೆಸಿ ಅನುದಾನವನ್ನು ಸರಿಯಾಗಿ ವಿನಿಯೋಗಿಸಿ ಎಂದು ಹೇಳಿದರು.

Intro:ಮಂಗಳೂರು: ದ.ಕ.ಜಿಲ್ಲೆಗೆ ಬೇಕಾದ ಬಹುಗ್ರಾಮ ಕುಡಿಯುವ ನೀರಿನ ಯೋಜನೆಯ ಬಗ್ಗೆ ಚರ್ಚೆ ಮಾಡಿ ನನಗೆ ತಿಳಿಸಿದರೆ, ಬಹುಗ್ರಾಮ ಕುಡಿಯುವ ನೀರಿನ ಯೋಜನೆಗೆ ಮೊದಲನೆಯ ಆದ್ಯತೆ ಈ ಜಿಲ್ಲೆಗೆ ನೀಡುತ್ತೇನೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದರು.

ದ.ಕ.ಜಿಪಂ, ಬಂಟ್ವಾಳ ತಾಪಂ ಆಶ್ರಯದಲ್ಲಿ ನಡೆದ ದ.ಕ.ಗ್ರಾಪಂ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು ಹಾಗೂ ಪಿಡಿಒ ಅಧಿಕಾರಿಗಳ ಚಿಂತನ-ಮಂಥನ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿ, ಬಹುಗ್ರಾಮ ಕುಡಿಯುವ ನೀರಿನ ಯೋಜನೆಗೆ ಹೆಚ್ಚಿನ ಒತ್ತು ನೀಡಲು ರಾಜ್ಯ ಸರಕಾರ ತೀರ್ಮಾನ ಮಾಡಿದೆ. ನರೇಂದ್ರ ಮೋದಿಯವರು ಕುಡಿಯುವ ನೀರಿಗಾಗಿ ಪ್ರತೀ ಮನೆ‌ಮನೆಗೂ ನಳ್ಳಿ ವ್ಯವಸ್ಥೆ ಮಾಡಬೇಕೆಂದು ಚಿಂತನೆ ನಡೆಸುತ್ತಿದ್ದಾರೆ. ಆ ನಿಟ್ಟಿನಲ್ಲಿಯೂ ನಾವು ಮುಂದುವರಿಯುತ್ತಿದ್ದೇವೆ ಎಂದು ಹೇಳಿದರು.

Body:ಜಿಲ್ಲೆಯ ಅನೇಕ ಗ್ರಾಮಗಳಲ್ಲಿ ಸ್ಮಶಾನಗಳ ಕೊರತೆಯಿದೆ. ಆದ್ದರಿಂದ ತಾಪಂ, ಗ್ರಾಪಂ, ಜಿಪಂ ಸದಸ್ಯರು ಸ್ಮಶಾನಗಳಿಗೆ ಯೋಗ್ಯವಾದ ಸ್ಥಳಗಳನ್ನು ಸೂಚಿಸಿದಲ್ಲಿ ಅದಕ್ಕೆ ಬೇಕಾದ ಅನುದಾನವನ್ನು ರಾಜ್ಯ ಸರಕಾರ ವ್ಯವಸ್ಥೆ ಮಾಡುತ್ತದೆ. ಸ್ವಚ್ಚ ಭಾರತದ ಮೂಲಕ ಘನ ತ್ಯಾಜ್ಯ ನಿರ್ವಹಣೆಗೆ ಕ್ಲಸ್ಟರ್ ಮೂಲಕ ಎಳೆಂಟು ಗ್ರಾಪಂ ಸೇರಿ ಯುನಿಟ್ ಮಾಡಿದರೆ, ಸರಕಾರ ಇದರ ನಿರ್ವಹಣೆ ಗೆ ಬೇಕಾದ ಅನುದಾನವನ್ನು ಒದಗಿಸುತ್ತದೆ ಎಂದು ಹೇಳಿದರು.

ವಿದ್ಯುತ್ ಕೊರತೆ ನಿವಾರಣೆಗೆ ಸೋಲಾರ್ ಮೂಲಕ ವಿದ್ಯುತ್ ಉತ್ಪಾದನಾ ಘಟಕಗಳನ್ನು ನಿರ್ಮಾಣ ಮಾಡುವ ಚಿಂತನೆಯನ್ನು ರಾಜ್ಯ ಸರಕಾರ ಕೈಗೆತ್ತಿಕೊಂಡಿದೆ. 6,021 ಗ್ರಾಮ ಪಂಚಾಯತ್ ಗೆ ಸೋಲಾರ್ ಮೂಲಕವೇ ವಿದ್ಯುತ್ ಸರಬರಾಜು ಮಾಡುವ ಯೋಜನೆಯನ್ನು ಈ ವರ್ಷದಲ್ಲೇ ಪೂರೈಸಬೇಕೆಂಬ ಪ್ರಯತ್ನ ಮಾಡುತ್ತಿದ್ದೇವೆ. ಅದಕ್ಕೆ ಗ್ರಾಪಂಗೆ ಸರಕಾರದಿಂದ ಏನು ಸಹಕಾರ ಬೇಕೋ ಅದನ್ನು ನಾವು ಕೊಡುತ್ತೇವೆ. ಇದಕ್ಕೆ ಗ್ರಾಪಂ ಅಧ್ಯಕ್ಷರು ನಿಮ್ಮ ಸಮಿತಿಯ ಸದಸ್ಯರನ್ನು ಕರೆದು ಸಭೆ ನಡೆಸಿ ಅನುದಾನವನ್ನು ಸರಿಯಾಗಿ ವಿನಿಯೋಗಿಸಿ ಎಂದು ಹೇಳಿದರು.

Conclusion:ಕಾರ್ಯಕ್ರಮಕ್ಕೆ ಮೊದಲು ದ.ಕ.ಜಿಪಂ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಮಂಗಳೂರು ಇದರ ವಿಭಾಗ ಸಹಯೋಗದೊಂದಿಗೆ ಪೆರಾಜೆ ಗ್ರಾಪಂ ಗಡಿಯಾರದಲ್ಲಿರುವ ಮಾಣಿ ಮತ್ತು 51 ಜನವಸತಿಗಳ ಬಹುಗ್ರಾಮ ಕುಡಿಯುವ ನೀರಿನ ಘಟಕವನ್ನು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಉದ್ಘಾಟಿಸಿದರು.

Reporter_Vishwanath Panjimogaru
ETV Bharat Logo

Copyright © 2025 Ushodaya Enterprises Pvt. Ltd., All Rights Reserved.