ETV Bharat / city

ರೋಗಿಗಳಿಂದ ಪಡೆದ ಹೆಚ್ಚುವರಿ ಹಣ ಹಿಂದಿರುಗಿಸಿ: ಖಾಸಗಿ ಆಸ್ಪತ್ರೆಗಳಿಗೆ ದ.ಕ DC ಸೂಚನೆ

author img

By

Published : Aug 8, 2021, 12:09 AM IST

Updated : Aug 8, 2021, 12:29 AM IST

ಆಯುಷ್ಮಾನ್ ಭಾರತ್-ಆರೋಗ್ಯ ಕರ್ನಾಟಕ ಯೋಜನೆಯಡಿ ಸಂತ್ರಸ್ತರು ದಾಖಲಿಸಿರುವ ದೂರುಗಳನ್ನು ಆಲಿಸಿದ ಜಿಲ್ಲಾಧಿಕಾರಿ, ಸಂತ್ರಸ್ತ ರೋಗಿಗಳ ಬ್ಯಾಂಕ್ ಖಾತೆಗೆ ಒಂದು ವಾರದೊಳಗೆ ಹಣ ವರ್ಗಾಯಿಸಿ ಸ್ವೀಕೃತಿ ಪತ್ರವನ್ನು ಜಿಲ್ಲಾಧಿಕಾರಿ ಕಚೇರಿಗೆ ಸಲ್ಲಿಸಲು ಆದೇಶಿಸಿದ್ದಾರೆ.

DC Dr. K.V. Rajendra
ಜಿಲ್ಲಾಧಿಕಾರಿ ಡಾ.ಕೆ.ವಿ. ರಾಜೇಂದ್ರ

ಮಂಗಳೂರು: ದ.ಕ ಜಿಲ್ಲೆಯ ಏಳು ಖಾಸಗಿ ಆಸ್ಪತ್ರೆಗಳು ಆಯುಷ್ಮಾನ್ ಭಾರತ್ ಮತ್ತು ಆರೋಗ್ಯ ಕರ್ನಾಟಕ ಯೋಜನೆಯಡಿ ಹೆಚ್ಚುವರಿ ಹಣ ಪಾವತಿ ಹಾಗೂ ಚಿಕಿತ್ಸೆಗೆ ನಿರ್ಲಕ್ಷ್ಯ ವಹಿಸಿರುವ ಬಗ್ಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿರುವ ದ.ಕ. ಜಿಲ್ಲಾಧಿಕಾರಿ ಡಾ.ಕೆ.ವಿ. ರಾಜೇಂದ್ರ, ಸಂತ್ರಸ್ತರಿಗೆ ಕೂಡಲೇ ಹಣ ಹಿಂದಿರುಗಿಸಲು ಆಸ್ಪತ್ರೆಗಳಿಗೆ ಸೂಚನೆ ನೀಡಿದ್ದಾರೆ.

ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಜಿಲ್ಲಾಮಟ್ಟದ ಕುಂದು ಕೊರತೆ ಪರಿಹಾರ ಸಮಿತಿ ಸಭೆಯಲ್ಲಿ ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಯೋಜನೆಯಡಿ ಸಂತ್ರಸ್ತರು ದಾಖಲಿಸಿರುವ ದೂರುಗಳನ್ನು ಆಲಿಸಿದ ಜಿಲ್ಲಾಧಿಕಾರಿ, ಸಂತ್ರಸ್ತ ರೋಗಿಗಳ ಬ್ಯಾಂಕ್ ಖಾತೆಗೆ ಒಂದು ವಾರದೊಳಗೆ ಹಣ ವರ್ಗಾಯಿಸಿ ಸ್ವೀಕೃತಿ ಪತ್ರವನ್ನು ಜಿಲ್ಲಾಧಿಕಾರಿ ಕಚೇರಿಗೆ ಸಲ್ಲಿಸಲು ಆದೇಶಿಸಿದ್ದಾರೆ.

ನಗರದ ಅಥೆನಾ ಆಸ್ಪತ್ರೆ, ಕೆಎಂಸಿ ಆಸ್ಪತ್ರೆ (ಜ್ಯೋತಿ ಸರ್ಕಲ್), ಎಸ್‌ಸಿಎಸ್ ಆಸ್ಪತ್ರೆ, ಇಂಡಿಯಾನ ಆಸ್ಪತ್ರೆ, ಶ್ರೀನಿವಾಸ ಆಸ್ಪತ್ರೆ, ದೇರಳಕಟ್ಟೆಯ ಕಣಚೂರು ಆಸ್ಪತ್ರೆ, ಕೆ.ಎಸ್. ಹೆಗ್ಡೆ ಆಸ್ಪತ್ರೆಗಳಿಂದ ರೋಗಿಗಳಿಗೆ ಹಣ ಹಿಂದಿರುಗಿಸಲು ಜಿಲ್ಲಾಧಿಕಾರಿ ನಿರ್ದೇಶನ ನೀಡಿದ್ದಾರೆ.

ದ.ಕ. ಜಿಲ್ಲೆಯ ಎಲ್ಲಾ ಖಾಸಗಿ ನೋಂದಾಯಿತ ಆಸ್ಪತ್ರೆಗಳಲ್ಲಿ ರೋಗಿಗಳು ಹಣ ಪಾವತಿ ಮಾಡುವಾಗ ಬಿಲ್ ಪಡೆದುಕೊಳ್ಳುವಂತೆ ಆಸ್ಪತ್ರೆಯ ವಿಚಾರಣಾ ಕೌಂಟರ್ ಹಾಗೂ ಬಿಲ್ಲಿಂಗ್ ಕೌಂಟರ್‌ನಲ್ಲಿ ವಾರ್ಡ್‌ಗಳಲ್ಲಿ ಸ್ಟಿಕ್ಕರ್/ಫ್ಲೆಕ್ಸ್ ಅಳವಡಿಸುವಂತೆ ಆಸ್ಪತ್ರೆಯ ಮುಖ್ಯಸ್ಥರಿಗೆ ಜಿಲ್ಲಾಧಿಕಾರಿ ಸೂಚನೆ ನೀಡಿದರು.

Last Updated : Aug 8, 2021, 12:29 AM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.