ಪುತ್ತೂರು (ದಕ್ಷಿಣ ಕನ್ನಡ): ಶ್ರೀ ಮಹಾಲಿಂಗೇಶ್ವರ ದೇವಳದ ಎದುರಿರುವ ಬಾವಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆಯಾಗಿದೆ. ಶ್ರೀ ಮಹಾಲಿಂಗೇಶ್ವರ ದೇವಳದ ಎದುರು ಭಾಗದ ಬಾವಿಯಲ್ಲಿ ವ್ಯಕ್ತಿಯ ಚಪ್ಪಲಿ, ಬಾವಿ ಪಕ್ಕ ಸ್ಕೂಟರ್ ಪತ್ತೆಯಾದ ಹಿನ್ನೆಲೆ ವ್ಯಕ್ತಿ ಬಾವಿಗೆ ಬಿದ್ದಿರಬಹುದು ಅಥವಾ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂಬ ಶಂಕೆ ವ್ಯಕ್ತಪಡಿಸಿ ಪರಿಶೀಲನೆ ನಡೆಸಲಾಯಿತು. ಬಾವಿಯಲ್ಲಿ ಇಂಟರ್ ನೆಟ್ ಕೇಬಲ್ ಸಂಸ್ಥೆಯ ಮನೋಹರ್ ಪ್ರಭು (50) ಅವರ ಮೃತದೇಹ ಪತ್ತೆಯಾಗಿದೆ.
ಅಗ್ನಿಶಾಮಕ ದಳವರು ಮೃತ ದೇಹವನ್ನು ಬಾವಿಯಿಂದ ಹೊರತೆಗೆದಿದ್ದಾರೆ. ಮೃತದೇಹವನ್ನು ಪುತ್ತೂರು ದರ್ಬೆ ನಿವಾಸಿಯಾಗಿದ್ದ ಮನೋಹರ ಪ್ರಭು ಎಂದು ಗುರುತಿಸಲಾಗಿದೆ.
ಇದನ್ನೂ ಓದಿ: ಎಂಇಎಸ್ ನಿಷೇಧಕ್ಕೆ ಒತ್ತಾಯಿಸಿ ಪ್ರತಿಭಟನೆ: ನಾರಾಯಣಗೌಡ, ಕಾರ್ಯಕರ್ತರು ಪೊಲೀಸ್ ವಶಕ್ಕೆ
ಪುತ್ತೂರು ಅಗ್ನಿಶಾಮಕ ದಳದ ರುಕ್ಮಯ ಗೌಡರವರ ನೇತೃತ್ವದಲ್ಲಿ ಕೃಷ್ಣ ಜಾಲಿಬೇರ, ತೌಸಿಪ್ ಯಾನೆ ಮುಲ್ಲಾ ಅವರು ಮೃತದೇಹವನ್ನು ಬಾವಿಯಿಂದ ಮೇಲಕ್ಕೆತ್ತಿದ್ದಾರೆ. ಮನೋಹರ ಪ್ರಭು ಅವರು ಮಾನಸಿಕವಾಗಿ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಪತ್ನಿ, ಇಬ್ಬರು ಮಕ್ಕಳು ಮತ್ತು ಬಂಧು ಬಳಗವನ್ನು ಅಗಲಿದ್ದಾರೆ. ಪುತ್ತೂರು ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ