ಪುತ್ತೂರು(ದಕ್ಷಿಣ ಕನ್ನಡ): ಕಳೆದ 15 ವರ್ಷಗಳಿಂದ ಬೀದಿ ನಾಯಿಗಳ ಅನ್ನದಾತರಾಗಿ ದಾನಿಯೊಬ್ಬರು ಇದೀಗ ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದಾರೆ. ಪೇಪರ್ ಏಜೆಂಟ್ ಆಗಿಯೂ, ಜನಪ್ರತಿನಿಧಿಯೂ ಆಗಿದ್ದ ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರಿನ ರಾಜೇಶ್ ಬನ್ನೂರು ಇದೀಗ ನಾಯಿಗಳ ಆರೈಕೆಗಾಗಿ ದಾನಿಗಳ ಸಹಾಯ ಯಾಚಿಸುತ್ತಿದ್ದಾರೆ.
ಪ್ರತಿ ದಿನವೂ 150 ಕ್ಕೂ ಮಿಕ್ಕಿದ ನಾಯಿಗಳಿಗೆ ಆಹಾರ ಸೇರಿದಂತೆ ಆರೋಗ್ಯವನ್ನೂ ನೋಡಿಕೊಳ್ಳುತ್ತಿರುವ ಇವರು ದಿನವೊಂದಕ್ಕೆ ನಾಯಿಗಳಿಗಾಗಿ 1,500 ರೂಪಾಯಿಗಳನ್ನು ವ್ಯಯಿಸಬೇಕಾದ ಅನಿವಾರ್ಯತೆಯಲ್ಲಿದ್ದಾರೆ. ಕೆಲವು ಪರಿಚಯಸ್ಥರು ರಾಜೇಶ್ ಬನ್ನೂರರ ಈ ಸೇವೆಗೆ ತಮ್ಮ ಕೈಯಲ್ಲಾದ ಮಟ್ಟಿಗೆ ಸಹಕಾರ, ಸಹಾಯವನ್ನೂ ನೀಡುತ್ತಿದ್ದಾರೆ. ಆದರೆ ಹೆಚ್ಚಿನ ಪಾಲನ್ನು ರಾಜೇಶ್ ಬನ್ನೂರು ಸ್ವತಃ ಹೊತ್ತುಕೊಳ್ಳುವುದರಿಂದ ಇದೀಗ ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದಾರೆ.
ಸಾಕು ಪ್ರಾಣಿಗಳನ್ನು ಸಾಕುವ ಜನರ ನಿರ್ಲಕ್ಷ್ಯದಿಂದಾಗಿ ಬೀದಿಗೆ ಬೀಳುವ ನಾಯಿಗಳನ್ನು ಕಂಡು ಕಾಣದಂತೆಯೇ ಇರುವವರು ಹೆಚ್ಚು. ಬೀದಿ ನಾಯಿಗಳ ಬಗ್ಗೆ ಕಾಳಜಿ ರಕ್ಷಿತ್ ಶೆಟ್ಟಿಯವರ ಚಾರ್ಲಿ 777 ಚಿತ್ರದ ಕೊಂಚ ಹೆಚ್ಚಾಗಿದೆ. ಆದರೆ, ಚಾರ್ಲಿ ಸಿನಿಮಾ ಬರುವ ಮೊದಲೇ ಅಂದರೆ ಸುಮಾರು 15 ವರ್ಷಗಳ ಹಿಂದೆಯೇ ಈ ಬೀದಿ ನಾಯಿಗಳನ್ನು ತಮ್ಮ ಮನೆಯ ಸದಸ್ಯರಂತೆ ಕಂಡ ವ್ಯಕ್ತಿ ರಾಜೇಶ್ ಬನ್ನೂರು.
ಪುತ್ತೂರು ಪುರಸಭೆ ಇರುವ ಸಮಯದಲ್ಲಿ ಹಲವು ಬಾರಿ ಪುರಸಭೆ ಸದಸ್ಯರಾಗಿ ಮತ್ತು ಒಂದು ಬಾರಿ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದದ್ದಾರೆ. ಇವರು ತಿರುಗಾಡಿದ ಕಡೆಗಳಲ್ಲೆಲ್ಲಾ ನಾಯಿಗಳ ದಂಡು ಇವರನ್ನು ಸುತ್ತುವರಿಯುತ್ತೆ. ಈ ರೀತಿಯಾದ ಪರಿಚಯ ನಾಯಿಗಳಿಗೆ ಆಹಾರ, ಆರೈಕೆ ನೀಡುವ ತನಕ ಬೆಳೆದಿದೆ. ಸುಮಾರು 15 ವರ್ಷಗಳಿಂದ ಬೆಳೆದು ಬಂದ ಈ ಸ್ನೇಹಾಚಾರವನ್ನು ಬಿಟ್ಟು ಬರಲಾರದಂತಹ ಸಂಕಷ್ಟದಲ್ಲಿ ರಾಜೇಶ್ ಇದೀಗ ಸಿಲುಕಿದ್ದಾರೆ.
ಇದನ್ನೂ ಓದಿ : ಹುಬ್ಬಳ್ಳಿ: ರಸ್ತೆಯೆಲ್ಲ ಗುಂಡಿಮಯ.. ಪಾಲಿಕೆ - ಜನಪ್ರತಿನಿಧಿಗಳ ವಿರುದ್ದ ಜನರಿಂದ ಹಿಡಿಶಾಪ