ETV Bharat / city

ಕೌಟುಂಬಿಕ ಸಮಸ್ಯೆಗೆ ಲಾಕ್‍ಡೌನ್ ವರದಾನ : ಸಿಇಒ ಡಾ. ಸೆಲ್ವಮಣಿ

ಜಿಲ್ಲಾ ನ್ಯಾಯಾಲಯದಲ್ಲಿ ಕೌಟುಂಬಿಕ ದೌರ್ಜನ್ಯ ತಡೆ ಕಾಯ್ದೆಯಡಿ 1,725 ಪ್ರಕರಣ ದಾಖಲಾಗಿವೆ. 1,260 ಇತ್ಯರ್ಥಗೊಂಡಿದ್ದು, 465 ಕೇಸ್‍ ಇತ್ಯರ್ಥಗೊಳ್ಳದೇ ಬಾಕಿ ಇವೆ. ಉಳಿದ ಪ್ರಕರಣಗಳನ್ನ ಆದಷ್ಟು ಬೇಗ ಇತ್ಯರ್ಥಪಡಿಸುವಂತೆ ಅಧಿಕಾರಿಗಳು ಗಮನ ಹರಿಸಬೇಕು..

Dakshinakanda District Panchayat Chief Executive R. Selvamani  Statement
ಕೌಟುಂಬಿಕ ಸಮಸ್ಯೆಗೆ ಲಾಕ್‍ಡೌನ್ ವರದಾನವಾಗಿದೆ: ಡಾ. ಸೆಲ್ವಮಣಿ
author img

By

Published : Sep 7, 2020, 10:18 PM IST

ಮಂಗಳೂರು : ಈ ಕಾಲಘಟ್ಟದಲ್ಲಿ ಅವಿಭಕ್ತ ಕುಟುಂಬಗಳು ಮಾಯವಾಗಿ ವಿಭಕ್ತ ಕುಟುಂಬಗಳಾಗಿವೆ. ಕೋವಿಡ್ ಲಾಕ್​ಡೌನ್​ನಿಂದ ಕುಟುಂಬದ ಎಲ್ಲಾ ಸದಸ್ಯರು ತಿಂಗಳುಗಳ ಕಾಲ ಮನೆಯಲ್ಲಿದ್ದ ಪರಿಣಾಮ ಪತಿ-ಪತ್ನಿಯರು ಪರಸ್ಪರ ಒಬ್ಬರನ್ನೊಬ್ಬರು ಅರ್ಥ ಮಾಡಿಕೊಂಡು ಜೀವನ ಸಾಗಿಸಲು ಸೂಕ್ತ ಅವಕಾಶ ಸಿಕ್ಕಿದಂತಾಗಿದೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಣಾಧಿಕಾರಿ ಡಾ. ಆರ್ ಸೆಲ್ವಮಣಿ ಹೇಳಿದರು.

ದ ಕ ಜಿಲ್ಲಾ ಪಂಚಾಯತ್‍ನಲ್ಲಿ ನಡೆದ ಸಾಂತ್ವನ ಕೇಂದ್ರ ಹಾಗೂ ವರದಕ್ಷಿಣೆ ನಿಷೇಧ ಜಿಲ್ಲಾ ಸಮಿತಿ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಸಾಂತ್ವನ ಕೇಂದ್ರವು ನೊಂದ ಮಹಿಳೆಯರು ತಮ್ಮ ಸಮಸ್ಯೆ ಹೇಳಿಕೊಳ್ಳುವ ಒಂದು ವೇದಿಕೆಯಾಗಿದೆ. ಬಡವರು ಶ್ರೀಮಂತರು ಎನ್ನುವ ಭೇದ-ಭಾವವಿಲ್ಲದೇ ಎಲ್ಲರೂ ತಮ್ಮ ಕೌಟುಂಬಿಕ ಸಮಸ್ಯೆಗಳಿಗೆ ಸಾಂತ್ವನ ಕೇಂದ್ರದಲ್ಲಿ ಪರಿಹಾರ ಪಡೆದುಕೊಳ್ಳುತ್ತಿದ್ದಾರೆ. ಸಾಂತ್ವನ ಕೇಂದ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿಗೆ ವೇತನ ಬಾಕಿಯಿದ್ದು, ವೇತನ ಬಿಡುಗಡೆ ಮಾಡುವಂತೆ ಉನ್ನತ ಅಧಿಕಾರಿಗಳಿಗೆ ಮನವಿ ನೀಡಲಾಗುವುದು ಎಂದರು.

ಜಿಲ್ಲಾ ನ್ಯಾಯಾಲಯದಲ್ಲಿ ಕೌಟುಂಬಿಕ ದೌರ್ಜನ್ಯ ತಡೆ ಕಾಯ್ದೆಯಡಿ 1,725 ಪ್ರಕರಣ ದಾಖಲಾಗಿವೆ. 1,260 ಇತ್ಯರ್ಥಗೊಂಡಿದ್ದು, 465 ಕೇಸ್‍ಗಳು ಇತ್ಯರ್ಥಗೊಳ್ಳದೇ ಬಾಕಿ ಇವೆ. ಉಳಿದಿರುವ ಪ್ರಕರಣಗಳನ್ನ ಆದಷ್ಟು ಬೇಗ ಇತ್ಯರ್ಥಪಡಿಸುವಂತೆ ಅಧಿಕಾರಿಗಳು ಗಮನ ಹರಿಸಬೇಕು ಎಂದು ಸೂಚಿಸಿದರು.

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಉಪನಿರ್ದೇಶಕ ಉಸ್ಮಾನ್, ಜಿಲ್ಲಾ ನಿರೂಪಣಾ ಅಧಿಕಾರಿ ಶ್ಯಾಮಲಾ, ವಿವಿಧ ಸಾಂತ್ವನ ಕೇಂದ್ರದ ಮುಖ್ಯಸ್ಥರು ಸಭೆಯಲ್ಲಿದ್ದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.